ಶನಿವಾರ ಮಧ್ಯರಾತ್ರಿ ತಲಕಾವೇರಿಯಲ್ಲಿ ತೀರ್ಥೋದ್ಭವ
ಮಡಿಕೇರಿ, ಅಕ್ಟೋಬರ್ 17 : ಜೀವನದಿ ಕಾವೇರಿಯ ಉಗಮಸ್ಥಾನ ತಲಕಾವೇರಿಯ ಪವಿತ್ರತೀರ್ಥ ಕುಂಡಿಕೆಯಲ್ಲಿ ಶನಿವಾರ ಮಧ್ಯರಾತ್ರಿ 12.15ಕ್ಕೆ ತೀರ್ಥೋದ್ಭವವಾಗಲಿದ್ದು, ಜಿಲ್ಲಾಡಳಿತದಿಂದ ಸಕಲ ಸಿದ್ಧತೆಯನ್ನು ಮಾಡಲಾಗಿದೆ.
ಈ ಬಾರಿ ಮಧ್ಯರಾತ್ರಿಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಮೈದಳೆಯುವುದರಿಂದ ಬೆಳಕಿನ ವ್ಯವಸ್ಥೆ, ಸಂಚಾರ ವ್ಯವಸ್ಥೆ, ಸ್ವಚ್ಛತೆ, ಸುರಕ್ಷತೆ ಹಾಗೂ ಆರೋಗ್ಯಕ್ಕೆ ಸಂಬಂಧಪಟ್ಟಂತೆ ಸಕಲ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದೆ. [ಕಾವೇರಿ ತೀರ್ಥೋದ್ಭವದ ಪೌರಾಣಿಕ ಹಿನ್ನೆಲೆ]

ಬಂದೋಬಸ್ತ್‌ಗಾಗಿ 700 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, 3 ಡಿವೈಎಸ್‌ಪಿ, 7 ಸರ್ಕಲ್ ಇನ್ಸ್‌ಪೆಕ್ಟರ್, 22 ಪೊಲೀಸ್ ಸಬ್ ಇನ್ಸ್‌ಪೆಕ್ಟರ್, 35 ಸಹಾಯಕ ಸಬ್ ಇನ್ಸ್‌ಪೆಕ್ಟರ್, 110 ಮಂದಿ ಮುಖ್ಯ ಪೇದೆಗಳು, 179 ಸಾಮಾನ್ಯ ಪೊಲೀಸರು, 42 ಮಹಿಳಾ ಪೊಲೀಸರು, 150 ಗೃಹ ರಕ್ಷಕ ದಳದ ಸಿಬ್ಬಂದಿಗಳು, 4 ಜಿಲ್ಲಾ ಮೀಸಲು ಪೊಲೀಸ್ ಪಡೆ, 2 ರಾಜ್ಯ ಮೀಸಲು ಪೊಲೀಸ್ ಪಡೆ, 2 ಅಗ್ನಿಶಾಮಕ ದಳ ಹೀಗೆ ಅಗತ್ಯ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್ ಮಾಹಿತಿ ನೀಡಿದ್ದಾರೆ.
ತಲಕಾವೇರಿ ಜಾತ್ರೆಗೆ ಆಗಮಿಸುವ ಭಕ್ತಾದಿಗಳಿಗೆ ಊಟೋಪಚಾರ ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ. ಮಡಿಕೇರಿ-ಭಾಗಮಂಡಲ-ತಲಕಾವೇರಿಗೆ ಹೋಗಿ ಬರಲು ಅಗತ್ಯ ಬಸ್ ಸೌಲಭ್ಯ, ಭಾಗಮಂಡಲದ ಪ್ರವಾಸಿ ಮಂದಿರದಿಂದ ತಲಕಾವೇರಿ ತನಕ ಸುಮಾರು 12 ಕಿ.ಮೀ.ವರೆಗಿನ ರಸ್ತೆ ಮಾರ್ಗದಲ್ಲಿ ಬೆಳಕು ವ್ಯವಸ್ಥೆ, ತಲಕಾವೇರಿಯಲ್ಲಿ ತೀರ್ಥ ಪಡೆದುಕೊಳ್ಳುವಂತಾಗಲು ಏಕಮುಖವಾಗಿ ಭಕ್ತಾಧಿಗಳು ಹೋಗಲು ಅಗತ್ಯ ಬ್ಯಾರಿಕೇಡ್‌ಗಳ ನಿರ್ಮಾಣ, ತಾತ್ಕಾಲಿಕ ಶೌಚಾಲಯ ಹಾಗೂ ಕುಡಿಯುವ ನೀರು ವ್ಯವಸ್ಥೆ ಮತ್ತಿತರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications