ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾವೇರಿ ವಿವಾದ : ಮಾರ್ಚ್ 7ರಂದು ಸರ್ವಪಕ್ಷ ಸಭೆ

|
Google Oneindia Kannada News

ಬೆಂಗಳೂರು, ಮಾರ್ಚ್ 02 : ಕಾವೇರಿ ನದಿ ನೀರು ಹಂಚಿಕೆ ವಿವಾದದ ಮುಂದಿನ ನಡೆ ಕುರಿತು ಚರ್ಚಿಸಲು ಸರ್ವ ಪಕ್ಷ ಸಭೆ ಕರೆಯಲಾಗಿದೆ. ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ಬಗ್ಗೆ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 7ರಂದು ಸರ್ವ ಪಕ್ಷ ಸಭೆ ಕರೆದಿದ್ದಾರೆ. ಫೆ. 16ರಂದು ಕಾವೇರಿ ವಿವಾದದ ಕುರಿತು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪಿನ ಬಳಿಕ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ.

ಕಾವೇರಿ ವಿವಾದದ ತೀರ್ಪು : ಸರ್ಕಾರದ ಕಿವಿ ಹಿಂಡಿದ ಗೌಡರುಕಾವೇರಿ ವಿವಾದದ ತೀರ್ಪು : ಸರ್ಕಾರದ ಕಿವಿ ಹಿಂಡಿದ ಗೌಡರು

ತೀರ್ಪು ಪ್ರಕಟಿಸಿರುವ ಕೋರ್ಟ್ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿಯನ್ನು 6 ವಾರದಲ್ಲಿ ರಚನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಇದನ್ನು ತಡೆಯಲು ಸರ್ಕಾರದ ನಡೆ ಏನು? ಎಂಬುದು ಇನ್ನೂ ನಿಗೂಢವಾಗಿದೆ.

Siddaramaiah

ಅತ್ತ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿಯನ್ನು ರಚನೆ ಮಾಡಬೇಕು ಎಂದು ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಕಾವೇರಿ ನಿರ್ವಹಣಾ ಮಂಡಳಿ ರಚನೆ, ಕೇಂದ್ರದ ಅಂಗಳದಲ್ಲಿ ಚೆಂಡು, ಮುಂದೇನು?ಕಾವೇರಿ ನಿರ್ವಹಣಾ ಮಂಡಳಿ ರಚನೆ, ಕೇಂದ್ರದ ಅಂಗಳದಲ್ಲಿ ಚೆಂಡು, ಮುಂದೇನು?

ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡುವುದನ್ನು ತಡೆಯಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವ ಸಾಧ್ಯತೆ ಇದೆ. ಇದಕ್ಕಾಗಿ ಸರ್ವಪಕ್ಷ ನಿಯೋಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮನವಿ ಮಾಡಲಿದೆ.

English summary
Karnataka Chief Minister Siddaramaiah called for an all party meeting on March 7, 2018 to discuss the next course of action on the Cauvery verdict.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X