ಕರ್ನಾಟಕ ಬಂದ್‌ನಿಂದ ಸರ್ಕಾರದ ಬೊಕ್ಕಸಕ್ಕೂ ಹೊಡೆತ; ರಾಜ್ಯಕ್ಕೆ ಆದ ನಷ್ಟ ಎಷ್ಟು ಗೊತ್ತಾ?
ಬೆಂಗಳೂರು, ಸೆಪ್ಟೆಂಬರ್ 30: ರಾಜ್ಯದಲ್ಲಿ ಕಾವೇರಿಗಾಗಿ ಹೋರಾಟದ ಕಿಚ್ಚು ಭುಗಿಲೆದಿದ್ದು, ಸೆಪ್ಟೆಂಬರ್ 26 ರಂದು ಬೆಂಗಳೂರು ಬಂದ್ ಮತ್ತು ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್ ನಿಂದಾಗಿ ಶಾಲಾ ಕಾಲೇಜುಗಳಿಗೆ ರಜೆ, ಐಟಿ ಕಂಪನಿಗಳ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ಹಾಗೂ ಹಲವು ಕಂಪನಿಗಳು ಅರ್ಧ ಸಿಬ್ಬಂದಿಯೊಂದಿಗೆ ಕೆಲಸ ಮಾಡಬೇಕಾಗಿದೆ.
ಇನ್ನೂ ಕರ್ನಾಟಕ ಬಂದ್‌ನಿಂದಾಗಿ ರಾಜ್ಯಾದ್ಯಂತ ವಾಣಿಜ್ಯ ವಹಿವಾಟು ಸ್ಥಗಿತಗೊಂಡಿದೆ, ವ್ಯಾಪಾರ, ವಾಣಿಜ್ಯ ಹಾಗೂ ಕೈಗಾರಿಕೆಗಳಲ್ಲಿ ಕೆಲಸವಿಲ್ಲದೆ ಕೋಟಿ ಕೋಟಿ ನಷ್ಟವಾಗಿದೆ. ಅಲ್ಲದೇ ಸರ್ಕಾರದ ಬೊಕ್ಕಸಕ್ಕೂ ಹೊಡೆತ ಬಿದ್ದಿದೆ.

ಕರ್ನಾಟಕ ಬಂದ್ ನಿಂದ ಆದ ನಷ್ಟದ ಕುರಿತು ಎಫ್‌ಕೆಸಿಸಿಐ ಅಧ್ಯಕ್ಷ ರಮೇಶ್‌ಚಂದ್ರ ಲಹೋಟಿ ಮಾತನಾಡಿ, ಕರ್ನಾಟಕ ಬಂದ್‌ನಿಂದಾಗಿ ರಾಜ್ಯಾದ್ಯಂತ ವಾಣಿಜ್ಯ ವಹಿವಾಟು ಸ್ಥಗಿತಗೊಂಡಿದೆ ಬರೋಬ್ಬರಿ 5 ಸಾವಿರ ಕೋಟಿ ರೂ.ಗೂ ಹೆಚ್ಚು ನಷ್ಟ ಸಂಭವಿಸಿದೆ. ಇನ್ನು ಒಂದೇ ದಿನ ಎಲ್ಲಾ ರೀತಿಯ ವ್ಯಾಪಾರ, ವಾಣಿಜ್ಯ ಮತ್ತು ಕೈಗಾರಿಕೆಗಳಿಂದ ಸಂಗ್ರಹವಾಗುತ್ತಿದ್ದ 400 ಕೋಟಿ ರೂ.ಗೂ ಅಧಿಕ ತೆರಿಗೆ ಹಣಕ್ಕೆ ಹೊಡೆತ ಬಿದ್ದಿದೆ ಎಂದು ತಿಳಿಸಿದ್ದಾರೆ.
ಇನ್ನೂ ರಾಜ್ಯದಲ್ಲಿ ಕಾವೇರಿ ವಿಚಾ ಕರ್ನಾಟಕ ಬಂದ್ ಶಾಂತಿಯುತವಾಗಿ ನಡೆದಿದ್ದು, ರಾಜ್ಯಾದಾದ್ಯಂತ ಇರುವ ನಮ್ಮ ವ್ಯಾಪಾರ, ವಾಣಿಜ್ಯ ಮತ್ತು ಕೈಗಾರಿಕಾ ವಲಯದ ಸುಮಾರು ಶೇ.70ರಷ್ಟು ಉದ್ಯಮಿಗಳು ಬೆಂಬಲ ನೀಡಿದ್ದಾರೆ. ಈ ಬಂದ್‌ಗೆ ಎಫ್‌ಕೆಸಿಸಿಐ ಕೂಡ ಸಂಪೂರ್ಣ ಬೆಂಬಲ ನೀಡಿದ್ದು, ಬಂದ್‌ನಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು 400 ಕೋಟಿ ರೂ.ಗಳಷ್ಟು ನಷ್ಟ ಉಂಟಾಗಿದೆ ಎಂದು ಹೇಳಿದರು.
ರಾಜ್ಯದ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಮತ್ತು ನಾಡು, ನುಡಿ, ನೆಲ, ಜಲ ಪ್ರಶ್ನೆ ಬಂದಾಗ ಎಲ್ಲರೂ ಒಂದಾಗಬೇಕು. ನಾವೆಲ್ಲರೂ ನೀರು ಸಂರಕ್ಷಿಸಬೇಕು ಮತ್ತು ಈ ಅವಧಿಯಲ್ಲಿಅದನ್ನು ನ್ಯಾಯಯುತವಾಗಿ ಬಳಸಬೇಕು. ಕಾವೇರಿ ನೀರು ಹಂಚಿಕೆ ವಿವಾದ ಬಗೆಹರಿಸಲು ಮಾತುಕತೆ ಮೂಲಕ ಕರ್ನಾಟಕ ಮತ್ತು ತಮಿಳುನಾಡು ರಾಜ್ಯ ಸರಕಾರಗಳಿಗೆ ಎಂದು ಎಫ್‌ಕೆಸಿಸಿಐ ಅಧ್ಯಕ್ಷ ರಮೇಶ್ ಚಂದ್ರ ಲಹೋಟಿ ತಿಳಿಸಿದರು.
ಈ ವೇಳೆ ಬಂದ್ ನಿಂದ ಉಂಟಾದ ನಷ್ಟದ ಕುರಿತು ಎಫ್‌ಕೆಸಿಸಿಐ ಮಾಜಿ ಅಧ್ಯಕ್ಷ ಬಿ.ವಿ. ಗೋಪಾಲ್ ರೆಡ್ಡಿ ಅವರು ಮಾತನಾಡಿ, ಸೆಪ್ಟೆಂಬರ್ 26 ರಂದು ನಡೆದ ಬೆಂಗಳೂರು ಬಂದ್‌ನಿಂದ 200 ರಿಂದ 250 ಕೋಟಿ ರೂ ನಷ್ಟವಾಗಿರಬಹುದು ಎಂದಿದ್ದಾರೆ. ಅಲ್ಲದೇ ಕರ್ನಾಟಕ ಬಂದ್‌ನಿಂದ ರಾಜ್ಯಕ್ಕೆ 500 ರಿಂದ 600 ಕೋಟಿ ರೂ ನಷ್ಟವಾಗಿರಬಹುದು ಎಂದು ಹೇಳಿದ್ದಾರೆ.
ಇನ್ನೂ ಕರ್ನಾಟಕ ಬಂದ್ ಗೆ ಹಲವು ಸಂಘಟನೆಗಳು ಸಾಥ್ ನೀಡಿದ್ದು, ಓಲಾ, ಉಬರ್ ಟ್ಯಾಕ್ಸಿ, ಕ್ಯಾಬ್ ಸಂಚಾರ ಇರಲಿಲ್ಲ. ಹೀಗಾಗಿ, ಜನರ ಓಡಾಟ ಕಡಿಮೆಯಾಗಿತ್ತು. ಬಂದ್ ಹಿನ್ನೆಲೆಯಲ್ಲಿ ವಿಮಾನಗಳಿಗೆ ಟಿಕೆಟ್ ಬುಕ್ಕಿಂಗ್ ಕಡಿಮೆಯಿತ್ತು. ಕೆಲವರು ಮುಂಗಡ ಟಿಕೆಟ್ ಕಾಯ್ದಿರಿಸಿದ್ದರೂ ವಿಮಾನ ನಿಲ್ದಾಣಕ್ಕೆ ಹೋಗಲು ವಾಹನಗಳು ಇಲ್ಲದ ಕಾರಣಕ್ಕೆ ಟಿಕೆಟ್ ರದ್ದುಪಡಿಸಿದ್ರು, ಬಂದ್ ನಿಂದಾಗಿ ದೆಹಲಿ, ಮುಂಬಯಿ, ಕೋಲ್ಕತ್ತಾ, ಮಂಗಳೂರು ಸೇರಿದಂತೆ ವಿವಿಧೆಡೆಯಿಂದ ಬೆಂಗಳೂರಿಗೆ ಬರಬೇಕಿದ್ದ ಹಾಗೂ ಹೋಗಬೇಕಿದ್ದ 44 ವಿಮಾನಗಳ ಹಾರಾಟ ಸ್ಥಗಿತಗೊಂಡಿತು.












Click it and Unblock the Notifications