ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌; ತಮಿಳುನಾಡಿಗೆ 15 ದಿನ 9 ಸಾವಿರ ಕ್ಯೂಸೆಕ್‌ ನೀರು ಹರಿಸಲು CWRC ಸೂಚನೆ

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 9,000 ಕ್ಯೂಸೆಕ್‌ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ನಿಯಂತ್ರಣ ಸಮಿತಿ (CWRC) ಸೂಚಿಸಿದೆ. CWRCಯ ಈ ಶಿಫಾರಸಿನಂತೆ ಕರ್ನಾಟಕವು ಮುಂದಿನ 15 ದಿನಗಳಲ್ಲಿ ತಮಿಳುನಾಡಿನ ಬಿಳಿಗುಂಡ್ಲು ಜಲಮಾಪನ ಕೇಂದ್ರಕ್ಕೆ ಒಟ್ಟು ಸುಮಾರು 11.66 ಟಿಎಂಸಿ ನೀರು ತಲುಪಿಸಬೇಕಾಗುತ್ತದೆ.

CWRC ನೀಡಿರುವ ಶಿಫಾರಸು ಇನ್ನೂ ಅಂತಿಮ ಆದೇಶವಾಗಿಲ್ಲ. ಈ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆ ನಡೆಸಿ CWRC ಶಿಫಾರಸನ್ನು ಪರಿಶೀಲಿಸಲಿದೆ. ಬಳಿಕ ನೀರು ಹರಿಸುವ ಕುರಿತು ಅಂತಿಮ ಆದೇಶ ಹೊರಬೀಳಲಿದೆ. ಕರ್ನಾಟಕದ ಜಲಾಶಯಗಳಲ್ಲಿನ ನೀರಿನ ಲಭ್ಯತೆ, ರಾಜ್ಯದ ಕುಡಿಯುವ ನೀರು ಹಾಗೂ ಕೃಷಿ ಅಗತ್ಯತೆಗಳ ನಡುವೆ ತಮಿಳುನಾಡಿಗೆ ನೀರು ಹರಿಸುವಂತೆ ಸೂಚಿಸಿರುವುದು ರಾಜ್ಯದಲ್ಲಿ ಮತ್ತೆ ಕಾವೇರಿ ವಿವಾದವನ್ನು ಮುನ್ನೆಲೆಗೆ ತಂದಿದೆ.

Cauvery Water Row CWRC Directs Karnataka to Release 9 000 Cusecs to Tamil Nadu for 15 Days

ತಮಿಳುನಾಡಿಗೆ ಪ್ರತಿದಿನ 9,000 ಕ್ಯೂಸೆಕ್‌ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸೋಮವಾರ ನೀಡಿದ್ದ ಸೂಚನೆಯನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಕೂಡ ಎತ್ತಿಹಿಡಿದಿದೆ. ದೆಹಲಿಯಲ್ಲಿರುವ CWMA ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದ್ದು, ಕರ್ನಾಟಕಕ್ಕೆ CWRC ಶಿಫಾರಸನ್ನು ಪಾಲಿಸುವಂತೆ ಸೂಚಿಸಲಾಗಿದೆ.

ಸಭೆಯಲ್ಲಿ ಕರ್ನಾಟಕದ ಪರವಾಗಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ACS) ಗೌರವ್‌ ಗುಪ್ತಾ ಹಾಗೂ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್‌ ಭಾಗವಹಿಸಿದ್ದರು. ತಮಿಳುನಾಡಿನ ಪರವಾಗಿ ನೀರಾವರಿ ಕಾರ್ಯದರ್ಶಿ ಪ್ರಶಾಂತ್‌ ಹಾಗೂ ಕಾವೇರಿ ತಾಂತ್ರಿಕ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯಂ ಹಾಜರಿದ್ದರು.

ಇನ್ನೂ ಸಭೆಯ ಬಳಿಕ ಮಾತನಾಡಿದ ಗೌರವ್‌ ಗುಪ್ತಾ, ಸುಮಾರು ಒಂದೂವರೆ ಗಂಟೆಗಳ ಕಾಲ ಸಭೆ ನಡೆದಿದ್ದು, CWRC ಸೋಮವಾರ ನೀಡಿದ್ದ ಶಿಫಾರಸನ್ನು ಪಾಲಿಸುವಂತೆ CWMA ಸೂಚಿಸಿದೆ ಎಂದು ತಿಳಿಸಿದರು. ತಮಿಳುನಾಡು ತನ್ನ ಪರವಾಗಿ 28 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಬೇಡಿಕೆ ಇಟ್ಟಿತ್ತು. ಆದರೆ, ಈ ಬೇಡಿಕೆಯನ್ನು CWMA ಒಪ್ಪಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂಬ ಹವಾಮಾನ ಇಲಾಖೆಯ ಮುನ್ಸೂಚನೆಯನ್ನು ಪರಿಗಣಿಸಿ ನೀರು ಹರಿಸಲು ಸೂಚಿಸಲಾಗಿದೆ ಎಂದು ಗೌರವ್‌ ಗುಪ್ತಾ ವಿವರಿಸಿದರು.

CWMA ನಿರ್ಧಾರದ ವಿರುದ್ಧ ಕಾನೂನು ಹೋರಾಟ ನಡೆಸುವ ವಿಚಾರದಲ್ಲಿ ರಾಜ್ಯದ ಕಾನೂನು ತಂಡ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ಗೌರವ್‌ ಗುಪ್ತಾ ಹೇಳಿದರು. ಇಂದಿನ ಬೆಳವಣಿಗೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಗಮನಕ್ಕೆ ತರುತ್ತೇವೆ. ಕಾನೂನು ಹೋರಾಟದ ಬಗ್ಗೆ ಕಾನೂನು ತಂಡ ನಿರ್ಧರಿಸಲಿದೆ ಎಂದು ಅವರು ತಿಳಿಸಿದರು.

ಸುಪ್ರೀಂ ಕೋರ್ಟ್‌ನಲ್ಲೂ ವಿಚಾರಣೆ

ಇದೇ ವೇಳೆ, ಕರ್ನಾಟಕ-ತಮಿಳುನಾಡು ನಡುವಿನ ಕಾವೇರಿ ನೀರು ಹಂಚಿಕೆ ವಿವಾದ ಸುಪ್ರೀಂ ಕೋರ್ಟ್‌ನಲ್ಲೂ ವಿಚಾರಣೆಯಲ್ಲಿದೆ. ಈ ಹಿಂದೆ CWRC ಕರ್ನಾಟಕವು ಪ್ರತಿದಿನ 12,000 ಕ್ಯೂಸೆಕ್‌ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಸೂಚಿಸಿತ್ತು. ಆದರೆ ಕರ್ನಾಟಕ ಈ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಿ ತಮಿಳುನಾಡು ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು.

ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌, ಆಗಸ್ಟ್‌ 25ರಂದು ನಡೆಯುವ CWMA ಸಭೆಯ ಬಳಿಕ ಉಭಯ ರಾಜ್ಯಗಳು ಅಗತ್ಯ ಅಂಕಿಅಂಶಗಳೊಂದಿಗೆ ಹಾಜರಾಗುವಂತೆ ಸೂಚಿಸಿತ್ತು. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್‌ 31ಕ್ಕೆ ನಿಗದಿಪಡಿಸಲಾಗಿದೆ.

ಕರ್ನಾಟಕಕ್ಕೆ ಹೆಚ್ಚಿದ ಆತಂಕ

ಈಗಾಗಲೇ ಮಳೆ ಕೊರತೆ ಹಾಗೂ ಜಲಾಶಯಗಳಲ್ಲಿನ ನೀರಿನ ಸಂಗ್ರಹದ ಬಗ್ಗೆ ಆತಂಕ ಎದುರಾಗಿರುವ ಸಂದರ್ಭದಲ್ಲಿ, ಪ್ರತಿದಿನ 9,000 ಕ್ಯೂಸೆಕ್‌ ನೀರು ಹರಿಸುವಂತೆ CWRC ಸೂಚಿಸಿರುವುದು ಕರ್ನಾಟಕದ ಪಾಲಿಗೆ ಮತ್ತೊಂದು ಒತ್ತಡ ತಂದಿದೆ. CWMA ಸಭೆಯಲ್ಲಿ ಕರ್ನಾಟಕದ ವಾದ ಹಾಗೂ ಜಲಾಶಯಗಳಲ್ಲಿನ ವಾಸ್ತವಿಕ ನೀರಿನ ಲಭ್ಯತೆ ಪ್ರಮುಖವಾಗಲಿದ್ದು, ಅಂತಿಮವಾಗಿ ಎಷ್ಟು ಪ್ರಮಾಣದ ನೀರು ಹರಿಸಬೇಕು ಎಂಬುದು ನಿರ್ಧಾರವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+