ಅದಿರು ನಾಪತ್ತೆ : ಅಧಿಕಾರಿಗಳಿಗೆ ಬಂತು ಕಂಟಕ
ಬೆಂಗಳೂರು, ನ. 19: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಆರೋಪ ಹೊತ್ತಿರುವ ಅರಣ್ಯಾಧಿಕಾರಿಗಳು ಸೇರಿದಂತೆ ಐವರು ಆರೋಪಿಗಳ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸಿಬಿಐ ಅಧಿಕಾರಿಗಳು ದೋಷಾರೋಪ ಪಟ್ಟಿಯನ್ನು ಸೋಮವಾರ ಸಲ್ಲಿಸಿದ್ದಾರೆ.
ಬೇಲೆಕೇರಿ ಬಂದರಿನಲ್ಲಿ 34,555.06 ಮೆಟ್ರಿಕ್ ಟನ್ ಅದಿರು ಕಳ್ಳ ಸಾಗಾಣಿಕೆಗೆ ಸಹಾಯ ಮಾಡಿದ ಆರೋಪವಿರುವ ಬಂದರು ಅಧಿಕಾರಿ ಮಹೇಶ್ ಬಲಿಯಾ, ಉಪ ಬಂದರು ಅಧಿಕಾರಿ ಸಿ. ಸ್ವಾಮಿ, ಅಂಕೋಲಾ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನರೇಂದ್ರ ಹಿತ್ತಲಮಕ್ಕಿ, ವಲಯ ಅರಣ್ಯಾಧಿಕಾರಿ ಚಂದ್ರಕಾಂತ್ ನಾಯಕ್ ಹಾಗೂ ಬೆಂಗಳೂರು ಮೂಲದ ಗಣಿ ಕಂಪನಿ ವಿರುದ್ಧ ದೋಷಾರೋಪಣಾಪಟ್ಟಿ ಸಲ್ಲಿಕೆಯಾಗಿದೆ.
ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಿದ ಆರೋಪದ ಮೇರೆಗೆ ಬೇಲೆಕೇರಿ ಬಂದರಿನಲ್ಲಿ ಸಂಗ್ರಹಿಸಿದ್ದ ಕಬ್ಬಿಣದ ಅದಿರನ್ನು ವಶಪಡಿಸಿಕೊಳ್ಳಲಾಗಿತ್ತು.
ಅಲ್ಲದೆ, ಈ ಅದಿರನ್ನು ಯಾವುದೇ ಕಾರಣಕ್ಕೂ ರಫ್ತು ಮಾಡದಂತೆ ಹೈಕೋರ್ಟ್ ಆದೇಶಿ ಸಿತ್ತು. ಆದರೆ, ಈ ಆದೇಶವನ್ನು ಮೀರಿ ಅರಣಾಧಿಕಾರಿಗಳು ಮತ್ತು ಬಂದರು ಅಧಿಕಾರಿಗಳು ಅದಿರು ಸಾಗಾಣಿಕೆಗೆ ಸಹಾಯ ಮಾಡಿದ್ದರು ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.
ಸುಪ್ರೀಂ ಕೋರ್ಟ್ ಆದೇಶದಂತೆ ಅಕ್ರಮ ಗಣಿಗಾರಿಕೆ ಪ್ರಕರಣವನ್ನು ಸಿಬಿಐ ತನಿಖೆ ಕೈಗೊಂಡಿದೆ. ಅರಣ್ಯ ಪ್ರದೇಶದಲ್ಲಿ ಕಾನೂನು ಬಾಹಿರವಾಗಿ ಗಣಿಗಾರಿಕೆ ನಡೆಸಿದ ತನಿಖೆ ನಡೆಸುತ್ತಿದ್ದ ವೇಳೆ ಬೇಲೆಕೇರಿ ಬಂದರಿನಲ್ಲಿ ಅಕ್ರಮವಾಗಿ ಅದಿರು ರಫ್ತು ಮಾಡಿದ್ದ ಆರೋಪ ಕೇಳಿ ಬಂದಿತ್ತು. ಅಕ್ರಮ ಗಣಿಗಾರಿಕೆ ಮತ್ತು ಅದಿರು ನಾಪತ್ತೆ ಪ್ರಕರಣ ಎರಡೂ ಒಂದಕ್ಕೊಂದು ಸಂಪರ್ಕವಿರುವುದು ತನಿಖೆಯಿಂದ ಬೆಳಕಿಗೆ ಬಂದ ಕೂಡಲೇ ಸಿಬಿಐ ಅಧಿಕಾರಿಗಳು ಬಂದರು ಮತ್ತು ಅರಣ್ಯಾಧಿಕಾರಿಗಳನ್ನು ಬಂಧಿಸಿದ್ದರು.

ಲಂಚದ ಆರೋಪ
ಅಜಯ್ ಅವರ ಸಂಸ್ಥೆಗೆ ಸಹಾಯವಾಗುವಂತೆ ಇತರೆ ಆರೋಪಿಗಳು ನಡೆದುಕೊಂಡಿದ್ದಾರೆ. ಈಗ ಎಲ್ಲಾ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಮಾರ್ಚ್ 2010ರಂದು ಬಂದರಿನ ಮೇಲೆ ಆರಣ್ಯ ಇಲಾಖೆ ದಾಳಿ ಮಾಡಿತ್ತು. 8.05 ಲಕ್ಷ ಟನ್ ಕಬ್ಬಿಣ ಅದಿರನ್ನು ವಶಪಡಿಸಿಕೊಳ್ಳಲಾಗಿತ್ತು.
ಆದರೆ, ಅದೇ ವರ್ಷ ಜುಲೈನಲ್ಲಿ ಸುಮಾರು 5 ಲಕ್ಷ ಟನ್ ಅದಿರು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತು. ಅಜಯ್ ಸಂಸ್ಥೆ ಮೂಲಕ ಹಿತ್ತಲಮನಿ, ಚಂದ್ರಕಾಂತ್ ಮುಂತಾದವರು ಕೈಜೋಡಿಸಿದ್ದರು. ಎಲ್ಲರ ಮೇಲೂ ಲಂಚದ ಆರೋಪ ಕೂಡಾ ಹಾಕಲಾಗಿದೆ.

ಸತೀಶ್ ಸೈಲ್ ಮೇಲಿನ ಆರೋಪ
ಕಾರವಾರದ ಬೇಲೇಕೇರಿ ಬಂದರಿನಲ್ಲಿ ಕಬ್ಬಿಣ ಅದಿರು ಕಳ್ಳಸಾಗಾಣೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಸಕರ ಸಂಖ್ಯೆ 3ಕ್ಕೆ ಏರಿದೆ ಎನ್ನುವಷ್ಟರಲ್ಲೇ ಕಾರವಾರ ಶಾಸಕ ಸತೀಶ್ ಸೈಲ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು. ನಂತರ ಮತ್ತೆ ಸೈಲ್ ಜೈಲಿಗೆ ವಾಪಾಸ್ ಬಂದಿದ್ದಾರೆ.
2009-10ರ ಅವಧಿಯಲ್ಲಿ ನಡೆದಿದೆ ಎನ್ನಲಾದ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ(SMSC Pvt Ltd)ಯ ಮಾಲೀಕರಾದ ಸತೀಶ್ ಅವರನ್ನು ಸಿಬಿಐ ತಂಡ ಸೆ.20ರಂದು ಬಂಧಿಸಿ ವಿಚಾರಣೆ ನಡೆಸುತ್ತಿದೆ.
ಜನವರಿ 2009 ರಿಂದ ಮೇ 2010ರ ಅವಧಿಯಲ್ಲಿ ಸುಮಾರು 7.23 ಲಕ್ಷ ಮೆಟ್ರಿಕ್ ಟನ್ ಕಬ್ಬಿಣ ಅದಿರನ್ನು ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಅಕ್ರಮವಾಗಿ ಸಾಗಿಸಿದೆ ಎಂಬ ಆರೋಪವಿದೆ. ಕಾಂಗ್ರೆಸ್ ರೆಬೆಲ್ ಅಭ್ಯರ್ಥಿಯಾಗಿ 2013ರ ಅಸೆಂಬ್ಲಿ ಎಲೆಕ್ಷನ್ ನಲ್ಲಿ ನಿಂತು ಚುನಾವಣೆ ಗೆದ್ದ ಸತೀಶ್ ಸೈಲ್ ನಂತರ ಕಾಂಗ್ರೆಸ್ ಮತ್ತೆ ಸೇರಿಕೊಂಡಿದ್ದರು.

ನಾಗೇಂದ್ರ ಸ್ಥಿತಿ ಗತಿ
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳಿಂದ ಬಂಧಿತರಾಗಿರುವ ಕೂಡ್ಲಿಗಿ ಶಾಸಕ ಬಿ.ನಾಗೇಂದ್ರ ಅವರನ್ನು ಅ.24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಸಿಬಿಐ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಅದಿರು ನಾಪತ್ತೆ ಪ್ರಕರಣ ಸಂಬಂಧ ವಿಚಾರಣೆಗಾಗಿ ಅಕ್ಬೋಬರ್ 3 ರಂದು ನಾಗೇಂದ್ರ ಅವರನ್ನು ಸಿಬಿಐ ಅಧಿಕಾರಿಗಳು ಕಚೇರಿಗೆ ಕರೆಸಿಕೊಂಡಿದ್ದರು. ಬಳಿಕ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡಲು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ನ್ಯಾಯಾಲಯ ಅ.11ರವರೆಗೂ ಸಿಬಿಐ ವಶಕ್ಕೆ ಒಪ್ಪಿಸಿತ್ತು.

ಶ್ರೀರಾಮುಲುಗೆ ಸಂಕಟ?
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರಾದ ಸುರೇಶ್ ಬಾಬು, ಸತೀಶ್ ಸೈಲ್, ನಾಗೇಂದ್ರ ಬಂಧನಕ್ಕೊಳಪಟ್ಟಿದ್ದರೆ ಆನಂದ ಸಿಂಗ್ ಅವರು ಇನ್ನೂ ಪತ್ತೆಯಾಗಿಲ್ಲ.
ಬಂಧಿತ ಆರೋಪಿಗಳು ವಿಚಾರಣೆ ಸಂದರ್ಭದಲ್ಲಿ ಜನಾರ್ದನ ರೆಡ್ಡಿ ವಿದೇಶಗಳಲ್ಲಿ ಆರಂಭಿಸಿದ್ದ 19 ಬೇನಾಮಿ ಕಂಪನಿಗಳಿಗೆ ಬಿಎಸ್ಸಾರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶ್ರೀರಾಮುಲುವೇ ಸೂತ್ರಧಾರ. ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಹೇಳಿದಂತೆ ಕೇಳಿದೆವು ಅಷ್ಟೇ ಎಂದಿದ್ದಾರಂತೆ. ವಿಚಾರಣೆ ವಿವರ ಇನ್ನೂ ಸಿಬಿಐ ಹೊರಹಾಕಿಲ್ಲ. ಪ್ರಕರಣದಲ್ಲಿ ಇನ್ನಷ್ಟು ಶಾಸಕರು, ಸಂಸದರು ಮಾಜಿ ರಾಜಕೀಯ ಮುಖಂಡರನ್ನು ವಿಚಾರಣೆ ಒಳಪಡಿಸಲು ಸಿಬಿಐ ಬಲೆ ಹೆಣೆದಿದೆ.

ಯಾರಿಗೆ ಭೀತಿ
* M/s ಡ್ರೀಮ್ ಲಾಜಿಸ್ಟಿಕ್ಸ್ ಪೈ ಲಿ ಮಾಲೀಕರಾದ ಯಲ್ಲಾಪುರ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಅವರ ಪುತ್ರ ವಿವೇಕ್ ಹೆಬ್ಬಾರ್.
* ಆನಂದ್ ಸಿಂಗ್ ಅವರ ವೈಷ್ಣವಿ ಮಿನಿರಲ್ಸ್ , ನಾಗೇಂದ್ರ ಅವರ ಈಗಲ್ ಟ್ರೇಡರ್ಸ್ ಅಂಡ್ ಲಾಜಿಸ್ಟಿಕ್ಸ್, ಸುರೇಶ್ ಬಾಬು ಅವರ ಜನಾದೇವಿ ಮಿನರಲ್ಸ್, ಕೆ ಸೋಮಶೇಖರ್ ಅವರ ಐಎಲ್ ಸಿ ಇಂಡಸ್ಟ್ರೀಸ್ ಪೈ.ಲಿ. ಸಿಬ್ಬಂದಿಗಳು
* ಅರಣ್ಯ ಇಲಾಖೆ ಅಧಿಕಾರಿಗಳು, ಬಂದರಿನ ಸಿಬ್ಬಂದಿಗಳು
* ಪವನ್ ಕುಮಾರ್ ಜೈನ್ ಅವರ ಪಿಜೆಎಸ್ ಓವರ್ಸೀಸ್ ಲಿ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications