ಡಿ.ಕೆ. ಶಿವಕುಮಾರ್ ಆಪ್ತರ ಮನೆ ಮೇಲೆ 5 ಕಡೆ ಸಿಬಿಐ ದಾಳಿ

ಬೆಂಗಳೂರು, ಮೇ 31: ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರ ಆಪ್ತರ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯದ ಐದು ಕಡೆಗಳಲ್ಲಿ ಏಕಕಾಲಕ್ಕೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಡಿ.ಕೆ. ಶಿವಕುಮಾರ್ ಅವರ 11 ಆಪ್ತರ ಮನೆ ಮೇಲೆ ಸಿಬಿಐ ಬುಧವಾರ ಸರ್ಚ್ ವಾರಂಟ್ ಹೊರಡಿಸಿತ್ತು. ಈ ಸಂಬಂಧ ಇಂದು ಬೆಳಿಗ್ಗೆ ಡಿ.ಕೆ. ಶಿವಕುಮಾರ್ ಮತ್ತು ಸಂಸದ ಡಿ. ಕೆ. ಸುರೇಶ್ ತುರ್ತು ಸುದ್ದಿಗೋಷ್ಠಿ ನಡೆಸಿದ್ದರು. ಇದಾದ ಬೆನ್ನಿಗೆ ಇದೀಗ ಸಿಬಿಐ ದಾಳಿ ನಡೆದಿದೆ.

CBI conducts raid in DK Shivakumars associate’s residence

ಬೆಂಗಳೂರು, ಕನಕಪುರ, ರಾಮನಗರ ಜಿಲ್ಲೆಗಳ ಐದು ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರುವುದು ವರದಿಯಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಡಿಕೆಶಿ ಆಪ್ತರ ಮೇಲೆ ದಾಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ "ಸಿಬಿಐ ಮೂಲಕ ಕೇಂದ್ರ ಸರಕಾರ ಕಾಂಗ್ರೆಸ್ ನ್ನು ಟಾರ್ಗೆಟ್ ಮಾಡುತ್ತಿದೆ. ದುರುದ್ದೇಶದಿಂದ ಈ ರೀತಿ ದಾಳಿ ಮಾಡಿದಾಗ ಇದಕ್ಕೆ ಯಾವುದೇ ಬಲವಿರುವುದಿಲ್ಲ," ಎಂದು ವಿಧಾನಸೌಧದಲ್ಲಿ ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+