• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮಾಜಿ ಸಚಿವ, ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ!

|

ಬೆಂಗಳೂರು, ನ. 05: ಮಾಜಿ ಸಚಿವ, ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ. 2016ರ ಜೂನ್ 15ರಂದು ನಡೆದಿದ್ದ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ವಿಚಾರಣೆ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ ಎಂದು ತಿಳಿದು ಬಂದಿದೆ.

ಕೆಲ ಹೊತ್ತಿಗೆ ಮೊದಲು ಧಾರವಾಡದ ಬಾರಾಕೊಟ್ರಿ ಪ್ರದೇಶದಲ್ಲಿನ ನಿವಾಸದಲ್ಲಿ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದೀಗ ಧಾರವಾಡ ಉಪ ನಗರ ಪೊಲೀಸ್ ಠಾಣೆಯಲ್ಲಿ ಸಿಬಿಐ ಪೊಲೀಸರು ವಿಚಾರಣೆಗೆ ಒಳಪಡಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆಗ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕರೂ ಆಗಿದ್ದ ವಿನಯ್ ಕುಲಕರ್ಣಿ ಅವರ ಹೆಸರು ಕೇಳಿ ಬಂದಿತ್ತು. ಕಂದಾಯ ಸಚಿವ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಬಿಜೆಪಿ ನಾಯಕರು, ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರು ಶಾಮಿಲಾಗಿದ್ದಾರೆ ಎಂದು ಆರೋಪಿಸಿದ್ದರು.

   Hindu ಭಾವನೆಗಳನ್ನು ಘಾಸಿಗೊಳಿಸಿದ್ರಾ Amithabh bachan | KBC | Oneindia Kannada

   ಕೆಲ ತಿಂಗಳುಗಳ ಹಿಂದಷ್ಟೇ ವಿನಯ್ ಕುಲಕರ್ಣಿ ಅವರ ಸಹೋದರ ವಿಜಯ್ ಕುಲಕರ್ಣಿ ಅವರು ಸಿಬಿಐ ವಿಚಾರಣೆ ಎದುರಿಸಿದ್ದರು. ಇದೇ ಸಂದರ್ಭದಲ್ಲಿ ಪ್ರಕರಣದಿಂದ ಬಚಾವಾಗಲು ವಿನಯ್ ಕುಲಕರ್ಣಿ ಅವರು ಬಿಜೆಪಿ ಸೇರಲು ಪ್ರಯತ್ನ ನಡೆಸಿದ್ದಾರೆಂದು ಆರೋಪಿಸಲಾಗಿತ್ತು. ಆದರೆ ಆ ಆರೋಪವನ್ನು ವಿನಯ್ ಕುಲಕರ್ಣಿ ನಿರಾಕರಿಸಿದ್ದರು. ಜೊತೆಗೆ ಬಿಜೆಪಿ ನಾಯಕರೂ ಕೂಡ ಅಂತಹ ಯಾವುದೇ ಬೆಳವಣಿಗೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

   English summary
   CBI has arrested former minister Vinay Kulkarni in connection with the murder case of Dharwad Zilla Panchayat member Yogesh Gowda. Know more
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X