ಒಂದಂಕಿ ಲಾಟರಿ ಹಗರಣ : ಮತ್ತೆ ಸಿಐಡಿ ತನಿಖೆ?

ಬೆಂಗಳೂರು, ಜುಲೈ 21 : 'ಬಹುಕೋಟಿ ರೂಪಾಯಿ ಒಂದಂಕಿ ಲಾಟರಿ ಹಗರಣದ ತನಿಖೆಯನ್ನು ನಡೆಸುವುದಿಲ್ಲ ಎಂದು ಸಿಬಿಐ ಅಧಿಕೃತವಾಗಿ ಸರ್ಕಾರಕ್ಕೆ ಹೇಳಿಲ್ಲ. ಪ್ರತಿಪಕ್ಷಗಳು ಒಪ್ಪಿಗೆ ನೀಡಿದರೆ ಹಗರಣದ ಬಗ್ಗೆ ಸಿಐಡಿ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲಾಗುತ್ತದೆ' ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಸೋಮವಾರ ವಿಧಾನಸಭೆ ಕಲಾಪದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡಿಸಿದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಗೃಹ ಸಚಿವರು, ಲಾಟರಿ ಹಗರಣದ ತನಿಖೆ ನಡೆಸುವಂತೆ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಸಿಬಿಐ ಅಧಿಕೃತವಾಗಿ ಒಪ್ಪಿಕೊಂಡಿಲ್ಲ ಎಂದು ತಿಳಿಸಿದರು. [ಲಾಟರಿ ಹಗರಣಕ್ಕೆ ಸಿಬಿಐ ದೊಡ್ಡ ನಮಸ್ಕಾರ!]

kj george

'ಲಾಟರಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಪ್ರತಿಪಕ್ಷಗಳು ಒತ್ತಡ ಹೇರಿದವು. ಆದ್ದರಿಂದ ಸರ್ಕಾರ ಸಿಬಿಐಗೆ ವಹಿಸಿತು. ಆದರೆ, ಸಿಬಿಐ ತನಿಖೆ ಕೈಗೊಳ್ಳುವುದಿಲ್ಲ ಎಂದು ಅಧಿಕೃತವಾಗಿ ಸರ್ಕಾರಕ್ಕೆ ತಿಳಿಸಿಲ್ಲ. ಸಿಐಡಿ ತನಿಖೆಯೇ ಮುಂದುವರೆದಿದ್ದರೆ ಇಷ್ಟರೊಳಗೆ ತನಿಖೆ ಪೂರ್ಣಗೊಳ್ಳುತ್ತಿತ್ತು' ಎಂದರು. [ಲಾಟರಿ ಹಗರಣ ಸಿಬಿಐ ತನಿಖೆಗೆ ಕೊಟ್ಟಿದ್ದೇಕೆ?]

ಪ್ರತಿಪಕ್ಷಗಳು ಒಪ್ಪಿಗೆ ನೀಡಿದರೆ ಈಗಲೂ ಸಿಐಡಿ ತನಿಖೆಯನ್ನು ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯನ್ನು ವಿಧಿಸಲಾಗುತ್ತದೆ ಎಂದು ಕೆ.ಜೆ.ಜಾರ್ಜ್ ಹೇಳಿದರು. 2013ರಲ್ಲಿಯೇ ಒಂದಂಕಿ ಲಾಟರಿ ಹಗರಣದ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದೆ. ಆದರೆ, ಸರ್ಕಾರ ಮೌನಕ್ಕೆ ಶರಣಾಗಿತ್ತು ಎಂದು ಕುಮಾರಸ್ವಾಮಿ ತಿರುಗೇಟು ನೀಡಿದರು. [ಸಿಬಿಐ, ಸಿಐಡಿ ತನಿಖೆಗೆ ವ್ಯತ್ಯಾಸವೇನು?]

ಅಂದಹಾಗೆ 2015ರ ಮೇ 26ರಂದು ಕರ್ನಾಟಕ ಸರ್ಕಾರ ಒಂದಂಕಿ ಲಾಟರಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿ ಆದೇಶ ಹೊರಡಿಸಿತ್ತು. ಆದರೆ, ಪ್ರಕರಣದ ತನಿಖೆ ಆರಂಭಿಸುವ ಮೊದಲು ಸಿಬಿಐ ಪ್ರಾಥಮಿಕ ಮಾಹಿತಿ ಸಂಗ್ರಹಣೆ ಮಾಡಿದ್ದು, ಅದರ ಅನ್ವಯ ಹಗರಣದ ತನಿಖೆಯನ್ನು ಕೈಗೆತ್ತಿಕೊಳ್ಳದಿರಲು ನಿರ್ಧರಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+