ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಸಿಬಿಐಗೆ : ಯಾರು, ಏನು ಹೇಳಿದರು?
ಬೆಂಗಳೂರು, ಸೆಪ್ಟೆಂಬರ್ 05 : ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ. ಸುಪ್ರೀಂಕೋರ್ಟ್ ಆದೇಶದ ಬಳಿಕ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆಗೆ ಒತ್ತಾಯ ಕೇಳಿ ಬಂದಿದೆ.
ಕರ್ನಾಟಕ ಸರ್ಕರ ಮೊದಲು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಎಂ.ಕೆ.ಗಣಪತಿ ತಂದೆ ಕುಶಾಲಪ್ಪ, ಸಹೋದರ ಮಾಚಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಮಂಗಳವಾರ ಸಿಬಿಐ ತನಿಖೆಗೆ ಆದೇಶ ನೀಡಿದೆ.
ಸುಪ್ರೀಂಕೋರ್ಟ್ ಆದೇಶದಂತೆ ಸಿಬಿಐ ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್, ಐಪಿಎಸ್ ಅಧಿಕಾರಿ ಎ.ಎಂ.ಪ್ರಸಾದ್, ಪ್ರಣಬ್ ಮೊಹಂತಿ ಪಾತ್ರದ ಬಗ್ಗೆ ತನಿಖೆ ನಡೆಸಿ, ಮೂರು ತಿಂಗಳಿನಲ್ಲಿ ವರದಿ ನೀಡುವಂತೆ ಸೂಚಿಸಿದೆ.
ಕರ್ನಾಟಕದ ಬಿಜೆಪಿ ನಾಯಕರು ಸುಪ್ರೀಂಕೋರ್ಟ್ ಆದೇಶವನ್ನು ಸ್ವಾಗತಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಅಂದಿನ ಗೃಹ ಸಚಿವ, ಇಂದಿನ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ನಿಷ್ಷಕ್ಷಪಾತ ತನಿಖೆಗೆ ಸಹಕಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಚಿತ್ರಗಳಲ್ಲಿ ನೋಡಿ...

ರಾಜೀನಾಮೆ ಪಡೆಯದಿದ್ದರೆ ಹೋರಾಟ
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಸುಪ್ರೀಂಕೋರ್ಟ್ ಆದೇಶ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, 'ಮುಖ್ಯಂಮತ್ರಿ ಸಿದ್ದರಾಮಯ್ಯ ಅವರು ಸಚಿವ ಜಾರ್ಜ್ ರಾಜೀನಾಮೆ ಪಡೆಯದೆ ಇದ್ದರೆ, ಇಬ್ಬರು ಅಧಿಕಾರಿಗಳನ್ನು ಅಮಾನತ್ತಿನಲ್ಲಿ ಇಡದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ' ಎಂದು ಎಚ್ಚರಿಕೆ ನೀಡಿದರು.

ತೀರ್ಪಿನ ಪ್ರತಿ ಸಿಕ್ಕ ಬಳಿಕ ಪ್ರತಿಕ್ರಿಯೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಪ್ರೀಂಕೋರ್ಟ್ ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, 'ಕೋರ್ಟ್ ಆದೇಶದ ಪ್ರತಿ ಸಿಕ್ಕ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ಕೋರ್ಟ್ ಮರು ತನಿಖೆಗೆ ಆದೇಶ ನೀಡಿದೆಯೋ?, ಬಿ ರಿಪೋರ್ಟ್ ರದ್ದು ಮಾಡಿದೆಯೋ ತಿಳಿದಿಲ್ಲ. ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಪಡೆಯುವುದಿಲ್ಲ. ಬಿಜೆಪಿಯವರು ರಾಜೀನಾಮೆ ಕೇಳಿದ ತಕ್ಷಣ ಪಡೆಯಲು ಸಾಧ್ಯವಿಲ್ಲ' ಎಂದು ಹೇಳಿದರು.
|
'ತಕ್ಷಣ ರಾಜೀನಾಮೆ ಪಡೆಯಿರಿ'
ತಕ್ಷಣ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಪಡೆಯಿರಿ

'ಸ್ವಾಗತ ಮಾಡುತ್ತೇನೆ'
ಯಡಿಯೂರಪ್ಪ ರಾಜೀನಾಮೆ ಕೊಡು ಅಂದ ಕೂಡಲೇ ಕೊಡಲು ಸಾಧ್ಯವಿಲ್ಲ. ಕೋರ್ಟ್ ತೀರ್ಮಾನ ಸ್ವಾಗತ ಮಾಡುತ್ತೇನೆ. ಆದರೆ, ಸಿಬಿಐ ತನಿಖೆ ನಡೆಸಲಿದೆ ಎಂಬ ಕಾರಣಕ್ಕೆ ಸಚಿವ ಸ್ಥಾನ ತೊರೆಯಲು ಸಾಧ್ಯವಿಲ್ಲ.

'ಸತ್ಯಾಂಶ ಹೊರಬರಲಿದೆ'
'ದಾಖಲೆಗಳನ್ನು ನಾಶ ಮಾಡಿದ್ದು ಕ್ರಿಮಿನಲ್ ಅಫೆನ್ಸ್. ಸಿಐಡಿ ವರದಿಯನ್ನು ತರಾತುರಿಯಲ್ಲಿ ಮಾಡಿಸಿರುವುದು ಸಾಬೀತಾಗಿದೆ. ಸಿಬಿಐ ತನಿಖೆಯನ್ನು ಸ್ವಾಗತ ಮಾಡುತ್ತೇನೆ. ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ' ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.












Click it and Unblock the Notifications