ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫೋನ್ ಕದ್ದಾಲಿಕೆ ಪ್ರಕರಣ ಸಿಬಿಐಗೆ : ಸಿದ್ದರಾಮಯ್ಯ ಸರಣಿ ಟ್ವೀಟ್

|
Google Oneindia Kannada News

ಬೆಂಗಳೂರು, ಆಗಸ್ಟ್ 18 : ಫೋನ್ ಕದ್ದಾಲಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಸರ್ಕಾರದ ತೀರ್ಮಾನವನ್ನು ಪ್ರತಿಪಕ್ಷ ಕಾಂಗ್ರೆಸ್‌ನ ನಾಯಕರು ಸ್ವಾಗತಿಸಿದ್ದಾರೆ.

ಭಾನುವಾರ ಯಡಿಯೂರಪ್ಪ ಫೋನ್ ಟ್ಯಾಪಿಂಗ್ ಪ್ರಕರಣವನ್ನು ಸಿಬಿಐಗೆ ವಹಿಸುವುದಾಗಿ ಘೋಷಣೆ ಮಾಡಿದ್ದಾರೆ. ಸೋಮವಾರ ಈ ಕುರಿತು ಅಧಿಕೃತ ಆದೇಶ ಹೊರಬೀಳುಬ ನಿರೀಕ್ಷೆ ಇದೆ. ಹೈಕಮಾಂಡ್ ನಾಯಕರ ಸೂಚನೆಯಂತೆ ಯಡಿಯೂರಪ್ಪ ಈ ಘೋಷಣೆ ಮಾಡಿದ್ದಾರೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ.

ಫೋನ್ ಟ್ಯಾಪಿಂಗ್ ಪ್ರಕರಣದ ತನಿಖೆ ಸಿಬಿಐಗೆ : ಯಡಿಯೂರಪ್ಪಫೋನ್ ಟ್ಯಾಪಿಂಗ್ ಪ್ರಕರಣದ ತನಿಖೆ ಸಿಬಿಐಗೆ : ಯಡಿಯೂರಪ್ಪ

ಮಾಜಿ ಮುಖ್ಯಮಂತ್ರಿಗಳಾದ ಎಚ್. ಡಿ. ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಸಿಬಿಐ ತನಿಖೆಗೆ ವಹಿಸುವ ಸರ್ಕಾರದ ತೀರ್ಮಾನವನ್ನು ಸ್ವಾಗತಿಸಿದ್ದಾರೆ. ಸಿದ್ದರಾಮಯ್ಯ ಈ ಕುರಿತು ಟ್ವೀಟ್ ಮಾಡಿದ್ದು, ದುಷ್ಟ ಆಲೋಚನೆ ಬಿಜೆಪಿ ನಾಯಕರಿಗೆ ಇಲ್ಲ ಎಂದು ನಂಬಿದ್ದೇನೆ ಎಂದು ಟಾಂಗ್ ನೀಡಿದ್ದಾರೆ.

ಫೋನ್ ಕದ್ದಾಲಿಕೆ ಬಗ್ಗೆ ಸಿಬಿಐ ತನಿಖೆ : ಯಾರು, ಏನು ಹೇಳಿದರು?ಫೋನ್ ಕದ್ದಾಲಿಕೆ ಬಗ್ಗೆ ಸಿಬಿಐ ತನಿಖೆ : ಯಾರು, ಏನು ಹೇಳಿದರು?

"ಪೋನ್ ಕದ್ದಾಲಿಕೆ ಹಗರಣದ ತನಿಖೆಯನ್ನು ಸಿಬಿಐ‌ಗೆ ಒಪ್ಪಿಸುವ ಮುಖ್ಯಮಂತ್ರಿಗಳ ನಿರ್ಧಾರ ಸ್ವಾಗತಾರ್ಹ. ಆದರೆ, ಬಿಜೆಪಿ ಸಿಬಿಐಯನ್ನು ಕೈಗೊಂಬೆ ಮಾಡಿಕೊಂಡು ರಾಜಕೀಯ ಸೇಡಿಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಾ ಬಂದಿರುವುದನ್ನು ದೇಶ ಕಂಡಿದೆ. ಇಂತಹ ದುಷ್ಟ ಆಲೋಚನೆ ಬಿಜೆಪಿ ನಾಯಕರಿಗಿಲ್ಲ‌‌‌ ಎಂದು ನಂಬಿದ್ದೇನೆ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ರಾಜಕೀಯ ಸೇಡಿನ ವಿಚಾರ

ರಾಜಕೀಯ ಸೇಡಿನ ವಿಚಾರ

"ಪೋನ್ ಕದ್ದಾಲಿಕೆ ಹಗರಣದ ತನಿಖೆಯನ್ನು ಸಿಬಿಐ‌ಗೆ ಒಪ್ಪಿಸುವ ಮುಖ್ಯಮಂತ್ರಿಗಳ ನಿರ್ಧಾರ ಸ್ವಾಗತಾರ್ಹ' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. "ಆದರೆ, ಬಿಜೆಪಿ ಸಿಬಿಐಯನ್ನು ಕೈಗೊಂಬೆ ಮಾಡಿಕೊಂಡು ರಾಜಕೀಯ ಸೇಡಿಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಾ ಬಂದಿರುವುದನ್ನು ದೇಶ ಕಂಡಿದೆ" ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಆಪರೇಷನ್ ಕಮಲದ ತನಿಖೆ

ಆಪರೇಷನ್ ಕಮಲದ ತನಿಖೆ

ಸಿದ್ದರಾಮಯ್ಯ ತಮ್ಮ ಟ್ವೀಟ್‌ನಲ್ಲಿ, "ಫೋನ್ ಕದ್ದಾಲಿಕೆಯ ತನಿಖೆಯನ್ನು ನನ್ನ ಮನವಿ ಮೇರೆಗೆ ಸಿಬಿಐಗೆ ಒಪ್ಪಿಸಲಾಗಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಇತ್ತೀಚಿನ 'ಆಪರೇಷನ್ ಕಮಲ'ದಲ್ಲಿಯೂ ಕೋಟ್ಯಂತರ ರೂ.ಗಳ ದುರ್ವ್ಯವಹಾರ ನಡೆದಿದೆ ಎಂಬ ಆರೋಪ‌ ಇದೆ. ಅದರ ಬಗ್ಗೆಯೂ ಸಿಬಿಐನಿಂದ ತನಿಖೆ ನಡೆಸಬೇಕೆಂದು ಅವರನ್ನು ಆಗ್ರಹಿಸುತ್ತೇನೆ" ಎಂದು ಹೇಳಿದ್ದಾರೆ.

ಸಿಬಿಐ ಮೇಲೆ ನಂಬಿಕೆ ಬಂದಿತೆ

ಸಿಬಿಐ ಮೇಲೆ ನಂಬಿಕೆ ಬಂದಿತೆ

"ರಾಜ್ಯದಲ್ಲಿ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ನಮ್ಮ ಪಕ್ಷದ ಸತತ ಒತ್ತಾಯದ ಹೊರತಾಗಿಯೂ ಒಂದೇ ಒಂದು ಹಗರಣವನ್ನು ಸ್ವಯಂಪ್ರೇರಿತರಾಗಿ ಸಿಬಿಐ ತನಿಖೆಗೆ ಒಪ್ಪಿಸದೆ ಇದ್ದ ಬಿಜೆಪಿಗೆ ಈಗ ಇದ್ದಕ್ಕಿದ್ದಂತೆ ಕೇಂದ್ರ ತನಿಖಾ ಸಂಸ್ಥೆಯ ಮೇಲೆ ನಂಬಿಕೆ ಹುಟ್ಟಿರುವುದು ಆಶ್ಚರ್ಯಕರ ಬೆಳವಣಿಗೆ" ಎಂದು ಸಿದ್ದರಾಮಯ್ಯ ಕಾಲೆಳೆದಿದ್ದಾರೆ.

ತನಿಖೆ ಮಾಡಿಸಲು ಒತ್ತಾಯ

ತನಿಖೆ ಮಾಡಿಸಲು ಒತ್ತಾಯ

"ಫೋನ್ ಕದ್ದಾಲಿಕೆ ಬಗ್ಗೆ ಬಿಜೆಪಿ ಆರೋಪ ಮಾಡುತ್ತಿದೆ. ಅವರದೇ ಸರ್ಕಾರವಿದೆ. ತನಿಖೆ ಮಾಡಲಿ. ಹಿಂದೆಯೂ ಫೋನ್ ಕದ್ದಾಲಿಕೆ ಆಗಿದೆ. ಇಂದಿಗೂ ಕೇಂದ್ರ ಸರ್ಕಾರ ನಮ್ಮ ಫೋನ್ ಕದ್ದಾಲಿಕೆ ಮಾಡುತ್ತಿದೆ. ಹಾಗಾಗಿ ತನಿಖೆಯಾಗಲಿ. ಕಾನೂನು ಬಾಹಿರವಾಗಿ ಏನಾದರೂ ನಡೆದಿದ್ದಲ್ಲಿ, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಿ" ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದರು.

English summary
Chief Minister of Karnataka B.S.Yediyurappa announced CBI probe on phone tapping case. Former CM Siddaramaiah in a tweet said that I welcome the decision to hand over the phone tapping case to CBI.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X