ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫೋನ್ ಕದ್ದಾಲಿಕೆ ಸಿಬಿಐಗೆ : ಇದು ದ್ವೇಷದ ರಾಜಕೀಯ ಹೇಗೆ?

|
Google Oneindia Kannada News

ಬೆಂಗಳೂರು, ಆಗಸ್ಟ್ 18 : ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿರುವುದು ಚರ್ಚೆಗೆ ಕಾರಣವಾಗಿದೆ. ಬಿಜೆಪಿ ಸರ್ಕಾರ ತನಿಖೆಗೆ ಆದೇಶ ನೀಡುವ ಮೂಲಕ ರಾಜಕೀಯ ದ್ವೇಷ ಸಾಧನೆ ಮಾಡುತ್ತಿದೆಯೇ? ಎಂಬ ಪ್ರಶ್ನೆ ಎದ್ದಿದೆ. ಬಿಜೆಪಿ ನಾಯಕರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, "ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಫೋನ್ ಟ್ಯಾಪಿಂಗ್ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಬಿಐ ತನಿಖೆ‌ ನಡೆಸಲು ಆದೇಶ ಮಾಡಲಾಗಿದೆ" ಎಂದು ಹೇಳಿದರು.

ಫೋನ್ ಕದ್ದಾಲಿಕೆ ಬಗ್ಗೆ ಸಿಬಿಐ ತನಿಖೆ : ಯಾರು, ಏನು ಹೇಳಿದರು?ಫೋನ್ ಕದ್ದಾಲಿಕೆ ಬಗ್ಗೆ ಸಿಬಿಐ ತನಿಖೆ : ಯಾರು, ಏನು ಹೇಳಿದರು?

ಎಚ್. ಡಿ. ಕುಮಾರಸ್ವಾಮಿ, "ಸಿದ್ದರಾಮಯ್ಯ ಮಾತಿಗೆ ಗೌರವ ನೀಡಿ ಟೆಲಿಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿರುವುದು ಸ್ವಾಗತಾರ್ಹ. ಈ ಹಿಂದೆ 2008ರಲ್ಲಿ ಅಧಿಕಾರ ನಡೆಸಿದ್ದ ಯಡಿಯೂರಪ್ಪ, ಸಿದ್ದರಾಮಯ್ಯ ಅವಧಿಯಲ್ಲಿ ಏನೇನು ನಡೆದಿದೆ ಎಂಬುದನ್ನು ತನಿಖೆ‌ ನಡೆಸಲಿ" ಎಂದು ಪ್ರತಿಕ್ರಿಯೆ ನೀಡಿದರು.

ಫೋನ್ ಕದ್ದಾಲಿಕೆ ಪ್ರಕರಣ ಸಿಬಿಐಗೆ : ಸಿದ್ದರಾಮಯ್ಯ ಸರಣಿ ಟ್ವೀಟ್ಫೋನ್ ಕದ್ದಾಲಿಕೆ ಪ್ರಕರಣ ಸಿಬಿಐಗೆ : ಸಿದ್ದರಾಮಯ್ಯ ಸರಣಿ ಟ್ವೀಟ್

ಸರ್ಕಾರದ ತೀರ್ಮಾನದ ಹಿಂದೆ ದ್ವೇಷದ ರಾಜಕೀಯವಿದೆಯೇ? ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ, ಸಿದ್ದರಾಮಯ್ಯ, ಎಚ್. ಡಿ. ಕುಮಾರಸ್ವಾಮಿ ಸಿಬಿಐ ತನಿಖೆಯನ್ನು ಸ್ವಾಗತಿಸಿದ್ದಾರೆ. ಬಿಜೆಪಿ ನಾಯಕರು ಇದು ದ್ವೇಷ ರಾಜಕೀಯವಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಫೋನ್ ಟ್ಯಾಪಿಂಗ್ ಪ್ರಕರಣದ ತನಿಖೆ ಸಿಬಿಐಗೆ : ಯಡಿಯೂರಪ್ಪಫೋನ್ ಟ್ಯಾಪಿಂಗ್ ಪ್ರಕರಣದ ತನಿಖೆ ಸಿಬಿಐಗೆ : ಯಡಿಯೂರಪ್ಪ

ಸೇಡಿನ ರಾಜಕಾರಣದ ಪ್ರಶ್ನೆಯೇ ಇಲ್ಲ

ಸೇಡಿನ ರಾಜಕಾರಣದ ಪ್ರಶ್ನೆಯೇ ಇಲ್ಲ

"ಟೆಲಿಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿರುವುದರಲ್ಲಿ ಸೇಡಿನ ರಾಜಕಾರಣದ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ನಾಯಕರು ಸಹ ಸೂಕ್ತ ತನಿಖೆಗೆ ಒತ್ತಾಯಿಸಿದ್ದರು. ಇದೊಂದು ಗಂಭೀರ ಪ್ರಕರಣವಾಗಿರುವ ಕಾರಣ ಸಿಬಿಐ ತನಿಖೆಯಿಂದ ಮಾತ್ರ ಸತ್ಯಾಂಶ ಹೊರಬರಲಿದೆ" ಎಂದು ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ಹೇಳಿದ್ದಾರೆ.

ಸಿದ್ದರಾಮಯ್ಯ ಒತ್ತಾಯಿಸಿದ್ದರು

ಸಿದ್ದರಾಮಯ್ಯ ಒತ್ತಾಯಿಸಿದ್ದರು

ಬಿಜೆಪಿ ನಾಯಕ ಆರ್. ಅಶೋಕ ಪ್ರತಿಕ್ರಿಯೆ ಕೊಟ್ಟಿದ್ದು, "ಕದ್ದಾಲಿಕೆ ಪ್ರಕರಣದ ತನಿಖೆಗೆ ಸ್ವತಃ ಸಿದ್ದರಾಮಯ್ಯ ಒತ್ತಾಯ ಮಾಡಿದ್ದರು. ಆದರೆ, ಇದೀಗ ಕಾಂಗ್ರೆಸ್ ಉಲ್ಟಾ ಹೊಡೆದಿದೆ.‌ ಇದರಲ್ಲಿ ಯಾವುದೇ ದ್ವೇಷದ ರಾಜಕಾರಣದ ಪ್ರಶ್ನೆಯೇ ‌ಇಲ್ಲ.‌ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಯಾಗಬೇಕೆಂಬುದು ನಮ್ಮ ಒತ್ತಾಯ" ಎಂದು ಹೇಳಿದರು.

ಸೇಡಿನ ರಾಜಕೀಯ ಎಲ್ಲಿದೆ?

ಸೇಡಿನ ರಾಜಕೀಯ ಎಲ್ಲಿದೆ?

ಮಾಜಿ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿದ್ದು, 'ಟೆಲಿಫೋನ್ ಕದ್ದಾಲಿಕೆ ಪ್ರಕರಣದ ತನಿಖೆಯಾಗಬೇಕು ಎಂದು ಎಲ್ಲ ಪಕ್ಷದ ನಾಯಕರು ಒತ್ತಾಯ ಮಾಡಿದ್ದರು. ವಿಶೇಷವಾಗಿ ಹಿರಿಯ‌ ನಾಯಕರಾದ ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ಉನ್ನತ ಮಟ್ಟದ ತನಿಖೆಗೆ ಒತ್ತಾಯ ಮಾಡಿದ್ದರು. ಸತ್ಯಾಂಶ ಹೊರಬರಬೇಕೆಂಬುದು ಎಂಬುದು ಎಲ್ಲರ ಉದ್ದೇಶ. ಇದರಲ್ಲಿ ಯಾವುದೇ ಸೇಡಿನ ರಾಜಕೀಯದ ಪ್ರಶ್ನೆಯೇ ಇಲ್ಲ" ಎಂದು ಹೇಳಿದರು.

ಯಾವ ಸರ್ಕಾರ ಇದೆ ಎಂಬುದು ಮುಖ್ಯವಲ್ಲ

ಯಾವ ಸರ್ಕಾರ ಇದೆ ಎಂಬುದು ಮುಖ್ಯವಲ್ಲ

ಅನರ್ಹ ಶಾಸಕ ವಿಶ್ವನಾಥ್, "ಟೆಲಿಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿರುವುದು ಸ್ವಾಗತಾರ್ಹ. ಕೇಂದ್ರದಲ್ಲಿ ಯಾವ ಸರ್ಕಾರ ಇದೆ ಎಂಬುದು ಮುಖ್ಯವಲ್ಲ. ತನಿಖೆಯಿಂದ ಸತ್ಯಾಂಶ ಹೊರ ಬರಬೇಕು' ಎಂದರು.

English summary
Many Congress leaders demand for probe on phone tapping. Now Government ordered for CBI probe. How it is revenge politics asks Karnataka BJP leaders.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X