ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫೋನ್ ಕದ್ದಾಲಿಕೆ ಬಗ್ಗೆ ಸಿಬಿಐ ತನಿಖೆ : ಯಾರು, ಏನು ಹೇಳಿದರು?

|
Google Oneindia Kannada News

ಬೆಂಗಳೂರು, ಆಗಸ್ಟ್ 18 : ಕರ್ನಾಟಕದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದ ಫೋನ್ ಕದ್ದಾಲಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದಾಗಿ ಘೋಷಣೆ ಮಾಡಲಾಗಿದೆ. ಹಲವು ನಾಯಕರು ಸರ್ಕಾರದ ತೀರ್ಮಾನದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, "ಸಿದ್ದರಾಮಯ್ಯ. ಸೇರಿದಂತೆ ಹಲವು ನಾಯಕರು ಫೋನ್ ಟ್ಯಾಪಿಂಗ್ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಬಿಐ ತನಿಖೆ‌ ನಡೆಸಲು ಆದೇಶ ಮಾಡಲಾಗಿದೆ" ಎಂದು ಹೇಳಿದರು.

ಫೋನ್ ಟ್ಯಾಪಿಂಗ್ ಪ್ರಕರಣದ ತನಿಖೆ ಸಿಬಿಐಗೆ : ಯಡಿಯೂರಪ್ಪಫೋನ್ ಟ್ಯಾಪಿಂಗ್ ಪ್ರಕರಣದ ತನಿಖೆ ಸಿಬಿಐಗೆ : ಯಡಿಯೂರಪ್ಪ

"ಸೋಮವಾರ ಈ ಕುರಿತು ಆದೇಶ ಹೊರಡಿಸಲಾಗುವುದು.‌ ಈ ಬಗ್ಗೆ ಸಮಗ್ರ ‌ತನಿಖೆ ‌ನಡೆದು ಸತ್ಯಾಂಶ ಹೊರ ಬರಬೇಕು. ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು. ಹೀಗಾಗಿ ಫೋನ್ ಕದ್ದಾಲಿಕೆ ‌ಪ್ರಕರಣದ ತನಿಖೆಯನ್ನು ಸಿಬಿಐಗೆ‌ ವಹಿಸಲಾಗುತ್ತದೆ" ಎಂದು ತಿಳಿಸಿದರು.

ಟೆಲಿಫೋನ್ ಕದ್ದಾಲಿಕೆ ಪ್ರಕರಣ: ಸಂಕಷ್ಟದಲ್ಲಿ ಕುಮಾರಸ್ವಾಮಿಟೆಲಿಫೋನ್ ಕದ್ದಾಲಿಕೆ ಪ್ರಕರಣ: ಸಂಕಷ್ಟದಲ್ಲಿ ಕುಮಾರಸ್ವಾಮಿ

ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಬಿಜೆಪಿಯ ಕೆಲವು ಶಾಸಕರು ಮತ್ತು 17 ಅನರ್ಹಗೊಂಡಿರುವ ಶಾಸಕರ ಫೋನ್ ಕದ್ದಾಲಿಕೆ ಮಾಡಲಾಗಿದೆ ಎಂಬುದು ಆರೋಪ. ಈ ಬಗ್ಗೆ ಆಡಳಿತ ಮತ್ತು ಪ್ರತಿಪಕ್ಷ ನಾಯಕರ ನಡುವೆ ಆರೋಪ ಪ್ರತ್ಯಾರೋಪ ನಡೆಯುತ್ತಿದೆ.

ನನ್ ಹತ್ರ ಮೊಬೈಲೇ ಇಲ್ಲ: ಫೊನ್ ಕದ್ದಾಲಿಕೆ ಕುರಿತು ಸಿದ್ದರಾಮಯ್ಯ ಯೂಟರ್ನ್?ನನ್ ಹತ್ರ ಮೊಬೈಲೇ ಇಲ್ಲ: ಫೊನ್ ಕದ್ದಾಲಿಕೆ ಕುರಿತು ಸಿದ್ದರಾಮಯ್ಯ ಯೂಟರ್ನ್?

ಎಚ್. ವಿಶ್ವನಾಥ್ ಪ್ರತಿಕ್ರಿಯೆ

ಎಚ್. ವಿಶ್ವನಾಥ್ ಪ್ರತಿಕ್ರಿಯೆ

ಅನರ್ಹ ಶಾಸಕ ಎಚ್. ವಿಶ್ವನಾಥ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, "ಫೋನ್ ಕದ್ದಾಲಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿರುವುದರಿಂದ ನನಗೆ ಸಂತೋಷವಾಗಿದೆ. ಮಾಜಿ ಸಿಎಂ ಕುಮಾರಸ್ವಾಮಿ ಟೆಲಿಫೋನ್ ಕದ್ದಾಲಿಕೆಯಂಥಹ ನೀಚ ಕೆಲಸ ಮಾಡಿದ್ದಾರೆ. ಫೋನ್ ಟ್ಯಾಪಿಂಗ್ ಮಾಡಿ‌ ಬ್ಲಾಕ್ ಮೇಲ್ ಮಾಡುವ ಕೆಲಸ ಮಾಡಿದ್ದರು. ಭಯೋತ್ಪಾದಕರಿಗೂ ಇಂತಹವರಿಗೂ ಏನು ವ್ಯತ್ಯಾಸವಿದೆ?. ಇವರೂ ಒಂದು ರೀತಿಯ ಭಯೋತ್ಪಾದಕರಿದ್ದಂತೆ. ಜೆಡಿಎಸ್ ರಾಜ್ಯಾಧ್ಯಕ್ಷನಾಗಿದ್ದ ವೇಳೆ ನಮ್ಮ ಪಕ್ಷದ ಸಿಎಂ ನನ್ನ ಫೋನ್ ಕದ್ದಾಲಿಸುವ ನೀಚ ಕೆಲಸ ಮಾಡಿದ್ದಾರೆ" ಎಂದು ಹೇಳಿದರು.

ಎಲ್ಲದಕ್ಕೂ ಕಡಿವಾಣ ಬೀಳಬೇಕು

ಎಲ್ಲದಕ್ಕೂ ಕಡಿವಾಣ ಬೀಳಬೇಕು

ಚಿಕ್ಕಮಗಳೂರು ಬಿಜೆಪಿ ಶಾಸಕ, ಮಾಜಿ ಸಚಿವ ಸಿ. ಟಿ. ರವಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, "ಟೆಲಿಫೋನ್ ಟ್ಯಾಪಿಂಗ್ ಮಹಾಪರಾಧ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಅಧಿಕಾರಿಗಳು ಆಡಳಿತದಲ್ಲಿರುವವರ ಬಕೆಟ್ ಹಿಡಿಯುವ ಕೆಲಸ ಮಾಡುವ ಪ್ರವೃತ್ತಿಗೆ ಕಡಿವಾಣ ಬೀಳಬೇಕು" ಎಂದು ಹೇಳಿದರು.

ಕರ್ನಾಟಕ ಕಾಂಗ್ರೆಸ್ ಟ್ವೀಟ್

ಕರ್ನಾಟಕ ಕಾಂಗ್ರೆಸ್ ಟ್ವೀಟ್

"ಟೆಲಿಫೋನ್ ಕದ್ದಾಲಿಕೆ ಎಂಬುದೊಂದು ಸುಳ್ಳು. ದ್ವೇಷ ರಾಜಕಾರಣದ ಸಂಚು" ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ. "ಆಪರೇಷನ್ ಕಮಲ ಮುಖೇನ ಸರ್ಕಾರ ಬೀಳಿಸಿ, ಹಿಂಬಾಗಿಲ ಅನೈತಿಕ ಸಿಎಂ ಆಗಿರುವ ತಾವು ಭೂಗತ ಪಾತಕಿಗಳ ರೀತಿ ವರ್ತಿಸುತ್ತಿದ್ದೀರಿ" ಎಂದು ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಈ ತೀರ್ಮಾನ ಸ್ವಾಗತಾರ್ಹ

ಈ ತೀರ್ಮಾನ ಸ್ವಾಗತಾರ್ಹ

"ಟೆಲಿಫೋನ್ ಕದ್ದಾಲಿಕೆ ಪ್ರಕರಣದ ತನಿಖೆ ಸಿಬಿಐಗೆ ವಹಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ‌ನಿರ್ಧಾರ ಸ್ವಾಗತಾರ್ಹ. ಪೋನ್ ಕದ್ದಾಲಿಕೆ ಅಕ್ಷಮ್ಯ ಅಪರಾಧ. ಇದರಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆಯಾಗಬೇಕು. ಇದರಲ್ಲಿ ಸೇಡಿನ ರಾಜಕಾರಣದ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ನಾಯಕರು ಸಹ ಸೂಕ್ತ ತನಿಖೆಗೆ ಒತ್ತಾಯಿಸಿದ್ದರು" ಎಂದು ಕೇಂದ್ರ ಸಚಿವ ಸದಾನಂದ ಗೌಡ ಹೇಳಿದ್ದಾರೆ.

English summary
Chief Minister of Karnataka B.S.Yediyurappa announced CBI probe on phone tapping case. Who said what on the issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X