ಡಿ. ಕೆ. ಶಿವಕುಮಾರ್ ನಿವಾಸದಲ್ಲಿ 50 ಲಕ್ಷ ಹಣ ವಶಕ್ಕೆ

ಬೆಂಗಳೂರು, ಅಕ್ಟೋಬರ್ 05: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ನಡೆದಿದೆ. ಒಟ್ಟು 14 ಕಡೆ ಏಕಕಾಲದಲ್ಲಿ ನಡೆದ ದಾಳಿಯ ವೇಳೆ ಸುಮಾರು 50 ಲಕ್ಷ ಹಣವನ್ನು ವಶಕ್ಕೆ ಪಡೆಯಲಾಗಿದೆ.

ಸೋಮವಾರ ಬೆಳಗ್ಗೆ 60ಕ್ಕೂ ಹೆಚ್ಚು ಸಿಬಿಐ ಅಧಿಕಾರಿಗಳು ಸದಾಶಿವನಗರ, ಕನಕಪುರ, ದೆಹಲಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಸುಮಾರು 50 ಲಕ್ಷ ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಎನ್‌ಐ ಹೇಳಿದೆ.

ಶಿರಾ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ವೇಳೆ ಡಿ. ಕೆ. ಶಿವಕುಮಾರ್ ಮನೆಯಲ್ಲಿ ಹಣ ಸಿಕ್ಕಿರುವುದು ಕುತೂಹಲಕ್ಕೆ ಕಾರಣವಾಗಿದೆ. ಉಪ ಚುನಾವಣೆ ಖರ್ಚಿಗಾಗಿ ಹಣವನ್ನು ಸಂಗ್ರಹ ಮಾಡಲಾಗಿತ್ತೇ? ಎಂಬ ಪ್ರಶ್ನೆ ಎದ್ದಿದೆ.

CBI Recovers Rs 50 Lakh In cash During Searches At Premises Of DK Shivakumar

ಡಿ. ಕೆ. ಶಿವಕುಮಾರ್ ಮನೆಯಲ್ಲಿ ಸಿಕ್ಕ ಹಣಕ್ಕೆ ದಾಖಲೆಗಳು ಇವೆಯೇ? ಎಂದು ಸಿಬಿಐ ಅಧಿಕಾರಿಗಳು ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಡಿ. ಕೆ. ಶಿವಕುಮಾರ್‌ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಈಗಾಗಲೇ ಸಿಬಿಐ ಡಿ. ಕೆ. ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲು ಮಾಡಿದೆ. ಡಿ. ಕೆ. ಶಿವಕುಮಾರ್ ನಿವಾಸ, ಸಿಬಿಐ ಕಚೇರಿ ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ. ಆದ್ದರಿಂದ, ವಶಕ್ಕೆ ಪಡೆಯುವ ಅಥವ ಬಂಧಿಸುವ ಬಗ್ಗೆ ಪ್ರಶ್ನೆಗಳು ಎದ್ದಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+