Caste Census Scam:162 ಕೋಟಿ ರೂ ಖರ್ಚು ಮಾಡಿ ತಯಾರಿಸಿದ ಜಾತಿ ಗಣತಿ ವರದಿ ಲಭ್ಯವಿಲ್ಲ ಎಂದರೆ ಇದಕ್ಕೆ ಹೊಣೆ ಯಾರು?
ಬೆಂಗಳೂರು, ನವೆಂಬರ್ 23: ಬರೋಬ್ಬರಿ ೧೬೨ ಕೋಟಿ ರೂ. ವೆಚ್ಚ ಮಾಡಿ ತಯಾರಿಸಿದ ಜಾತಿ ಗಣತಿಯ ವರದಿಯೇ ಲಭ್ಯವಿಲ್ಲ ಎಂದರೆ ಇದಕ್ಕೆ ಹೊಣೆ ಯಾರು ? ಪೋರ್ಜರಿ ವರದಿ ತಯಾರಿಸಿ ರಾಹುಲ್ ಗಾಂಧಿಯವರನ್ನು ಮೆಚ್ಚಿಸಲು ಹೊರಟಿದ್ದೀರಾ ? ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಪ್ರಶ್ನಿಸಿದ್ದಾರೆ.
ಈ ಕುರಿತು ಮಾಜಿ ಸಚಿವ ಸುನೀಲ್ ಕುಮಾರ್ ಟ್ವೀಟ್ ಮಾಡಿದ್ದು, ಜಾತಿ ಗಣತಿ ವರದಿಯಲ್ಲಿನ ಗೋಜಲುಗಳನ್ನು ಗಮನಿಸಿದರೆ ಇದೊಂದು ದೊಡ್ಡ ಹಗರಣ ಎಂಬುದರಲ್ಲಿ ಅನುಮಾನವೇ ಇಲ್ಲ. ೧೬೨ ಕೋಟಿ ರೂ.ವೆಚ್ಚದಲ್ಲಿ ತಯಾರಿಸಿದ ವರದಿಯ ಉದ್ದೇಶವೇ ಈಡೇರುತ್ತಿಲ್ಲ ಎಂದರೆ ಅರ್ಥವೇನು ? ವರದಿ ಬಗ್ಗೆ ಇಷ್ಟೆಲ್ಲ ಚರ್ಚೆ ನಡೆಯುತ್ತಿದ್ದರೂ ಆಯೋಗದ ಹಿಂದಿನ ಅಧ್ಯಕ್ಷ ಕಾಂತರಾಜ್ ನಾಪತ್ತೆಯಾಗಿದ್ದಾರೆ.

ವರದಿಗೆ ಏಕೆ ಸಹಿ ಹಾಕಿಲ್ಲ ಎಂಬ ಬಗ್ಗೆ ಸದಸ್ಯ ಕಾರ್ಯದರ್ಶಿ ಮಗುಮ್ಮಾಗಿದ್ದಾರೆ. ಆಯೋಗದ ವರದಿಗೆ ಅವರು ಅಂದು ಸಹಿ ಹಾಕಿಲ್ಲ ಎಂದರೆ ತಾವು ಈ ವರದಿಯ ಭಾಗವಾಗಲು ತಯಾರಿಲ್ಲ ಎಂದರ್ಥವಲ್ಲವೇ ? ಅಂದರೆ ವರದಿ ತಯಾರಿ ಹಂತದಲ್ಲೇ ಭಾರಿ ಲೋಪ ಹಾಗೂ ಅವ್ಯವಹಾರ ನಡೆದಿದೆ ಎಂಬುದು ಸ್ಪಷ್ಟವಾಗುತ್ತದೆ. ಸಾಮಾಜಿಕ ನ್ಯಾಯದ ಬಗ್ಗೆ ಸಿದ್ದರಾಮಯ್ಯನವರಿಗೆ ನಿಜಕ್ಕೂ ಬದ್ಧತೆ ಇದ್ದರೆ ವರದಿ ಅಧ್ಯಯನದ ಬಗ್ಗೆ ಸಂಪುಟ ಉಪಸಮಿತಿ ರಚಿಸುವ ಇನ್ನೊಂದು ನಾಟಕ ಕೈ ಬಿಟ್ಟು ಹಿಂದಿನ ತಪ್ಪುಗಳ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಲಿ.
ಜಾತಿ ಗಣತಿ ವರದಿಯಲ್ಲಿನ ಗೋಜಲುಗಳನ್ನು ಗಮನಿಸಿದರೆ ಇದೊಂದು ದೊಡ್ಡ ಹಗರಣ ಎಂಬುದರಲ್ಲಿ ಅನುಮಾನವೇ ಇಲ್ಲ. ೧೬೨ ಕೋಟಿ ರೂ.ವೆಚ್ಚದಲ್ಲಿ ತಯಾರಿಸಿದ ವರದಿಯ ಉದ್ದೇಶವೇ ಈಡೇರುತ್ತಿಲ್ಲ ಎಂದರೆ ಅರ್ಥವೇನು ? ವರದಿ ಬಗ್ಗೆ ಇಷ್ಟೆಲ್ಲ ಚರ್ಚೆ ನಡೆಯುತ್ತಿದ್ದರೂ ಆಯೋಗದ ಹಿಂದಿನ ಅಧ್ಯಕ್ಷ ಕಾಂತರಾಜ್ ನಾಪತ್ತೆಯಾಗಿದ್ದಾರೆ. 1/5
— Sunil Kumar Karkala (@karkalasunil) November 23, 2023
ಮೂಲ ಪ್ರತಿಯೇ ಇಲ್ಲದ, ಕಾರ್ಯದರ್ಶಿಯ ಸಹಿಯೇ ಇಲ್ಲದ ಜಾತಿ ಗಣತಿ ವರದಿ ಎಂದರೆ " ಮದುವೆ ಗಂಡಿಗೆ ಬಾಶಿಂಗವೇ ಇಲ್ಲ"ದಂತೆ. ಸಿದ್ದರಾಮಯ್ಯನವರೇ ಹಿಂದುಳಿದ ವರ್ಗ ಹಾಗೂ ದಲಿತ ಸಮುದಾಯಕ್ಕೆ ಎಂಥ ದ್ರೋಹ ಮಾಡಿ ಬಿಟ್ಟಿರಿ ! ನೀವೆಸಗಿದ ಈ ತಪ್ಪನ್ನು ಇತಿಹಾಸ ಕ್ಷಮಿಸದು. ಬರೋಬ್ಬರಿ 162 ಕೋಟಿ ರೂ. ವೆಚ್ಚ ಮಾಡಿ ತಯಾರಿಸಿದ ಜಾತಿ ಗಣತಿಯ ವರದಿಯೇ ಲಭ್ಯವಿಲ್ಲ ಎಂದರೆ ಇದಕ್ಕೆ ಹೊಣೆ ಯಾರು ? ಪೋರ್ಜರಿ ವರದಿ ತಯಾರಿಸಿ ರಾಹುಲ್ ಗಾಂಧಿಯವರನ್ನು ಮೆಚ್ಚಿಸಲು ಹೊರಟಿದ್ದೀರಾ ? ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಜಾತಿ ಜನಗಣತಿ ಬೇಡ ಎನ್ನುವವರಿಗೂ ಅದರಲ್ಲೇನಿದೆ ಎಂದು ತಿಳಿದಿಲ್ಲ: ಸಿಎಂ
ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲೇ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವರದಿ ಸಲ್ಲಿಕೆಯಾದ ನಂತರ ನೋಡೋಣ. ಸುಮ್ಮನೆ ಊಹೆಗಳ ಮೇಲೆ ಮಾತನಾಡುವುದು ಒಳ್ಳೆಯ ಬೆಳವಣಿಗೆಯಲ್ಲ. ಮೂಲ ವರದಿ ಕಳೆದಿದೆ ಎಂದು ಹಾಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಯಪ್ರಕಾಶ್ ಹೇಳಿಕೆ ಬಗ್ಗೆ ಮಾತನಾಡಿ, ಅವರನ್ನು ಕರೆದು ಮಾತನಾಡುತ್ತೇನೆ ಎಂದರು.
ಜಾತಿ ಜನಗಣತಿ ಸಮಾಜವನ್ನು ಒಡೆಯುತ್ತದೆ ಎಂದಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅವರಿಗೆ ವರದಿಯಲ್ಲಿ ಏನಿದೆ ಎಂದು ಗೊತ್ತಿದೆಯೇ ಎಂದರು. ಯಾರೇ ಆಗಲಿ ಗೊತ್ತಿಲ್ಲದೆ ಮಾತನಾಡ ಬಾರದು. ಸಮಾಜ ಏಕೆ ಒಡೆಯುತ್ತೇವೆ? ಎಂದು ಪ್ರಶ್ನಿಸಿದರು. ನಿತೀಶ್ ಕುಮಾರ್ ಬಿಹಾರದಲ್ಲಿ ಜಾತಿಗಣತಿ ಸ್ವೀಕರಿಸಿದ್ದಾರೆ. ಸಮಾಜ ಒಡೆದುಬಿಟ್ಟರೆ. ಯಾವುದೇ ಹೇಳಿಕೆ ನೀಡುವಾಗ ಅದು ಸತ್ಯಾಂಶದ ಮೇಲೆ ಅವಲಂಬಿತವಾಗಿರಬೇಕು ಎಂದರು.












Click it and Unblock the Notifications