ಸಿಬಿಐನಿಂದ ಡಿ.ಕೆ. ಶಿವಕುಮಾರ್ ವಿಚಾರಣೆ ರಾಜಕೀಯ ಪ್ರೇರಿತ!
ಬೆಂಗಳೂರು, ನ. 25: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ನೀಡಿದ್ದು, ಇವತ್ತು ಅವರು ವಿಚಾರಣೆಗೆ ಹಾಜರಾಗುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕರು ಇದು ರಾಜಕೀಯ ಪ್ರೇರಿತ ಎಂದು ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿರುವ ಕೆಪಿಸಿಸಿ ಕಾಯಾಧ್ಯಕ್ಷ ಸಲೀಂ ಅಹ್ಮದ್ ಅವರು, ಡಿ.ಕೆ. ಶಿವಕುಮಾರ್ ಅವರಿಗೆ ಇವತ್ತು ವಿಚಾರಣೆಗೆ ಬರೋದಕ್ಕೆ ಹೇಳಿದ್ದಾರೆ. ಇದೆಲ್ಲ ರಾಜಕೀಯ ಪ್ರೇರಿತವಾದ ಕೆಲಸ. ಸಿಬಿಐ ಮತ್ತು ಇಡಿ ಮೂಲಕ ಕಾಂಗ್ರೆಸ್ ಮುಖಂಡರನ್ನು ಹೆದರಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದಿದ್ದಾರೆ.
ಈಗಾಗಲೇ ಡಿ.ಕೆ. ಶಿವಕುಮಾರ್ ಅವರು ಯಾವುದೇ ತಪ್ಪು ಮಾಡಿಲ್ಲ ಅಂತ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಡಿಕೆ ಶಿವಕುಮಾರ್ ಅವರ ಪರವಾಗಿದೆ. ಇಂತಹುದಕ್ಕೆ ಕಾಂಗ್ರೆಸ್ ಪಕ್ಷ ಯಾವುದೇ ಕಾರಣಕ್ಕೂ ಹೆದರುವುದಿಲ್ಲ ಎಂದಿದ್ದಾರೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸದಾಶಿವನಗರದಲ್ಲಿ ಮಾತನಾಡಿರುವ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಂಗನಾಥ್ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಯಾವುದೇ ತಪ್ಪು ಮಾಡಿಲ್ಲ. ಕಾನೂನು ಪ್ರಕಾರವೇ ನಡೆದುಕೊಂಡಿದ್ದಾರೆ. ಇವತ್ತು ಮಸ್ಕಿಯಿಂದ ವಾಪಸ್ ಬಂದಿದ್ದಾರೆ. ಸಿಬಿಐ ವಿಚಾರಣೆಗೆ ಕರೆದಿರುವ ಹಿನ್ನೆಲೆಯಲ್ಲಿ ಬಂದಿದ್ದಾರೆ ಎಂದು ಶಾಸಕ ರಂಗನಾಥ್ ಹೇಳಿಕೆ ನೀಡಿದ್ದಾರೆ.












Click it and Unblock the Notifications