ಪರೇಶ್ ಮೇಸ್ತ ಸಾವಿನ ಪ್ರಕರಣ ಸಿಬಿಐ ತನಿಖೆಗೆ

Posted By: Gururaj
Subscribe to Oneindia Kannada

ಬೆಂಗಳೂರು, ಡಿಸೆಂಬರ್ 13 : ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಪರೇಶ್ ಮೇಸ್ತ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗುತ್ತದೆ. ಬಿಜೆಪಿ ನಾಯಕರು ಸಿಬಿಐ ಅಥವ ಎನ್‌ಐಎ ತನಿಖೆಗೆ ಒತ್ತಾಯಿಸಿದ್ದರು.

ಪರೇಶ್ ಹತ್ಯೆ, ಮುಸ್ಲಿಮರ ಮೇಲೆ ಡೌಟು: ಮೇಸ್ತಾ ತಂದೆ

ಬುಧವಾರ ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಕುರಿತು ಮಾಹಿತಿ ನೀಡಿದರು. 'ಪ್ರಕರಣದ ಸತ್ಯಾಂಶ ಹೊರಬರಲಿ ಎಂಬ ಕಾರಣಕ್ಕೆ ಸಿಬಿಐ ತನಿಖೆಗೆ ವಹಿಸಲಾಗುತ್ತದೆ' ಎಂದು ಹೇಳಿದರು.

ಪರೇಶ್ ನಿಗೂಢ ಸಾವಿನ ನಂತರ ಕಟ್ಟೆಯೊಡೆಯಿತೇ ಹಿಂದುಗಳ ತಾಳ್ಮೆ?

CBI to probe Paresh Mesta murder case says Ramalinga Reddy

'ಬಿಜೆಪಿಯವರ ಒತ್ತಾಯಕ್ಕೆ ಮಣಿದು ಪ್ರಕರಣವನ್ನು ಸಿಬಿಐಗೆ ವಹಿಸುತ್ತಿಲ್ಲ. ಪರೇಶ್ ಮೇಸ್ತ ತಂದೆ-ತಾಯಿ ಒತ್ತಾಯಕ್ಕೆ ಮಣಿದು ಸಿಬಿಐ ತನಿಖೆಗೆ ವಹಿಸಲಾಗುತ್ತಿದೆ' ಎಂದು ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದರು.

ಪರೇಶ್ ಹತ್ಯೆ : ಉತ್ತರ ಕನ್ನಡ ಜಿಲ್ಲೆಯಲ್ಲಿ 3 ದಿನ ನಿಷೇಧಾಜ್ಞೆ

ಹೊನ್ನಾವರ ಮೂಲದ ಪರೇಶ್ ಮೇಸ್ತ ಶವ ಡಿಸೆಂಬರ್ 8ರಂದು ಕೆರೆಯಲ್ಲಿ ಪತ್ತೆಯಾಗಿತ್ತು. ಹೊನ್ನಾವರದಲ್ಲಿ ಗಲಭೆ ನಡೆದ ಬಳಿಕ ಪರೇಶ್ ಮೇಸ್ತ ಕಾಣೆಯಾಗಿದ್ದ. ಪರೇಶ್ ಮೇಸ್ತನನ್ನು ಕೊಲೆ ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು.

ಪರೇಶ್ ಸಾವು ಪ್ರಕರಣದ ಕಿಚ್ಚು, ಸಹಜ ಸ್ಥಿತಿಯತ್ತ ಶಿರಸಿ

paresh mesta

ಪರೇಶ್ ಮೇಸ್ತ ಸಾವು ಖಂಡಿಸಿ ಉತ್ತರ ಕನ್ನಡದಲ್ಲಿ ಭಾರೀ ಪ್ರತಿಭಟನೆಗಳು ನಡೆದಿದ್ದವು. ಕುಮಟಾ, ಶಿರಸಿಯಲ್ಲಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದಿತ್ತು.

ಹಿಂಸಾಚಾರದ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂರು ದಿನಗ ಕಾಲ ನಿಷೇಧಾಜ್ಞೆ ಹೇರಲಾಗಿದೆ. ಗುರುವಾರದ ತನಕ ಜಿಲ್ಲೆಯ ಎಲ್ಲಾ ತಾಲೂಕುಗಳ ವ್ಯಾಪ್ತಿಯಲ್ಲಿ ಸೆಕ್ಷನ್ 144 ಅನ್ವಯ ನಿ‍ಷೇಧಾಜ್ಞೆ ಇರುತ್ತದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Home Minister Ramalinga Reddy said that the government will hand-over Investigation of Paresh Mestas death to CBI. Not because BJP is urging for it, but parents of Mesta wants it. Paresh Mesta died in mysterious circumstances in Honnavara on December 8.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ