ಫೋನ್ ಟ್ಯಾಪಿಂಗ್ ಪ್ರಕರಣದ ತನಿಖೆ ಸಿಬಿಐಗೆ : ಯಡಿಯೂರಪ್ಪ

ಬೆಂಗಳೂರು, ಆಗಸ್ಟ್ 18 : ಕರ್ನಾಟಕದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಫೋನ್ ಟ್ಯಾಪಿಂಗ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗುತ್ತದೆ. ಕಳೆದ ಮೂರು ದಿನಗಳಿಂದ ಫೋನ್ ಕದ್ದಾಲಿಕೆ ಕುರಿತು ಬಿಸಿ-ಬಿಸಿ ಚರ್ಚೆ ನಡೆಯುತ್ತಿದೆ.

ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, "ಫೋನ್ ಕದ್ದಾಲಿಕೆ ಪ್ರಕರಣದ ತನಿಖೆ ಸಿದ್ದರಾಮಯ್ಯ ಸೇರಿ ಹಲವು ನಾಯಕರು ಒತ್ತಾಯ ಮಾಡಿದ್ದರು. ಆದ್ದರಿಂದ ಸಿಬಿಐ ತನಿಖೆಗೆ ಒಪ್ಪಿಸಲಾಗಿದೆ" ಎಂದು ಹೇಳಿದರು.

ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಬಿಜೆಪಿ ಶಾಸಕರು, ಈಗ ಅನರ್ಹಗೊಂಡಿರುವ ಶಾಸಕರ ಫೋನ್ ಕದ್ದಾಲಿಕೆ ಮಾಡಲಾಗಿದ ಎಂಬ ಆರೋಪ ಕೇಳಿಬಂದಿತ್ತು. ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಇದು ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿತ್ತು.

yediyurappa

ಅನರ್ಹಗೊಂಡಿರುವ ಹುಣಸೂರು ಕ್ಷೇತ್ರದ ಜೆಡಿಎಸ್ ಶಾಸಕ ಎಚ್. ವಿಶ್ವನಾಥ್, 'ಎಚ್. ಡಿ. ಕುಮಾರಸ್ವಾಮಿ ನನ್ನ ಫೋನ್‌ ಅನ್ನು ಟ್ಯಾಪ್ ಮಾಡಿಸಿದ್ದರು. ನಾನು ಪಕ್ಷದ ರಾಜ್ಯಾಧ್ಯಕ್ಷನಾಗಿದ್ದರೂ ನನ್ನ ಮೇಲೆ ಅವರಿಗೆ ನಂಬಿಕೆ ಇರಲಿಲ್ಲ" ಎಂದು ಆರೋಪ ಮಾಡಿದ್ದರು.

ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, 'ಮುಖ್ಯಮಂತ್ರಿ ಅಧಿಕಾರ ಶಾಶ್ವತವಲ್ಲ ಎಂದು ಪದೇ ಪದೇ ಹೇಳುತ್ತಿದ್ದವನು ನಾನು. ಈ ಕುರ್ಚಿಗಾಗಿ ಟೆಲಿಫೋನ್ ಕದ್ದಾಲಿಕೆ ಮಾಡಿ ಅಧಿಕಾರ ಉಳಿಸಿಕೊಳ್ಳುವ ಅವಶ್ಯಕತೆ ನನಗಿರಲಿಲ್ಲ. ಈ ವಿಚಾರದಲ್ಲಿ ಕೆಲವರು ನನ್ನ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು' ಎಂದು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದರು.

ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮುಂತಾದ ನಾಯಕರು ಸರ್ಕಾರ ಫೋನ್ ಟ್ಯಾಪಿಂಗ್ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+