2021-22 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆಗೆ CBSE ಬೋರ್ಡ್ ಡೆಡ್‌ಲೈನ್
ಬೆಂಗಳೂರು, ಡಿ. 09: 2021-22 ನೇ ಸಾಲಿನ 09 ಮತ್ತು 10 ನೇ ತರಗತಿಗಳಿಗೆ ವಿದ್ಯಾರ್ಥಿಗಳ ನೋಂದಣಿಯನ್ನು ಡಿಸೆಂಬರ್ 15 ರಿಂದ ಆರಂಭವಾಗಲಿದೆ ಎಂದು ಸೆಂಟ್ರಲ್ ಬೋರ್ಡ್ ಆಫ್ ಸೆಂಕೆಂಡರಿ ಎಜುಕೇಷನ್ (ಸಿಬಿಎಸ್ಇ) ಪ್ರಕಟಿಸಿದೆ. ಸಿಬಿಎಸ್ಇ ಅಧಿಕೃತ ವೆಬ್ ತಾಣದಲ್ಲಿ ನೋಂದಣಿ ಮಾಡಿಕೊಳ್ಳಲು ಲಿಂಕ್ ಲಭ್ಯವಾಗಲಿದೆ.
ಸಿಬಿಎಸ್ಇ ನೋಂದಾಯಿತ ಶಾಲೆಗಳು ತಮ್ಮ ವಿದ್ಯಾರ್ಥಿಗಳನ್ನು 09 ಮತ್ತು 10 ನೇ ತರಗತಿಗೆ ಆನ್‌ಲೈನ್ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳುವ ಮುನ್ನ ಶಾಲೆಗಳು ನೋಂದಣಿ ಮಾಡಿಕೊಳ್ಳಬೇಕು. ಜತೆಗೆ ಆನ್‌ಲೈನ್‌ನಲ್ಲಿ ನೋಂದಣಿ ಪ್ರಕ್ರಿಯೆ ಮಾಡಿದ ವಿದ್ಯಾರ್ಥಿಗಳಿಗೆ ಮಾತ್ರ 2022-23 ನೇ ಸಾಲಿನ ಬೋರ್ಡ್ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದು ಎಂದು ಸಿಬಿಎಸ್‌ಇ ಬೋರ್ಡ್ ತಿಳಿಸಿದೆ.
ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ನೋಂದಣಿ ಮಾಡುವ ಮುನ್ನ ಸಂಯೋಜಿತ (CBSE Affiliated) ಶಾಲೆಗಳು ಮೊದಲು ನೋಂದಣಿ ಮಾಡಿಕೊಳ್ಳಬೇಕು. ಹೊಸದಾಗಿ ಸಂಯೋಜಿತ ಶಾಲೆಗಳು ಪಾಸ್‌ವರ್ಡ್ ಸ್ವೀಕರಿಸದಿದ್ದಲ್ಲಿ, ಕೋಡ್ ಮತ್ತು ಪಾಸ್‌ವರ್ಡ್ ಪಡೆಯಲು ಸಂಬಂಧಿಸಿದ ಪ್ರಾದೇಶಿಕ ಕಚೇರಿ ಸಂಪರ್ಕಿಸಲು ಬೋರ್ಡ್ ಕೋರಿದೆ. ಇನ್ನು ನೂತನ ಸಿಬಿಎಸ್ಇ ಸಂಯೋಜಿತ ಶಾಲೆಗಳು ಮೊದಲು ಓಯಾಸಿಸ್ ಪೋರ್ಟಲ್‌ನಲ್ಲಿ ತಮ್ಮ ಮಾಹಿತಿ ಸಲ್ಲಿಸಬೇಕು. ಅಲ್ಲಿ ಮಾಹಿತಿ ಅಧಿಕೃತಗೊಂಡ ಬಳಿಕ ಮತ್ತೆ ಬದಲಾಯಿಸಲು ಸಾಧ್ಯವಿರಲ್ಲ. ಹೀಗಾಗಿ ಎಚ್ಚರಿಕೆಯಿಂದ ತುಂಬಬೇಕು. ಪ್ರಸಕ್ತ ಸಾಲಿನಿಂದ ತಿದ್ದುಪಡಿಗೆ ಅವಕಾಶವಿಲ್ಲ. ಹೀಗಾಗಿ ಶಾಲೆಯ ಎಲ್ಲಾ ಡಾಟಾ ಎಚ್ಚರಿಕೆಯಿಂದ ತುಂಬುವಂತೆ ಸಲಹೆ ನೀಡಿದೆ. ಅಪ್ಲಿಕೇಷನ್ ಪ್ರಕ್ರಿಯೆ ಸೇರಿದಂತೆ ಎಲ್ಲಾ ವಿವರಗಳನ್ನು ಸಿಬಿಎಸ್ಇ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ ಎಂದು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ ಸ್ಪಷ್ಟಪಡಿಸಿದೆ.

ಸಿಬಿಎಸ್ಇ ದ್ವಿತೀಯ ಪಿಯುಸಿ ಪರಿಕ್ಷೆಗೆ ಅವಕಾಶ: ಇನ್ನು 2021 -2022 ನೇ ಸಾಲಿನ ಸಿಬಿಎಸ್ಇ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ಖಾಸಗಿ ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆ ಡಿ. 2 ರಂದೇ ಆರಂಭಿಸಿತ್ತು. ಖಾಸಗಿ ವಿದ್ಯಾರ್ಥಿಗಳು ಮುಂಬರಲಿರುವ ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಿದೆ. 2021 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಸಿಬಿಎಸ್ಇ ಸೂಚಿಸಿದೆ. ಒಂದು ಅಥವಾ ಹೆಚ್ಚಿನ ವಿಷಯಗಳಲ್ಲಿ ತಮ್ಮ ಅಂಕ ಹೆಚ್ಚಿಸಿಕೊಳ್ಳಲು ಇಚ್ಛಿಸುವ ವಿದ್ಯಾರ್ಥಿಗಳು ಕೂಡ ನೋಂದಣಿ ಮಾಡಿಕೊಳ್ಳಬಹುದು ಎಂದು ಸೂಚಿಸಲಾಗಿದೆ. ಪರೀಕ್ಷೆಯು ಟರ್ಮ್ - 2 ಪಠ್ಯಕ್ರಮ ಆಧಾರದ ಮೇಲೆ ನಡೆಯಲಿದೆ. 2021-22 ನೇ ಶೈಕ್ಷಣಿಕ ಸಾಲಿನ ಖಾಸಗಿ ವಿದ್ಯಾರ್ಥಿಗಳಿಗೆ ಹೊಸ ರೋಲ್ ನಂಬರ್ ನೀಡಲಾಗುತ್ತದೆ. ಡಿಸೆಂಬರ್ 20 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಕೊನೆ ದಿನಾಂಕ. ಎರಡು ಸಾವಿರ ದಂಡದೊಂದಿಗೆ ಡಿ. 30 ರೊಳಗೆ ಹೆಸರು ನೊಂದಾಯಿಸಲು ಕಾಲಾವಕಾಶ ನೀಡಲಾಗಿದೆ.
Recommended Video
-
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
ಬಳ್ಳಾರಿ ಹಾಸ್ಟೆಲ್ ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಅಪ್ರಾಪ್ತ ಆರೋಪಿ ಪೊಲೀಸ್ ವಶಕ್ಕೆ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ












Click it and Unblock the Notifications