ಸಿಬಿಎಸ್‌ಇ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ

ಬೆಂಗಳೂರು, ಮಾರ್ಚ್ 28: ಸಿಬಿಎಸ್‌ಇ ಪಠ್ಯ ಕಲಿಯುವ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳು ಮರು ಪರೀಕ್ಷೆ ಎದುರಿಸಬೇಕಾಗಿದೆ.

ಪ್ರಶ್ನೆ ಪತ್ರಿಕೆ ಸೋರಿ ಆಗಿದೆ ಎಂಬ ಕಾರಣಕ್ಕೆ ಸಿಬಿಎಸ್‌ಇ ಪಠ್ಯದ 10ನೇ ತರಗತಿ ಗಣಿತ ವಿಷಯ ಹಾಗೂ 12ನೇ ತರಗತಿಯ ಅರ್ಥಶಾಸ್ತ್ರ ವಿಷಯಗಳ ಮರು ಪರೀಕ್ಷೆ ನಡೆಸಲು ಸಿಬಿಎಸ್‌ಇ ಮಂಡಳಿ ತೀರ್ಮಾನಿಸಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ಕುರಿತು ಸುತ್ತೋಲೆ ಹೊರಡಿಸಿರುವ ಸಿಬಿಎಸ್​ಇ ಮಂಡಳಿ, ಮುಂದಿನ ವಾರ ಪರೀಕ್ಷಾ ದಿನಾಂಕ ಪ್ರಕಟಿಸುವುದಾಗಿ ಸುತ್ತೋಲೆಯಲ್ಲಿ ತಿಳಿಸಿದೆ.

CBSE re exam for class 10th and 12th

ಎರಡು ದಿನಗಳ ಹಿಂದೆಯಷ್ಟೆ (ಮಾರ್ಚ್ 26)ರಂದು 10ನೇ ತರಗತಿಯ ಗಣಿತ ಹಾಗೂ 12ನೇ ತರಗತಿಯ ಅರ್ಥಶಾಸ್ತ್ರದ ಪರೀಕ್ಷೆ ನಡೆದಿತ್ತು. ಪ್ರಶ್ನೆ ಪತ್ರಿಕೆಗಳು ಸರಳವಾಗಿದ್ದವು ಎಂದು ವಿದ್ಯಾರ್ಥಿಗಳು ಹೇಳಿದ್ದರು ಆದರೆ ಈಗ ಮರು ಪರೀಕ್ಷೆ ಬರೆಯುವಂತಾಗಿದೆ.

ಇನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಇಲಾಖೆಯು ಆಂತರಿಕ ತನಿಖೆ ನಡೆಸುತ್ತದೆ ಎಂದು ಮಂಡಳಿ ತಿಳಿಸಿದ್ದು, ಪೊಲೀಸ್ ದೂರು ಸಹ ನೀಡಿದ್ದು, ಅವರೂ ಕೂಡ ತನಿಖೆ ನಡೆಸುತ್ತಿದ್ದಾರೆ. ಮರು ಪರೀಕ್ಷೆಯ ವೇಳಾಪಟ್ಟಿಯನ್ನು ಸಿಬಿಎಸ್‌ಇ ವೆಬ್‌ಸೈಟ್‌ನಲ್ಲಿ ಮುಂದಿನ ವಾರದ ಒಳಗೆ ಪ್ರಕಟಿಸಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+