CBSE Result 2024: ಸಿಬಿಎಸ್‌ಇ 10 ಮತ್ತು 12ನೇ ತರಗತಿ ಪರೀಕ್ಷೆ ಫಲಿತಾಂಶ ಬಿಡುಗಡೆ ಯಾವಾಗ ಹಾಗೂ ವೀಕ್ಷಿಸುವುದೇಗೆ?
CBSE Result 2024: CBSE 10ನೇ ತರಗತಿ ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ಫೆಬ್ರವರಿ 15, 2024ರಿಂದ ಏಪ್ರಿಲ್ 2 ರವರೆಗೂ ಎರಡು ತಿಂಗಳ ಕಾಲ ನಡೆಸಲಾಯಿತು. ಇನ್ನು ಫಲಿತಾಂಶ ಯಾವಾಗ ಬರಲಿದೆ ಹಾಗೂ ಆನ್‌ಲೈನ್‌ನಲ್ಲಿ ವೀಕ್ಷಣೆ ಮಾಡುವುದೇಗೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ಶೀಘ್ರದಲ್ಲೇ 10ನೇ ತರಗತಿ ಮತ್ತು 12ನೇ ತರಗತಿ ಫಲಿತಾಂಶಗಳನ್ನು ಪ್ರಕಟಣೆ ಮಾಡಲಿದೆ ಎನ್ನುವ ಮಾಹಿತಿ ಲಭ್ಯವಾಗುದೆ. ಫಲಿತಾಂಶಗಳ ದಿನಾಂಕವನ್ನು ಮಂಡಳಿಯು ಇನ್ನೂ ಪ್ರಕಟಿಸಿಲ್ಲ. ಇನ್ನು ಕೆಲವು ಮೂಲಗಳ ಪ್ರಕಾರ ಈ ತಿಂಗಳಿನಲ್ಲಿಯೇ ಅಂದರೆ ಮೇನಲ್ಲಿ ಘೋಷಣೆ ಆಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕಳೆದ ವರ್ಷ, CBSE 10ನೇ ತರಗತಿ ಮತ್ತು 12ನೇ ತರಗತಿಯ ಫಲಿತಾಂಶಗಳನ್ನು ಮೇ 12ರಂದು ಪ್ರಕಟಿಸಲಾಯಿತು. ಅದು ತಿಂಗಳ ಎರಡನೇ ಶುಕ್ರವಾರವಾಗಿತ್ತು. ಹಾಗೆಯೇ ಈ ವರ್ಷವೂ ಮಂಡಳಿಯು ಮೇ 10 ಎರಡನೇ ಶುಕ್ರವಾರದಂದು ಫಲಿತಾಂಶಗಳನ್ನು ಪ್ರಕಟಿಸಬಹುದು ಎಂದು ನಿರೀಕ್ಷಿಸಲಾಗಿದೆ.
ಮತ್ತೊಂದೆಡೆ CBSE ಕಾರ್ಯದರ್ಶಿ ಹಿಮಾಂಶು ಗುಪ್ತಾ ಅವರು 2024ರ 10ನೇ ತರಗತಿ ಹಾಗೂ 12ನೇ ತರಗತಿಯ ಫಲಿತಾಂಶಗಳನ್ನು ಮೇ ತಿಂಗಳಲ್ಲಿ ಘೋಷಣೆ ಮಾಡಲಾಗುವುದು ಎಂದು ಎಂದು ಮಾಹಿತಿ ನೀಡಿದ್ದಾರೆ. ಇನ್ನು ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ತಮ್ಮ ಮೂಲ ಅಂಕಪಟ್ಟಿಗಳನ್ನು ತಮ್ಮ ಶಾಲೆಗಳಿಂದ ಸಂಗ್ರಹಿಸಲು ಮಂಡಳಿಯು ಸಲಹೆ ನೀಡಿದೆ.
ಇನ್ನು CBSE 10ನೇ ತರಗತಿ ಮತ್ತು 12ನೇ ತರಗತಿ ಫಲಿತಾಂಶವನ್ನು ಮಂಡಳಿಯ ಅಧಿಕೃತ ವೆಬ್‌ಸೈಟ್ results.cbse.nic ನಲ್ಲಿ ಪ್ರಕಟಿಸಲಾಗುತ್ತದೆ. ಅಲ್ಲದೆ ಈ ಕೆಳಗೆ ನೀಡಿರುವ ವೆಬ್‌ಸೈಟ್‌ಗಳಲ್ಲೂ ಫಲಿತಾಂಶವನ್ನು ವೀಕ್ಷಣೆ ಮಾಡಬಹುದಾಗಿದೆ ಎಂದು ತಿಳಿಸಿದೆ.
ಫಲಿತಾಂಶ ವೀಕ್ಷಿಸಬಹುದಾದ ಇತರೆ ವೆಬ್‌ಸೈಟ್‌ಗಳು
* cbse.gov.in
* cbseresults.nic.in
* cbse.nic.in
* digilocker.gov.in
* results.gov.in
ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಘೋಷಿಸಿದ ನಂತರ CBSEಯ ಅಧಿಕೃತ ವೆಬ್‌ಸೈಟ್ cbseresults.nic.in ಮೂಲಕವೂ ಪರಿಶೀಲಿಸಬಹುದಾಗಿದೆ. ಎಸ್‌ಎಂಎಸ್ ಸೌಲಭ್ಯ ಮತ್ತು ಡಿಜಿಲಾಕರ್ ಮೂಲಕ ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳ ವೀಕ್ಷಣೆಗೆ ಆಯ್ಕೆಯನ್ನು ಸಹ ಹೊಂದಿರುತ್ತಾರೆ.
ಫಲಿತಾಂಶಗಳನ್ನು ಪರಿಶೀಲಿಸುವುದೇಗೆ?
1. CBSEಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
2. CBSE ಬೋರ್ಡ್ ಫಲಿತಾಂಶ 2024 ಲಿಂಕ್ ಅನ್ನು ಕ್ಲಿಕ್ ಮಾಡಿ
3. ನಂತರ ಲಾಗಿನ್ ಮಾಡಿ
4. ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ, ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ.
5. ನೀವು ಈಗ CBSE 10ನೇ ತರಗತಿ ಮತ್ತು 12ನೇ ತರಗತಿ ಫಲಿತಾಂಶಗಳನ್ನು ಪರಿಶೀಲಿಸಬಹುದು.
6 ಬಳಿಕ ನೀವು ಫಲಿತಾಂಶವನ್ನು ಪರಿಶೀಲಿಸಿದ ನಂತರ ಮಾರ್ಕ್ಸ್ ಶೀಟನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications