ಬಿಜೆಪಿ ನಾಯಕನ ಹನಿಟ್ರ್ಯಾಪ್ ವಿಡಿಯೋ, ನಾಲ್ವರ ಬಂಧನ

ಬೆಂಗಳೂರು, ನವೆಂಬರ್ 29 : ಬಿಜೆಪಿ ನಾಯಕರೊಬ್ಬರ ಹನಿಟ್ರ್ಯಾಪ್ ವಿಡಿಯೋ ಇಟ್ಟುಕೊಂಡು ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು 10 ಕೋಟಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು.

ರಾಘವೇಂದ್ರ ಅಲಿಯಾಸ್ ರಘು, ರಘು ಗೆಳತಿ ಪುಷ್ಪಾ, ಮಂಜುನಾಥ್ ಆತನ ಗೆಳತಿ ಪುಷ್ಪಾವತಿ ಬಂಧಿತ ಆರೋಪಿಗಳು. ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಬಗ್ಗೆ ನವೆಂಬರ್ 23ರಂದು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

CCB Arrests 4 On BJP Leader Viral Video Case

ದೂರಿನ ಕುರಿತು ಸಿಸಿಬಿ ತನಿಖೆ ಆರಂಭಿಸಿತ್ತು. ಸಿಸಿಬಿ ಡಿಸಿಪಿ ಕೆ. ಪಿ. ರವಿಕುಮಾರ್ ನೇತೃತ್ವದ ತಂಡ ಪ್ರಮುಖ ಆರೋಪಿ ರಾಘವೇಂದ್ರ ಸೇರಿದಂತೆ ನಾಲ್ವರನ್ನು ಬಂಧಿಸಿದೆ. ಇನ್ನೂ ಕೆಲವರು ತಲೆಮರೆಸಿಕೊಂಡಿದ್ದು, ಹುಡುಕಾಟ ನಡೆದಿದೆ.

ಯುವತಿಯ ಸೊಂಟವನ್ನು ಶಾಸಕರು ಸವರುತ್ತಿರುವ ಫೋಟೋವನ್ನು ಬಿಜೆಪಿ ಶಾಸಕರಿಗೆ ಕಳಿಸಿದ್ದ ಆರೋಪಿ ರಘು 50 ಕೋಟಿಗೆ ಬೇಡಿಕೆ ಇಟ್ಟಿದ್ದ. ಅಷ್ಟು ಹಣ ಕೊಡಲು ನಿರಾಕರಿಸಿದಾಗ ವಿಡಿಯೋದಲ್ಲಿದ್ದ ಯುವತಿ ಶಾಸಕರ ಜೊತೆ ಮಾತುಕತೆ ನಡೆಸಿ 10 ಕೋಟಿ ರೂ. ನೀಡಲು ಒಪ್ಪಿಸಿದ್ದಳು.

ಬೆಂಗಳೂರು, ಹುಬ್ಬಳ್ಳಿ, ವಿಜಯಪುರ, ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಗಳ ಚಲನವಲನದ ಬಗ್ಗೆ ಸಿಸಿಬಿ ಮಾಹಿತಿ ಸಂಗ್ರಹಿಸಿತ್ತು. ಬಂಧಿತರ ವಿಚಾರಣೆ ತೀವ್ರಗೊಳಿಸಲಾಗಿದ್ದು, ಇತರ ಆರೋಪಿಗಳಿಗಾಗಿ ಶೋಧ ನಡೆದಿದೆ.

ಈ ಜಾಲದಲ್ಲಿ ಅನೇಕ ಕಿರುತೆರೆ ನಟಿಯರು ಇರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಆರೋಪಿ ರಘು ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆ ಸೇರಿದಂತೆ ವಿವಿಧ ಠಾಣೆಗಳಲ್ಲಿ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ರಘು ಮನೆ ಮೇಲೆ ದಾಳಿ ನಡೆಸಿರುವ ಪೊಲೀಸರು ಪೆನ್ ಡ್ರೈವ್, ಮೆಮೋರಿ ಕಾರ್ಡ್‌, ಮೊಬೈಲ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಪೊಲೀಸರು ವಿಚಾರಣೆಯನ್ನು ಮುಂದುವರೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+