ಲೋಕಾಯುಕ್ತದಲ್ಲಿ ಕೋಟಿ ಡೀಲ್, ಸಿಸಿಬಿ ತನಿಖೆ
ಬೆಂಗಳೂರು, ಜೂ.26 : ಲೋಕಾಯುಕ್ತ ಕಚೇರಿಯಲ್ಲಿ ನಡೆದಿದೆ ಎನ್ನಲಾದ ಹಣದ ಬೇಡಿಕೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗುತ್ತದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರರಾವ್ ಹೇಳಿದ್ದಾರೆ. ಲೋಕಾಯುಕ್ತ ಕಚೇರಿಯಲ್ಲಿ 1 ಕೋಟಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಕೆಲವು ದಿನಗಳ ಹಿಂದೆ ಬೆಳಕಿಗೆ ಬಂದಿತ್ತು.
ಶುಕ್ರವಾರ ಲೋಕಾಯುಕ್ತ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ನ್ಯಾ.ವೈ.ಭಾಸ್ಕರರಾವ್ ಅವರು, 'ಲೋಕಾಯುಕ್ತ ಕಚೇರಿಯಲ್ಲಿಯೇ ಸರ್ಕಾರಿ ಅಧಿಕಾರಿಯೊಬ್ಬರ ಬಳಿ 1 ಕೋಟಿ ರೂ.ಗೆ ಬೇಡಿಕೆಯಿಟ್ಟ ಪ್ರಕರಣದ ಬಗ್ಗೆ ಸಿಸಿಬಿ ತನಿಖೆ ನಡೆಸಲಾಗುತ್ತದೆ. ತಮ್ಮ ಮೇಲಿನ ಆರೋಪ ಸಾಬೀತಾದರೆ ರಾಜೀನಾಮೆ ನೀಡುತ್ತೇನೆ' ಎಂದು ತಿಳಿಸಿದರು. [ಕೋಟಿ ಡೀಲ್ ವರದಿ ಕೇಳಿದ ಉಪ ಲೋಕಾಯುಕ್ತರು]

'ಈ ಪ್ರಕರಣದಲ್ಲಿ ನನ್ನ ಮಗ ಅಶ್ವಿನ್ ರಾವ್ ಹೆಸರನ್ನು ಅನಗತ್ಯವಾಗಿ ತರಲಾಗುತ್ತಿದೆ. ಈ ಪ್ರಕರಣಕ್ಕೂ ನನ್ನ ಮಗನಿಗೂ ಸಂಬಂಧವಿಲ್ಲ' ಎಂದು ಸ್ಪಷ್ಟಪಡಿಸಿದರು. 'ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನನಗೆ ಅಧಿಕಾರವಿಲ್ಲ. ಆದ್ದರಿಂದ, ಸಿಸಿಬಿ ತನಿಖೆಗೆ ವಹಿಸುತ್ತಿದ್ದೇನೆ' ಎಂದು ಭಾಸ್ಕರರಾವ್ ಹೇಳಿದರು. [ಕರ್ನಾಟಕದಿಂದ ವರ್ಗಾವಣೆ ಬಯಸಿಲ್ಲ : ಸೋನಿಯಾ ನಾರಂಗ್]
ಲೋಕಾಯುಕ್ತದಲ್ಲಿ ಕೃಷ್ಣರಾವ್ ಎಂಬವರು ಡೀಲ್ ನಡೆಸುತ್ತಿದ್ದಾರೆ ಎನ್ನುವ ಆರೋಪದ ಕುರಿತು ಮಾತನಾಡಿದ ಲೋಕಾಯುಕ್ತರು, 'ಕೃಷ್ಣ ರಾವ್ ಯಾರು? ಎಂಬುದು ನನಗೆ ತಿಳಿದಿಲ್ಲ. ಕೃಷ್ಣರಾವ್ ನನ್ನ ಸಹಾಯಕರಲ್ಲ. ಕೃಷ್ಣರಾವ್ ಅವರ ಜೊತೆ ನಾನು ಕೆಲಸ ಮಾಡಿಲ್ಲ. ನನ್ನ ಸಹಾಯಕರ ಹೆಸರು ಉಪಾಧ್ಯಾಯ' ಎಂದು ಸ್ಪಷ್ಟನೆ ನೀಡಿದರು.
ಲೋಕಾಯುಕ್ತ ಕಚೇರಿಯಲ್ಲಿ ನಡೆದ ಹಣದ ಬೇಡಿಕೆ ಪ್ರಕರಣದ ಕುರಿತು ಜನಾಧಿಕಾರ ಸಂಘರ್ಷ ಪರಿಷತ್ ನೀಡಿದ್ದ ದೂರಿನ ಅನ್ವಯ ಉಪ ಲೋಕಾಯುಕ್ತ ಸುಭಾಷ್ ಬಿ.ಅಡಿ ಅವರು ಲೋಕಾಯಕ್ತ ಎಸ್ಪಿ ಸೋನಿಯಾ ನಾರಂಗ್ ನೇತೃತ್ವದಲ್ಲಿ ತನಿಖೆ ಆದೇಶ ನೀಡಿದ್ದರು. ಆದರೆ, ಇಂದು ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ.
ಏನಿದು ಹಗರಣ : ನಿಮ್ಮ ಮೇಲೆ ದಾಳಿ ನಡೆಯಲಿದೆ, ನಿಮ್ಮ ವಿರುದ್ಧ ದಾಖಲೆಗಳನ್ನು ಸಂಗ್ರಹಣೆ ಮಾಡಲಾಗಿದೆ. ದಾಳಿ ತಪ್ಪಿಸಬೇಕಾದರೆ 1 ಕೋಟಿ ಕೊಡಿ ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಇಂಜಿನಿಯರ್ ಕೃಷ್ಣಮೂರ್ತಿ ಎಂಬುವವರಿಂದ ಕೃಷ್ಣರಾವ್ ಎಂಬುವವರು ಹಣ ಕೇಳಿದ್ದರು. ಕೃಷ್ಣರಾವ್ ಹಣ ಕೇಳಿದ್ದಾರೆ ಎಂದು ಕೃಷ್ಣಮೂರ್ತಿ ಅವರು ಸೋನಿಯಾ ನಾರಂಗ್ ಅವರ ಬಳಿ ಮೌಖಿಕವಾಗಿ ಹೇಳಿಕೊಂಡಿದ್ದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications