ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಮನಗರ, ಜಮಖಂಡಿ ಉಪ ಚುನಾವಣೆ ಸಿದ್ಧತೆಗೆ ಸಿಇಸಿ ಸೂಚನೆ

|
Google Oneindia Kannada News

ಬೆಂಗಳೂರು, ಸೆ.29: ಬಾಗಲಕೋಟೆಯ ಜಮಖಂಡಿ ವಿಧಾನಸಭಾ ಕ್ಷೇತ್ರ ಹಾಗೂ ರಾಮನಗರಕ್ಕೆ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಸಲು ಸಿದ್ಧತೆ ನಡೆದಿದೆ.

ಐದು ವರ್ಷಗಳಲ್ಲಿ ಸಿದ್ದರಾಮಯ್ಯ ಸರ್ಕಾರ ಮಾಡಿದ್ದಾದರೂ ಏನು?: ಬಿಎಸ್‌ವೈ ಐದು ವರ್ಷಗಳಲ್ಲಿ ಸಿದ್ದರಾಮಯ್ಯ ಸರ್ಕಾರ ಮಾಡಿದ್ದಾದರೂ ಏನು?: ಬಿಎಸ್‌ವೈ

ಮೇ ತಿಂಗಳಲ್ಲಿ ರಾಜ್ಯ ವಿಧಾನಸಭೆಗೆ ನಡೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರು ಚನ್ನಪಟ್ಟಣ ಮತ್ತು ರಾಮನಗರ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆದ್ದಿದ್ದರು, ಬಳಿಕ ರಾಮನಗರ ಕ್ಷೇತ್ರಕ್ಕೆ ಕುಮಾರಸ್ವಾಮಿ ರಾಜಿನಾಮೆ ನೀಡಿದ್ದರು.

ಪರಿಷತ್ ಉಪ ಚುನಾವಣೆ : ಅವಿರೋಧವಾಗಿ ಆಯ್ಕೆಯಾಗುವ ಸದಸ್ಯರ ಪರಿಚಯ ಪರಿಷತ್ ಉಪ ಚುನಾವಣೆ : ಅವಿರೋಧವಾಗಿ ಆಯ್ಕೆಯಾಗುವ ಸದಸ್ಯರ ಪರಿಚಯ

ಇನ್ನು ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಸಿದ್ದು ನ್ಯಾಮಗೌಡ ಅವರು, ಮೇ 28ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರಿಂದ ಜಮಖಂಡಿ ಕ್ಷೇತ್ರ ತೆರವಾಗಿತ್ತು. ಇದೀಗ ಈ ಎರಡೂ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

CEC directs to prepare for by poll in Ramnagara and Jamakhnadi

ಚುನಾವಣೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಶೀಘ್ರದಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗಲಿದೆ. ಒಂದು ಕ್ಷೇತ್ರ ತೆರವಾದರೆ ಆರು ತಿಂಗಳ ಒಳಗಾಗಿ ಚುನಾವಣೆಯನ್ನು ನಡೆಸಬೇಕು, ಹೀಗಾಗಿ ಉಪ ಚುನಾವಣೆ ಸಿದ್ಧತೆ ಮಾಡಿಕೊಳ್ಳುತ್ತಿದೆ.

ವಿಧಾನ ಪರಿಷತ್ ಚುನಾವಣೆ : ಸ್ಪರ್ಧೆಯಿಂದ ಹಿಂದೆ ಸರಿದ ಬಿಜೆಪಿ ವಿಧಾನ ಪರಿಷತ್ ಚುನಾವಣೆ : ಸ್ಪರ್ಧೆಯಿಂದ ಹಿಂದೆ ಸರಿದ ಬಿಜೆಪಿ

ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಅವರು ತಾವು ತೆರವುಗೊಳಿಸಿರುವ ರಾಮನಗರ ಕ್ಷೇತ್ರದಿಂದ ತಮ್ಮ ಪತ್ನಿ, ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನೇ ಅಭ್ಯರ್ಥಿಯನ್ನಾಗಿ ಮಾಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ಇನ್ನು ಜಮಖಂಡಿ ಕ್ಷೇತ್ರದಲ್ಲಿ ಮಾಜಿ ಶಾಸಕ ದಿ. ಸಿದ್ದು ನ್ಯಾಮಗೌಡ ಅವರ ಪುತ್ರ ಆನಂದ್ ನ್ಯಾಮಗೌಡ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಮಾಡುವ ಸಾಧ್ಯತೆಗಳಿವೆ. ಕೆಲ ದಿನಗಳ ಹಿಂದೆ ಬಾಗಲಕೋಟೆಗೆ ಪ್ರವಾಸ ಕೈಗೊಂಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂಬರುವ ಉಪ ಚುನಾವಣೆಯಲ್ಲಿ ದಿ. ಸಿದ್ದು ನ್ಯಾಮಗೌಡ ಅವರ ಪುತ್ರ ಆನಂದ ನ್ಯಾಮಗೌಡ ಅವರನ್ನು 30 ಸಾವಿರ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಜನರಲ್ಲಿ ಮನವಿ ಮಾಡಿದ್ದರು.

ಮೋದಿಯನ್ನು ಗೆಲ್ಲಿಸಿದ್ದ 'ಆ ವ್ಯಕ್ತಿ' ಈಗ ನಿತೀಶ್ ಪಕ್ಷದ ಅಭ್ಯರ್ಥಿ? ಮೋದಿಯನ್ನು ಗೆಲ್ಲಿಸಿದ್ದ 'ಆ ವ್ಯಕ್ತಿ' ಈಗ ನಿತೀಶ್ ಪಕ್ಷದ ಅಭ್ಯರ್ಥಿ?

ಇದೆಲ್ಲಾ ಬೆಳವಣಿಗೆಗಳನ್ನು ನೋಡಿದರೆ ಆನಂದ್ ನ್ಯಾಮಗೌಡ ಅವರು ಸ್ಫರ್ಧಿಸುವುದು ಬಹುತೇಕ ಖಚಿತ ಎನ್ನಬಹುದು. ಕೇಂದ್ರ ಚುನಾವಣಾ ಆತಯೋಗವು ಈ ಎರಡು ಕ್ಷೇತ್ರಗಳಿಗೆ ಶೀಘ್ರವೇ ಚುನಾವಣಾ ದಿನಾಂಕ ಘೋಷಿಸಲಿದೆ.

English summary
Central election commission has given direction to state to preparations for by poll in Ramnagara and Jamkhandi assembly constituencies
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X