ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಲಾ ಬೋಧನ ಅವಧಿಯಲ್ಲಿ ಶಿಕ್ಷಕರಿಗೆ ಮೊಬೈಲ್ ನಿಷೇಧ

By Nayana
|
Google Oneindia Kannada News

ಬೆಂಗಳೂರು, ಮೇ 26: ಸಾರ್ವಜನಿಕ ಶಿಕ್ಷಣ ಇಲಾಖೆಯು ಶಾಲೆಗಳಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಿದೆ. ಬೋಧನಾ ಅವಧಿಯಲ್ಲಿ ಮೊಬೈಲ್ ಬಳಕೆ ಮಾಡುವ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಶಾಲಾ ಅವಧಿಯಲ್ಲಿ ಮೊಬೈಲ್ ಫೋನುಗಳನ್ನು ಉಪಯೋಗಿಸುವುದರಿಂದ ಬೋಧನಾ ಚಟುವಟಿಕೆಗಳಿಗೆ ತೊಂದರೆ ಉಂಟಾಗುತ್ತಿದೆ. ಹಾಗಾಗಿ ಶಾಲೆಗಳಲ್ಲಿ ಉತ್ತಮ ವಾತಾವರಣವನ್ನು ಕಲ್ಪಿಸುವ ಸಲುವಾಗಿ ಮೊಬೈಲ್ ಬಳಕೆಯನ್ನು ನಿಷೇಧಿಸುವುದು ಸೂಕ್ತವೆಂದು ಭಾವಿಸಿದೆ.

ಎಲ್ಲಾ ಸರ್ಕಾರಿ ಶಾಲೆಗಳ ಮಕ್ಕಳಿಗೆ 'ಶಾಲಾ ಡೈರಿ' ಕಡ್ಡಾಯ!ಎಲ್ಲಾ ಸರ್ಕಾರಿ ಶಾಲೆಗಳ ಮಕ್ಕಳಿಗೆ 'ಶಾಲಾ ಡೈರಿ' ಕಡ್ಡಾಯ!

ಆದ್ದರಿಂದ ಶಾಲೆಯ ಮುಖ್ಯ ಶಿಕ್ಷಕರು ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಂಡು, ಶಾಲಾ ಅವಧಿಯಲ್ಲಿ ಯಾವುದೇ ಶಿಕ್ಷಕರು ಮೊಬೈಲ್‌ಗಳನ್ನು ಬಳಸದೇ ಇರುವಂತೆ ಕ್ರಮ ಕೈಗೊಳ್ಳಲು ಸೂಚಿಸಿದೆ. ಮೊಬೈಲ್ ಬಳಕೆಗೆ ಸಂಬಂಧಿಸಿದಂತೆ ಶಾಲಾ ಮುಖ್ಯ ಶಿಕ್ಷಕರಿಗೆ ವಿನಾಯಿತಿ ನೀಡಲಾಗಿದೆ. ಆದರೆ ಅವರೂ ಬೋಧನಾ ಕಾರ್ಯದ ಅವಧಿಯಲ್ಲಿ ಮೊಬೈಲ್ ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

Cell phone usage ban in schools

ಯಾವುದೇ ಶಾಲೆಗಳಲ್ಲಿ ಶಾಲಾ ಅವಧಿಯಲ್ಲಿ ಶಿಕ್ಷಕರು ಮೊಬೈಲ್ ಉಪಯೋಗಿಸುತ್ತಿರುವುದು ಗಮನಕ್ಕೆ ಬಂದಲ್ಲಿ ಅಥವಾ ಈ ಸಂಬಂಧ ದೂರುಗಳು ಬಂದಲ್ಲಿ ಶಾಲೆಯ ಮುಖ್ಯ ಶಿಕ್ಷಕರೇ ಹೊಣೆಯಾಗುತ್ತಾರೆ ಎಂದು ಎಚ್ಚರಿಕೆ ನೀಡಿದೆ.

ಮೇ 29ರಿಂದ ಸರ್ಕಾರಿ ಶಾಲೆಗಳ ಆರಂಭ: ಶಿಕ್ಷಣ ಇಲಾಖೆ 2018-19ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಾರ್ಷಿಕ ಕಾರ್ಯಸೂಚಿ ಬಿಡುಗಡೆ ಮಾಡಿದೆ. ಆ ಪ್ರಕಾರ ಮೇ 29ರಿಂದ ಶಾಲೆಗಳು ಪ್ರಾರಂಭವಾಗಲಿದೆ. ಶಾಲೆ ಆರಂಭಕ್ಕೂ ಮುನ್ನ ಶಾಲಾ ಸ್ವಚ್ಛತೆ, ವೇಳಾಪಟ್ಟಿ, ಶಾಲಾ ಅಭಿವೃದ್ಧಿ ಯೋಜನೆ ಕುರಿತು ಆಡಳಿತ ಮಂಡಳಿಯು ಆಸಕ್ತಿಬಹಿಸಬೇಕು ಎಂದು ಸೂಚಿಸಲಾಗಿದೆ.

English summary
Department of education has issued a circular that teachers should not use cell phones in school hours and excluded this restrictions for head masters.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X