Get Updates
Get notified of breaking news, exclusive insights, and must-see stories!

ಕೇಂದ್ರದಿಂದ 2025ರಲ್ಲಿ ಜನಗಣತಿ: ಈ ಕಾರಣಕ್ಕೆ ಕರ್ನಾಟಕ, ದಕ್ಷಿಣ ಭಾರತಕ್ಕೆ ಆತಂಕ!

ದೇಶದಾದ್ಯಂತ 2025ರಿಂದ ಅಂದರೆ ಮುಂದಿನ ವರ್ಷದಿಂದ ಜನಗಣತಿ ಪ್ರಾರಂಭವಾಗಲಿದೆ. ಜನಗಣತಿ ಆರಂಭಕ್ಕೂ ಮುನ್ನವೇ ಕರ್ನಾಟಕವು ಸೇರಿದಂತೆ ದಕ್ಷಿಣ ಭಾರತದಲ್ಲಿ ಆತಂಕ ಎದುರಾಗಿದೆ. ಜನಗಣತಿಯಿಂದಾಗಿ ಕರ್ನಾಟಕಕ್ಕೂ ಹಿನ್ನಡೆಯಾಗುವ ಸಾಧ್ಯತೆ ಇದೆ. ರಾಜಕೀಯ ಹಾಗೂ ಸಾಮಾಜಿಕವಾಗಿಯೂ ಹಿನ್ನಡೆಯಾಗುವ ಸಾಧ್ಯತೆ ಇದೆ.

ಕೇಂದ್ರ ಸರ್ಕಾರ ಜನಗಣತಿ ಆರಂಭಿಸುತ್ತಿದೆ. ಆದರೆ, ಸಮಸ್ಯೆ ಇರುವುದು ಜನಗಣತಿಯ ವಿಚಾರದಲ್ಲಿ ಅಲ್ಲ. ಸಮಸ್ಯೆ ಇರುವುದು ಜನಗಣತಿ ನಂತರದಲ್ಲಿ ನಡೆಯುವ ಪ್ರಕ್ರಿಯೆಗಳಿಂದ. ದೇಶದಾದ್ಯಂತ ಗಣತಿ ಸಮೀಕ್ಷೆ ಮುಂದಿನ ವರ್ಷ ಅಂದರೆ, 2025ರಲ್ಲಿ ಪ್ರಾರಂಭವಾಗುವ ಸಾಧ್ಯತೆ ಇದೆ. ಜನಗಣತಿ ಮಾಡಿದರೆ, ದಕ್ಷಿಣ ಭಾರತದಲ್ಲಿ ಜನ ಸಂಖ್ಯೆ ಕಡಿಮೆ ಇದ್ದು, ಇದರಿಂದ ರಾಜಕೀಯವಾಗಿ ಭಾರೀ ಹಿನ್ನಡೆ ಆಗಲಿದೆ.

Census in 2025 from the Center why Karnataka South India are worried

ಈ ಗಣತಿಯು 2025ರಲ್ಲಿ ಪ್ರಾರಂಭವಾಗಿ ಒಂದು ವರ್ಷ ಅಂದರೆ 2026ರ ವರೆಗೆ ನಡೆಯುವ ಸಾಧ್ಯತೆ ಇದೆ. ಆದರೆ, ಈ ಗಣತಿ ಮುಗಿದ ಕೆಲವೇ ವರ್ಷಗಳಲ್ಲಿ ಜನಗಣತಿಯ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ವಿಂಗಡಣೆಯಾಗಲಿದೆ. ಅಂದಾಜಿನ ಪ್ರಕಾರ ಮುಂದಿನ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಲೋಕಸಭಾ ಕ್ಷೇತ್ರಗಳ ವಿಂಗಡಣೆ ಆಗಲಿದೆ. ಈ ರೀತಿ ಲೋಕಸಭಾ ಕ್ಷೇತ್ರಗಳ ವಿಂಗಡಣೆ ಮಾಡುವುದರಿಂದ ಕರ್ನಾಟಕವು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳ ಲೋಕಸಭಾ ಕ್ಷೇತ್ರ ಗಣನೀಯ ಪ್ರಮಾಣದಲ್ಲಿ ಕುಸಿತ ಕಾಣಲಿದೆ.

ಏಕೆಂದರೆ ದಕ್ಷಿಣ ಭಾರತವು ಜನಸಂಖ್ಯೆ ನಿಯಂತ್ರಣವನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಬಂದಿದೆ. ಇದರಿಂದ ಉತ್ತರ ಭಾರತದ ರಾಜ್ಯಗಳಿಗೆ ಹೋಲಿಕೆ ಮಾಡಿದರೆ, ದಕ್ಷಿಣ ಭಾರತದ ರಾಜ್ಯಗಳ ಜನಸಂಖ್ಯೆ ಸಾಕಷ್ಟು ನಿಯಂತ್ರಣ ಕಂಡಿದೆ.

ಪ್ರತಿ 10 ವರ್ಷಗಳಿಗೆ ಒಮ್ಮೆ ದೇಶದಲ್ಲಿ ಈ ಹಿಂದಿನಿಂದಲೂ ಜನಗಣತಿಯನ್ನು ಮಾಡಲಾಗುತ್ತಿದೆ. ಆದರೆ, ಈ ಬಾರಿ ಅಂದರೆ 2021ರಲ್ಲಿ ದೇಶದಲ್ಲಿ ಕೋವಿಡ್‌ ಸೋಂಕು ವ್ಯಾಪಕವಾಗಿ ಇದ್ದ ಹಿನ್ನೆಲೆಯಲ್ಲಿ ಗಣತಿ ಕೆಲಸ ನಡೆದಿರಲಿಲ್ಲ. ಇದೀಗ ಮುಂದಿನ ವರ್ಷದಿಂದ ಗಣತಿ ಪ್ರಾರಂಭಿಸಲು ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಆದರೆ, ಈ ಬಗ್ಗೆ ಇನ್ನಷ್ಟೇ ಅಧಿಕೃತ ಪ್ರಕಟಣೆ ಬಿಡುಗಡೆಯಾಗಬೇಕಿದೆ.

ಗಣತಿ ಪ್ರಕ್ರಿಯೆ ಮುಗಿಯುತ್ತಿದ್ದಂತೆಯೇ ಲೋಕಸಭಾ ಕ್ಷೇತ್ರಗಳ ಪುನರ್‌ ವಿಂಗಡಣೆ ಕೆಲಸವೂ ಶುರುವಾಗಲಿದ್ದು, ಅದು 2028ರ ವೇಳೆಗೆ ಮುಕ್ತಾಯವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರಗಳ ವಿಂಗಡಣೆಯಾದರೆ, ದಕ್ಷಿಣ ಭಾರತಕ್ಕೆ ನಷ್ಟವಾಗುವ ಸಾಧ್ಯತೆ ಇದೆ. ಇದೀಗ ಲೋಕಸಭಾ ಕ್ಷೇತ್ರಗಳ ಸಂಖ್ಯೆಯು 543 ಇದೆ. ಆದರೆ, ಪರಿಷ್ಕೃತ ಲೋಕಸಭಾ ಕ್ಷೇತ್ರಗಳ ಸಂಖ್ಯೆಯು 846ಕ್ಕೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಲಿದೆ. ಆದರೆ, ಇದರಿಂದ ದಕ್ಷಿಣ ಭಾರತಕ್ಕೆ ಲಾಭವೇನೂ ಆಗುವುದಿಲ್ಲ. ಬದಲಿಗೆ ಈಗ ಇರುವ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಇಳಿಕೆಯಾಗುವ ಸಾಧ್ಯತೆ ಇದೆ.

ಯಾವ ವರ್ಷ ಲೋಕಸಭಾ ಕ್ಷೇತ್ರಗಳ ವಿಂಗಡಣೆ: ದೇಶದಲ್ಲಿ ಇಲ್ಲಿಯವರೆಗೆ ನಾಲ್ಕು ಬಾರಿ ಲೋಕಸಭಾ ಕ್ಷೇತ್ರಗಳ ವಿಂಗಡಣೆ ಮಾಡಲಾಗಿದೆ. ಸ್ವಾತಂತ್ರ್ಯ ಬಂದ ನಂತರ ಮೊದಲ ಬಾರಿ ಅಂದರೆ, 1952ರಲ್ಲಿ ಲೋಕಸಭಾ ಕ್ಷೇತ್ರಗಳ ವಿಂಗಡಣೆ ಮಾಡಲಾಯಿತು. ಇದಾದ ನಂತರ 1963,1973 ಹಾಗೂ 2002ರಲ್ಲಿ ಲೋಕಸಭಾ ಕ್ಷೇತ್ರಗಳನ್ನು ವಿಂಗಡಣೆ ಮಾಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+