ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking news; ಎಚ್‌. ಎಸ್. ದೊರೆಸ್ವಾಮಿ ವಿಧಿವಶ

|
Google Oneindia Kannada News

ಬೆಂಗಳೂರು, ಮೇ 26; ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತ ಎಚ್‌. ಎಸ್. ದೊರೆಸ್ವಾಮಿ ವಿಧಿವಶರಾದರು. ಕೋವಿಡ್‌ನಿಂದ ಚೇತರಿಸಿಕೊಂಡ ಬಳಿಕ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು, ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

Recommended Video

ಕೊರೊನದಿಂದ ಚೇತರಿಸಿಕೊಂಡರು ಉಳಿಯಲಿಲ್ಲ ಜೀವ | Oneindia Kannada

104 ವರ್ಷದ ಎಚ್‌. ಎಸ್. ದೊರೆಸ್ವಾಮಿ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಬುಧವಾರ ಮಧ್ಯಾಹ್ನ 1.30ರ ಸುಮಾರಿಗೆ ವಿಧಿವಶರಾದರು. ರಾತ್ರಿಯಿಂದ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು. ಹೃಧಯಾಘಾತದಿಂದ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಸ್ವಾತಂತ್ರ್ಯ ಹೋರಾಟಗಾರ ಎಚ್‌ಎಸ್ ದೊರೆಸ್ವಾಮಿ ಕೊರೊನಾ ಸೋಂಕಿನಿಂದ ಗುಣಮುಖ ಸ್ವಾತಂತ್ರ್ಯ ಹೋರಾಟಗಾರ ಎಚ್‌ಎಸ್ ದೊರೆಸ್ವಾಮಿ ಕೊರೊನಾ ಸೋಂಕಿನಿಂದ ಗುಣಮುಖ

Centenarian freedom fighter H S Doreswamy Passes Away

ಕೋವಿಡ್ ಸೋಂಕಿನಿಂದ ಗುಣಮುಖಗೊಂಡ ದೊರೆಸ್ವಾಮಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆದ್ದರಿಂದ ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 12 ದಿನಗಳಿಂದ ಆಸ್ಪತ್ರೆಯಲ್ಲಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

ದೊರೆಸ್ವಾಮಿ ನಕಲಿ ಸ್ವಾತಂತ್ರ್ಯ ಹೋರಾಟಗಾರ ಎಂದು ಪುನರುಚ್ಚರಿಸಿದ ಯತ್ನಾಳ್ ದೊರೆಸ್ವಾಮಿ ನಕಲಿ ಸ್ವಾತಂತ್ರ್ಯ ಹೋರಾಟಗಾರ ಎಂದು ಪುನರುಚ್ಚರಿಸಿದ ಯತ್ನಾಳ್

ಎಚ್. ಎಸ್. ದೊರೆಸ್ವಾಮಿ ಪೂರ್ಣ ಹೆಸರು ಹಾರೋಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿ. ಮಹಾತ್ಮ ಗಾಂಧಿಯ 'ಮೈ ಅರ್ಲಿ ಲೈಫ್' ಪುಸ್ತಕವು ದೊರೆಸ್ವಾಮಿ ಸ್ವಾತಂತ್ರ್ಯ ಚಳವಳಿಗೆ ಧುಮುಕಲು ಪ್ರೇರಣೆ ನೀಡಿತು.

ಏಪ್ರಿಲ್ 10, 1918ರಲ್ಲಿ ಜನಿಸಿದ್ದ ದೊರೆಸ್ವಾಮಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಹಲವು ಸಾಮಾಜಿಕ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ. ಬೆಂಗಳೂರು ಸುತ್ತಮುತ್ತಲಿನ ಸರ್ಕಾರಿ ಭೂಮಿ ಒತ್ತುವರಿ ವಿರುದ್ಧ ನಡೆದ ಹೋರಾಟದಲ್ಲಿ ಭಾಗವಹಿಸಿದ್ದರು.

ಬರವಣಿಗೆಯಲ್ಲೂ ಸಕ್ರಿಯವಾಗಿ ತೊಡಗಿಕೊಂಡಿದ್ದ ದೊರೆಸ್ವಾಮಿ 98ನೇ ವಯಸ್ಸಿನಲ್ಲಿ 'ಭೂಗಳ್ಳರು ಕಬಳಿಸಿದ ಸರ್ಕಾರಿ ಜಮೀನನ್ನು ಉಳಿಸಿದ ಹೋರಾಟ' ಎಂಬ ಪುಸ್ತಕವನ್ನು ಬರೆದಿದ್ದರು.

ಯಡಿಯೂರಪ್ಪ ಸಂತಾಪ

ಹಾರೋಹಳ್ಳಿಯಲ್ಲಿ ಹುಟ್ಟಿ ನಂತರ ಬೆಂಗಳೂರು ಸೇರಿದ್ದ ದೊರೆಸ್ವಾಮಿ, ಸ್ವಾತಂತ್ರ್ಯ ಚಳವಳಿಗೆ ಧುಮುಕಿದರು. ನಂದಿಬೆಟ್ಟದಲ್ಲಿ ಮೊದಲ ಬಾರಿಗೆ ಮಹಾತ್ಮ ಗಾಂಧಿಯನ್ನು ಕಂಡರು.

ದೊರೆಸ್ವಾಮಿ ಗೆಳೆಯರಾಗಿದ್ದ ಭದ್ರಣ್ಣ 'ಪೌರವಾಣಿ' ಎಂಬ ಪತ್ರಿಕೆಯನ್ನು ನಡೆಸುವ ಹೊಣೆಯನ್ನು ದೊರೆಸ್ವಾಮಿಗೆ ಬಿಟ್ಟು ತೀರಿಕೊಂಡರು. ಪತ್ರಿಕೆ ಜವಾಬ್ದಾರಿ ವಹಿಸಿಕೊಂಡ ಅವರು ಸ್ವಾತಂತ್ರ್ಯ ಘೋಷಣೆಗೆ ಅಡ್ಡಿಯಾದ ಬಗ್ಗೆ ಸರಣಿ ಲೇಖನಗಳನ್ನು ಬರೆದರು. ಸರ್ಕಾರ ಪತ್ರಿಕೆಗೆ ನಿರ್ಬಂಧ ಹೇರಿತು.

ಜನರನ್ನು ಎಚ್ಚರಿಸಲು ಲೇಖನ ಬರೆಯಬೇಕು ಎಂದು ತೀರ್ಮಾನಿಸಿದ ದೊರೆಸ್ವಾಮಿ 'ಪೌರವೀರ', 'ಪೌರ ಮಾರ್ತಾಂಡ', 'ಪೌರದೂತ', 'ಪೌರ ಭಾಸ್ಕರ' ಹೀಗೆ 5 ಪತ್ರಿಕೆಯ ಸಂಪಾದಕರಾಗಿ ನೋಂದಾಯಿಸಿಕೊಂಡರು.

ಅಪಾರವಾದ ಸಾಮಾಜಿಕ ಕಳಕಳಿ ಹೊಂದಿದ್ದ ದೊರೆಸ್ವಾಮಿ ಯಾವುದೇ ಸರ್ಕಾರವಿದ್ದರೂ ತಪ್ಪು ಮಾಡಿದಾಗ ಆಕ್ಷೇಪ ವ್ಯಕ್ತಪಡಿಸುತ್ತಿದ್ದರು.

2019ರ ಡಿಸೆಂಬರ್‌ನಲ್ಲಿ ಎಚ್. ಎಸ್. ದೊರೆಸ್ವಾಮಿ ಪತ್ನಿ ಲಲಿತಮ್ಮ ವಿಧಿವಶರಾಗಿದ್ದರು. ಆಗ ಶರೀರವನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಕೆಲವು ದಿನಗಳ ಹಿಂದೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ "ದೊರೆಸ್ವಾಮಿ ನಕಲಿ ಸ್ವಾತಂತ್ರ್ಯ ಹೋರಾಟಗಾರ ಪಾಕಿಸ್ತಾನದ ಏಜೆಂಟ್" ಎಂದು ನೀಡಿದ್ದ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು.

English summary
Freedom fighter and activist HS Doreswamy (103 years ) passed away due to cardiac arrest. He had recovered from covid-19 recently.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X