ಕಾಂಗ್ರೆಸ್ಸಿಗರ ಮೇಲೆ ಐಟಿ, ಇಡಿ ದಾಳಿಗೆ ಕೇಂದ್ರದ ತಯಾರಿ: ರಣದೀಪ್ ಸುರ್ಜೇವಾಲಾ

ನವದೆಹಲಿ, ಏಪ್ರಿಲ್‌ 5: ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೊಷಣೆಯಾಗುತ್ತಿದ್ದಂತೆ ಕಾಂಗ್ರೆಸ್‌ ನಾಯಕರ ಮೇಲೆ ಕೇಂದ್ರದ ಸಂಸ್ಥೆಗಳಾದ ಆದಾಯ ತೆರಿಗೆ ಇಲಾಖೆ(ಐಟಿ) ಹಾಗೂ ಜಾರಿ ನಿರ್ದೇಶನಾಲಯ(ಇಡಿ)ದಿಂದ ದಾಳಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಕರ್ನಾಟಕ ಉಸ್ತುವಾರಿ) ರಣದೀಪ್ ಸುರ್ಜೇವಾಲಾ ಆರೋಪಿಸಿದ್ದಾರೆ.

ಹೆಚ್ಚಿನ ಸಂಖ್ಯೆಯ ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಅಧಿಕಾರಿಗಳು ಶೀಘ್ರದಲ್ಲೇ ಬೆಂಗಳೂರಿಗೆ ಆಗಮಿಸುವ ನಿರೀಕ್ಷೆಯಿದೆ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಸಿದ್ಧತೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

Center preparing for IT, ED raid on Congress leaders: Randeep Surjewala

ಮುಂದಿನ ತಿಂಗಳು ನಡೆಯಲಿರುವ ಚುನಾವಣೆಗೆ ಮುನ್ನ ಬಿಜೆಪಿಯ ಹಲವಾರು ಹಾಲಿ ಶಾಸಕರು ಕಾಂಗ್ರೆಸ್‌ಗೆ ಸೇರಲು ಯೋಜಿಸುತ್ತಿದ್ದು, ಬಿಜೆಪಿಯು ಇಡಿ ಮತ್ತು ಐಟಿಯನ್ನು ಬಳಸಿಕೊಂಡು ಬಿಜೆಪಿ ಪಕ್ಷದಲ್ಲೇ ಮುಂದುವರಿಯುವಂತೆ ಒತ್ತಡ ಹೇರುತ್ತಿದೆ ಎಂದು ಅವರು ಹೇಳಿದರು.

ತರಾತುರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಪಕ್ಕದಲ್ಲಿ ಸುರ್ಜೇವಾಲಾ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಭಯದಿಂದ ಬಿಜೆಪಿಯು ಕಾಂಗ್ರೆಸ್ ಅನ್ನು ಗುರಿಯಾಗಿಸಲು ಕೇಂದ್ರೀಯ ಸಂಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಹೇಳಿದರು.

Center preparing for IT, ED raid on Congress leaders: Randeep Surjewala

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಈ ಎಲ್ಲಾ ಬ್ಲ್ಯಾಕ್‌ಮೇಲ್ ತಂತ್ರಗಳಿಗೆ ಕಾಂಗ್ರೆಸ್ ಎಂದಿಗೂ ಹೆದರಲಿಲ್ಲ. ಎಲ್ಲ ಸವಾಲುಗಳನ್ನು ಎದುರಿಸಲು ಕಾಂಗ್ರೆಸ್ ಸಿದ್ಧವಾಗಿದ್ದು, ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದರು.

ಇತ್ತೀಚಿನ ಹಲವಾರು ಚುನಾವಣಾ ಪೂರ್ವ ಸಮೀಕ್ಷೆಗಳು ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ ಎಂದು ಸೂಚಿಸಿವೆ. ಕಾಂಗ್ರೆಸ್ ನಾಯಕರು ಮತ್ತು ಅಭ್ಯರ್ಥಿಗಳನ್ನು ಗುರಿಯಾಗಿಸಲು ಕೇಂದ್ರ ಸರ್ಕಾರ ಈಗಾಗಲೇ 1,000 ಐಟಿ ಮತ್ತು ಇಡಿ ಅಧಿಕಾರಿಗಳನ್ನು ಕರ್ನಾಟಕಕ್ಕೆ ಕಳುಹಿಸಿದೆ ಎಂದು ಸಿದ್ದರಾಮಯ್ಯ ಹೇಳಿದರು.

Center preparing for IT, ED raid on Congress leaders: Randeep Surjewala

ಕಳೆದ ಮಾರ್ಚ್ 9ರಂದು ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್‌ ಶಾಸಕ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಬಿಝಡ್ ಜಮೀರ್ ಅಹ್ಮದ್ ಖಾನ್ ಗುರುವಾರ ದೆಹಲಿ ಕಚೇರಿಯಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ಹಾಜರಾಗಿದ್ದರು.

ಕಳೆದ ವರ್ಷ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕಾಂಗ್ರೆಸ್ ಶಾಸಕರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ಇಡಿ ವರದಿಯ ಆಧಾರದ ಮೇಲೆ ಅವರಿಗೆ ಸೇರಿದ ಐದು ಸ್ಥಳಗಳಲ್ಲಿ ಶೋಧ ನಡೆಸಿತ್ತು. ಬೆಂಗಳೂರು ಕಂಟೋನ್ಮೆಂಟ್‌ನಲ್ಲಿರುವ ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ನಿವಾಸ, ಸಿಲ್ವರ್ ಓಕ್ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲ್ಯಾಟ್, ಸದಾಶಿವನಗರದ ಅತಿಥಿಗೃಹ, ಬನಶಂಕರಿಯಲ್ಲಿರುವ ಜಿಕೆ ಅಸೋಸಿಯೇಟ್ಸ್ ಕಚೇರಿ ಮತ್ತು ಕಲಾಸಿಪಾಳ್ಯದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಸೇರಿದಂತೆ ಐದು ಸ್ಥಳಗಳಲ್ಲಿ ಎಸಿಬಿ ದಾಳಿ ನಡೆಸಲಾಗಿತ್ತು.

ಜಮೀರ್ ಅಹ್ಮದ್ ಖಾನ್ ಮಾಜಿ ಸಚಿವ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಆಪ್ತರಾಗಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಮತ್ತು ಐಎಂಎ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಅವರ ಮನೆ ಮೇಲೆ ಇಡಿ ದಾಳಿ ನಡೆಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+