ಬಿಜೆಪಿ ಸಂಸದರ ಮೌನಕ್ಕೆ ತರಾಟೆ ; ಶೀಘ್ರ ಬರ ಪರಿಹಾರ ಬಿಡುಗಡೆಗೆ ರಣದೀಪ್ ಸಿಂಗ್ ಸುರ್ಜೆವಾಲಾ ಒತ್ತಾಯ
ಬೆಂಗಳೂರು, ಜನವರಿ 03: ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಿರುವ ಬರ ಪರಿಹಾರ ಹಾಗೂ ಇತರೆ ಅನುದಾನಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
18177.44 ಕೋಟಿ ರೂ. ಬರ ಪರಿಹಾರಕ್ಕಾಗಿ ಕರ್ನಾಟಕದಿಂದ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. 42 ಸಾವಿರ ಕೋಟಿ ರೂ. ಜಿ.ಎಸ್.ಟಿ.ಪಾಲು ಸೇರಿ ಇತರ ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ವತಃ ಪ್ರಧಾನಿ ಮೋದಿ ಅವರನ್ನು ಭೇಟಿಯಾದರೂ ಸ್ಪಂದನೆ ಇಲ್ಲ.ಅನುದಾನ ಬಿಡುಗಡೆಗೆ ಒತ್ತಾಯಿಸದ ಬಿಜೆಪಿ ಸಂಸದರ ವಿರುದ್ಧ ಸುರ್ಜೆವಾಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ 236 ರಲ್ಲಿ 223 ತಾಲೂಕುಗಳನ್ನು ಬರ ಪೀಡಿತ ಎಂದು ಗುರುತಿಸಲಾಗಿದೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ ಎಂದು ಅಧ್ಯಯನ ನಡೆಸಿ ವರದಿ ಮಾಡಲಾಗಿದೆ. ಬರದಿಂದ ಸಣ್ಣ ಹಾಗೂ ಅತಿ ಸಣ್ಣ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ.
ಎನ್.ಡಿ.ಆರ್.ಎಫ್. ನಿಯಮಾವಳಿಯಂತೆ 18,177.44 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಅದರಲ್ಲಿ 4663.12 ಕೋಟೊ ರೂ. ಇನ್ಪುಟ್ ಸಬ್ಸಿಡಿ, 12,577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಅನುದಾನ, 363.68 ಕೋಟಿ ರೂ. ಜಾನುವಾರುಗಳ ರಕ್ಷಣೆಗೆ ಹಣ ಒದಗಿಸುವಂತೆ ಮನವಿ ಮಾಡಲಾಗಿದೆ. ಆದರೆ, ಕೇಂದ್ರ ಸರ್ಕಾರ ಮಾತ್ರ ಕಿವುಡಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಬೈರೆಗೌಡ ಅವರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಶೀಘ್ರ ಹಣ ಬಿಡುಗಡೆಗೆ ಒತ್ತಾಯಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಹಾಗೂ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಮಾತನಾಡಿದ್ದಾರೆ. ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದಾರೆ. ಇಷ್ಟಾದರೂ ಕೇಂದ್ರ ಇದುವರೆಗೂ ಬರ ಪರಿಹಾರ ಬಿಡುಗಡ ಮಾಡಿಲ್ಲ. ಇದು ಕೇಂದ್ರ ಸರ್ಕಾರ ನಡೆದುಕೊಳ್ಳುವ ರೀತಿಯೇ? ಎಂದು ಸುರ್ಜೆವಾಲಾ ಕಟುವಾಗಿ ಪ್ರಶ್ನೆ ಮಾಡಿದ್ದಾರೆ.

ಇತರ ಅನುದಾನ ಬಿಡುಗಡೆ ಮಾಡಲಿ
ಕೇವಲ ಬರ ಪರಿಹಾರ ಮಾತ್ರವಲ್ಲ ಜಿಎಸ್ ಟಿಯ ರಾಜ್ಯದ ಪಾಲು, ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡುವುದು ಬಾಕಿ ಇದೆ. ಅಲ್ಲದೆ, 14 ನೇ ಹಣಕಾಸು, 15 ನೇ ಹಣಕಾಸು ಸೇರಿ ಕೇಂದ್ರ ಪುರಸ್ಕೃತ ಯೋಜನೆಗೆ ಬರಬೇಕಾದ ಸುಮಾರು 42 ಸಾವಿರ ಕೋಟಿ ರೂ. ಅನುದಾನ ಬಾಕಿ ಇದೆ. ಆ ಅನುದಾನವನ್ನೂ ಶೀಘ್ರ ಬಿಡುಗಡೆ ಮಾಡಬೇಕು ಎಂದು ಸುರ್ಜೆವಾಲಾ ಒತ್ತಾಯಿಸಿದ್ದಾರೆ.
ಸಂಸದರು ಏನು ಮಾಡುತ್ತಿದ್ದಾರೆ.?
ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಬೆಳೆ ನಷ್ಟದಿಂದ ಕಂಗಾಲಾಗಿದ್ದಾರೆ. ಸರ್ಕಾರದಿಂದ ಪರಿಹಾರದ, ನೆರವಿನ ನಿರೀಕ್ಷೆಯಲ್ಲಿದ್ದಾರೆ. ರಾಜ್ಯದಿಂದ 26 ಬಿಜೆಪಿಯಿಂದ ಆಯ್ಕೆಯಾದ ಹಾಗೂ ಒಬ್ಬರು ಬಿಜೆಪಿ ಬೆಂಬಲಿತ ಸಂಸದರಿದ್ದಾರೆ. ಈಗ ಅವರು ಏನು ಮಾಡುತ್ತಿದ್ದಾರೆ ಎಂಬುದೇ ಅರ್ಥವಾಗದು. ಜನರ ಮುಂದೆ ಹೇಗೆ ಮುಖ ಹೊತ್ತು ಹೋಗುತ್ತಾರೆ...? ಎಂದು ಸುರ್ಜೆವಾಲಾ ಪ್ರಶ್ನಿಸಿದ್ದಾರೆ.
ಈ ಎಲ್ಲ ಸಂಸದರು ರಾಜಕೀಯ ಮಾಡದೇ ರೈತರ ಹಿತಾಸಕ್ತಿಯ ಪರವಾಗಿ ಕೆಲಸ ಮಾಡಬೇಕು. ಪ್ರಧಾನಿ ಅವರನ್ನು ಭೇಟಿಯಾಗಿ ಅನುದಾನ ಬಿಡುಗಡೆಗೆ ಒತ್ತಡ ಹೇರಬೇಕು ಎಂದು ರಣದೀಪ್ ಸಿಂಗ್ ಸುರ್ಜೆವಾಲಾ ಆಗ್ರಹಿಸಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಸರ್ಕಾರ ಸಾಲದ ಮೇಲೆ ನಡೆಯುತ್ತಿದೆ ಎಂಬುದು ಸುಳ್ಳು: ವಿರೋಧ ಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral












Click it and Unblock the Notifications