ನಳಿನ್ ಕುಮಾರ್ ಕಟೀಲ್ ರಾಜ್ಯ ರಾಜಕೀಯಕ್ಕೆ, ಬಿಜೆಪಿ ಭದ್ರಕೋಟೆ ಕರಾವಳಿಯಿಂದ ಹೊಸ ಸುದ್ದಿ
ಬೆಂಗಳೂರು, ಸೆಪ್ಟೆಂಬರ್ 23: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸತತವಾಗಿ ಮೂರು ಬಾರಿ ಸಂಸದರಾಗಿ ಆಯ್ಕೆಗೊಂಡಿದ್ದ ನಳಿನ್ ಕುಮಾರ್ ಕಟೀಲ್ ಅವರು ಸದ್ಯ ಮೂಲೆಗುಂಪಾಗಿದ್ದಾರೆ. ಕೋಮು ಸೂಕ್ಷ್ಮ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಸದಾ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕವೂ ಒಂದು ಕಾಲದಲ್ಲಿ ಕಮಲದ ಫೈರ್ ಬ್ರಾಂಡ್ ಎಂದೇ ಗುರುತಿಸಿಕೊಂಡಿದ್ದರು. ಇದೀಗ ಕಟೀಲ್ ರಾಜ್ಯ ರಾಜಕೀಯಕ್ಕ ಎಂಟ್ರಿಯಾಗಲಿದ್ದಾರೆ.
ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನಪರಿಷತ್‌ನ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಅಕ್ಟೋಬರ್ 21 ಕ್ಕೆ ಚುನಾವಣಾ ದಿನಾಂಕ ನಿಗದಿಯಾದ ಬೆನ್ನಲ್ಲೇ ಟಿಕೆಟ್‌ಗಾಗಿ ಬಿಜೆಪಿ ಪಾಳಯದಲ್ಲಿ ಭಾರೀ ಪೈಪೋಟಿ ಶುರುವಾಗಿದೆ. ಇರುವ ಒಂದು ಸ್ಥಾನಕ್ಕೆ ಹಲವು ನಾಯಕರು ಆಕಾಂಕ್ಷಿಗಳಿದ್ದು, ನಳಿನ್‌ಕುಮಾರ್ ಕಟೀಲ್, ಉದಯಕುಮಾರ್ ಶೆಟ್ಟಿ, ಪ್ರಮೋದ್ ಮಧ್ವರಾಜ್, ಕೆ.ಸುರೇಶ್ ಕುಮಾರ್ ಮತ್ತು ಸತೀಶ್ ಕಂಪಲ ಅವರ ಹೆಸರುಗಳು ಮುನ್ನೆಲೆಗೆ ಬಂದಿವೆ.

ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಜಯಗಳಿಸಿದ ನಂತರ ಕೋಟಾ ಶ್ರೀನಿವಾಸ ಪೂಜಾರಿ ಅವರು ಸ್ಥಾನವನ್ನು ತೆರವು ಮಾಡಿದ ನಂತರ ಚುನಾವಣೆ ಅನಿವಾರ್ಯವಾಯಿತು. ಇನ್ನೂ ನಳಿನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ಕೊಡಿಸಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ ಎಲ್ ಸಂತೋಷ್ ಅವರು ಒಲವು ತೋರಿದ್ದಾರೆ ಎನ್ನಲಾಗಿದೆ. 2024ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅವರಿಗೆ ಟಿಕೆಟ್ ನಿರಾಕರಿಸಲಾಗಿತ್ತು. ಹೀಗಾಗಿ ರಾಷ್ಟ್ರ ರಾಜಕಾರಣದಿಂದ ರಾಜ್ಯ ರಾಜಕಾರಣಕ್ಕೆ ಕರೆತರುವ ನಿಟ್ಟಿನಲ್ಲಿ ಬಿ ಎಲ್ ಸಂತೋಷ್ ಬಿಗ್ ಪ್ಲಾನ್ ನಡೆಸಿದ್ದಾರೆ ಎನ್ನಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕಂಪಲ, ಮಂಗಳೂರು ವಿಭಾಗೀಯ ಉಸ್ತುವಾರಿ ಉದಯ್ ಕುಮಾರ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮತ್ತು ಉಡುಪಿ ಜಿಲ್ಲಾ ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸೇರಿದಂತೆ ಹಲವು ಸ್ಪರ್ಧಿಗಳು ಒಂದೇ ಸ್ಥಾನದ ಟಿಕೆಟ್ ಗೆ ಲಾಬಿ ನಡೆಸಿದ್ದು, ಬಿ ಎಲ್ ಸಂತೋಷ್ ಅವರು ನಳಿನ್ ಕುಮಾರ್ ಕಟೀಲ್ ಅವರ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಜ್ಯ ಘಟಕವು ಹೊಸ ಮುಖಗಳಿಗೆ ಒಲವು ತೋರಿದ್ದರೂ, ಕಟೀಲು ಈಗಾಗಲೇ ಮೂರು ಬಾರಿ ಸಂಸದರಾಗಿ ಸೇವೆ ಸಲ್ಲಿಸಿರುವುದರಿಂದ ಕರಾವಳಿ ಕರ್ನಾಟಕದ ನಿಷ್ಠಾವಂತ ನಾಯಕರಿಗೆ ಈ ಸ್ಥಾನ ನೀಡಬೇಕು ಎಂಬುದು ರಾಜ್ಯ ನಾಯಕರ ಅಭಿಪ್ರಾಯವಾಗಿದೆ.
ಟಿಕೆಟ್‌ಗಾಗಿ ಬಿಲ್ಲವ ಮುಖಂಡರು ಲಾಬಿ
ಈ ಹಿಂದೆ ತಮ್ಮ ಸಮುದಾಯದ ನಾಯಕ ಕೋಟಾ ಶ್ರೀನಿವಾಸ ಪೂಜಾರಿಯವರು ಈ ಸ್ಥಾನವನ್ನು ಹೊಂದಿದ್ದರಿಂದ ಕೆಲವು ವರ್ಗದ ಬಿಲ್ಲವ ಮುಖಂಡರು ಸಹ ತಮ್ಮ ಸಮುದಾಯದ ನಾಯಕ ಸತೀಶ್ ಕಂಪಾಲಾ ಅವರ ಪರವಾಗಿ ಲಾಬಿ ನಡೆಸುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಎಂಎಲ್‌ಸಿ ಚುನಾವಣೆಗೆ ಸ್ಪರ್ಧಿಸಲು ಹಿರಿಯ ನಾಯಕ ಸಿಟಿ ರವಿ ಅವರಿಗೆ ಪಕ್ಷ ಟಿಕೆಟ್ ನೀಡಿದೆ. ಹೀಗಾಗಿ ಕಟೀಲ್ ಕಣಕ್ಕಿಳಿಯುವುದರಲ್ಲಿ ಯಾವುದೇ ತಪ್ಪಿಲ್ಲ. ಮೇಲಾಗಿ ಕಟೀಲು ನಿಷ್ಠಾವಂತ ನಾಯಕರಾಗಿದ್ದು, ಪಕ್ಷದ ಸೂಚನೆಗೆ ಮಣಿದು ಬ್ರಿಜೇಶ್ ಚೌಟ ಅವರಿಗೆ ದಕ್ಷಿಣ ಕನ್ನಡ ಲೋಕಸಭಾ ಸ್ಥಾನವನ್ನು ಬಿಟ್ಟುಕೊಟ್ಟಿದ್ದಾರೆ ಎಂದು ಹಿರಿಯ ನಾಯಕರೊಬ್ಬರು ಕಟೀಲ್ ಪರ ಕೇಂದ್ರದ ನಾಯಕತ್ವಕ್ಕೆ ತಿಳಿಸಿದ್ದಾರೆ.
ರಾಜ್ಯ ಬಿಜೆಪಿ ಕೋರ್ ಕಮಿಟಿ ಸೋಮವಾರ ಸಭೆ ಸೇರಲಿದ್ದು, ಅಂತಿಮ ನಿರ್ಧಾರ ಕೈಗೊಳ್ಳಲು ಪಕ್ಷದ ವರಿಷ್ಠರಿಗೆ ಶಿಫಾರಸು ಮಾಡಲಿದೆ ಎಂದು ಮೂಲಗಳು ತಿಳಿಸಿವೆ. ನಾಮಪತ್ರ ಸಲ್ಲಿಸಲು ಅಕ್ಟೋಬರ್ 3 ಕೊನೆಯ ದಿನವಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳು, ಸಂಸದರು, ಶಾಸಕರು ಮತ್ತು ಎಂಎಲ್‌ಸಿಗಳು ಮಾತ್ರ ಮತದಾರರಾಗಿರುವುದರಿಂದ, ಈ ಕ್ಷೇತ್ರದಲ್ಲಿ ಕೇಸರಿ ಪಕ್ಷವು ಬಹುಮತ ಪಡೆದಿರುವುದರಿಂದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲುವ ಸಾಧ್ಯತೆ ಹೆಚ್ಚಿದೆ.
-
Abdul Jabbar: ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ -
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
ಕೆಲವೇ ಗಂಟೆಗಳಲ್ಲಿ ಇರಾನ್ ಬಂದರುಗಳಿಗೆ ಅಮೆರಿಕದಿಂದ ಕಡಲ ದಿಗ್ಬಂಧನ? ಯುದ್ಧದ ಭೀತಿಯಲ್ಲಿ ಕೊಲ್ಲಿ ರಾಷ್ಟ್ರಗಳು -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ












Click it and Unblock the Notifications