HD Kumaraswamy: ಜನ ಗಣತಿಯೊಂದಿಗೆ ಜಾತಿ ಗಣತಿ: ಎಚ್‌.ಡಿ ಕುಮಾರಸ್ವಾಮಿ ಅಚ್ಚರಿಯ ಟ್ವೀಟ್!

ಕೇಂದ್ರ ಸರ್ಕಾರವು ಜಾತಿ ಗಣತಿಗೆ ಸಂಬಂಧಿಸಿದಂತೆ ಬಿಗ್‌ ಅಪ್ಡೇಟ್ಸ್‌ ಕೊಟ್ಟಿದೆ. ಕರ್ನಾಟಕದ ಜಾತಿ ಗಣತಿ ವಿಚಾರವು ಭಾರೀ ವಿವಾದವನ್ನು ಸೃಷ್ಟಿತ್ತು. ಇದರ ನಡುವೆ ಬಿಹಾರದ ಚುನಾವಣೆ ಸಮೀಪಿಸುತ್ತಿರುವಾಗಲೇ ಕೇಂದ್ರ ಸರ್ಕಾರವು ಜನ ಗಣತಿಯೊಂದಿಗೆ ಜಾತಿ ಗಣತಿಯನ್ನೂ ಮಾಡುವುದಾಗಿ ಹೇಳಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ರಿಯಾಕ್ಟ್‌ ಮಾಡಿದ್ದಾರೆ. ಜಾತಿ ಗಣತಿ ವಿಚಾರ ರಾಜ್ಯದಲ್ಲಿ ತಣ್ಣಗಾಗಿರುವಾಗಲೇ ದೇಶದಾದ್ಯಂತ ಜಾತಿ ಗಣತಿಗೆ ಕೇಂದ್ರ ಸರ್ಕಾರದ ಮುಂದಾಗಿದೆ.

ಈ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು, ಮುಂಬರುವ ಜನಗಣತಿ ಜೊತೆಯಲ್ಲಿಯೇ ಜಾತಿ ಗಣತಿಯನ್ನೂ ನಡೆಸುವ ಮಹತ್ವದ ನಿರ್ಧಾರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೈಗೊಳ್ಳಲಾಗಿದೆ. ಅವರ ಕ್ರಿಯಾಶೀಲ ನಾಯಕತ್ವದಲ್ಲಿ ಇದು ಐತಿಹಾಸಿಕ ಮತ್ತು ದೂರದೃಷ್ಟಿಯ ನಿರ್ಧಾರವಾಗಿದೆ. ಜಾತಿ ಗಣತಿಯು 1931ರ ನಂತರ ಇದೇ ಮೊದಲ ಬಾರಿಗೆ ಮುಂಬರುವ ರಾಷ್ಟ್ರೀಯ ಜನಗಣತಿಯ ಭಾಗವಾಗಲಿದೆ ಎಂಬುದು ಗಮನಾರ್ಹ ಎಂದು ಹೇಳಿದ್ದಾರೆ.

Central Caste Census Union Minister HD Kumaraswamy s Surprise Tweet

ಈ ಮಹತ್ವದ ಹೆಜ್ಜೆಯು ಭಾರತವು ಅಧಿಕೃತ, ವೈಜ್ಞಾನಿಕ ಮತ್ತು ಪಾರದರ್ಶಕವಾದ ಜಾತಿ ದತ್ತಾಂಶ ಹೊಂದಲಿದೆ. ಕೇವಲ ರಾಜಕೀಯ ಪ್ರೇರಿತ ರಾಜ್ಯ ಮಟ್ಟದ ಸಮೀಕ್ಷೆಗಳು ವಿಶ್ವಾಸಾರ್ಹತೆ, ಏಕರೂಪತೆ ಹೊಂದಿರುವುದಿಲ್ಲ ಎಂಬುದು ನನ್ನ ಸ್ಪಷ್ಟ ಅಭಿಪ್ರಾಯ. ಈ ದಿಟ್ಟ ಕ್ರಮದೊಂದಿಗೆ ಪ್ರಧಾನಿ ಶ್ರೀ ಮೋದಿ ಅವರು ಸಮಗ್ರ ಆಡಳಿತ ಮತ್ತು ದತ್ತಾಂಶ ಚಾಲಿತ ನೀತಿ ನಿರೂಪಣೆ ಬಗ್ಗೆ ಹೊಂದಿರುವ ತಮ್ಮ ಅಚಲ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ಅಲ್ಲದೇ, ಈ ಗಣತಿಯು ಕಲ್ಯಾಣ ಕಾರ್ಯಕ್ರಮಗಳನ್ನು ಬಲಗೊಳಿಸುತ್ತದೆ, ಸಾಮಾಜಿಕ ನ್ಯಾಯವನ್ನು ಇನ್ನಷ್ಟು ಖಚಿತಪಡಿಸುತ್ತದೆ ಹಾಗೂ ಸರ್ವರಿಗೂ ಸಮಾನ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಹೇಳಿದ್ದಾರೆ.

Take a Poll

ರಾಷ್ಟ್ರದ ಹಿತದೃಷ್ಟಿಯಿಂದ ಈ ನಿರ್ಣಾಯಕ ಮತ್ತು ದೂರದೃಷ್ಟಿಯ ನಿರ್ಧಾರಕ್ಕಾಗಿ ಪ್ರಧಾನಮಂತ್ರಿಯವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಈ ನಿರ್ಧಾರವನ್ನು ನಾನು, ನಮ್ಮ ಪಕ್ಷವು ಸ್ವಾಗತಿಸುತ್ತದೆ ಎಂದೂ ತಿಳಿಸಿದ್ದಾರೆ.

ಕರ್ನಾಟಕದ ಜಾತಿ ಗಣತಿಗೆ ವಿರೋಧ ಚರ್ಚೆ: ಇನ್ನು ಎಚ್‌.ಡಿ ಕುಮಾರಸ್ವಾಮಿ ಅವರು ಕರ್ನಾಟಕದಲ್ಲಿ ಜಾತಿ ಗಣತಿ ವರದಿ ಮಂಡನೆ ಮಾಡಿದಾಗ ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಇದೀಗ ಕೇಂದ್ರದ ನಿರ್ಧಾರವನ್ನು ಅವರು ಸ್ವಾಗತಿಸಿದ್ದು. ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕೆಲವರು ಜಾತಿ ಗಣತಿ ವಿಚಾರದಲ್ಲಿ ಎಚ್‌.ಡಿ ಕುಮಾರಸ್ವಾಮಿ ಅವರು ಯೂಟರ್ನ್ ತೆಗೆದುಕೊಂಡಿದ್ದಾರೆ ಎಂದೂ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ: ಇನ್ನು ಕೇಂದ್ರ ಸರ್ಕಾರದ ಜಾತಿ ಗಣತಿ ವಿಚಾರವನ್ನು ಸ್ವಾಗತಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದರೊಂದಿಗೆ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜಾತಿ ಗಣತಿ ನಡೆಸುವುದರಿಂದ ಜಾತಿ ಸಂಘರ್ಷಗಳು ಹೆಚ್ಚಾಗಿ ಸಮಾಜ ಒಡೆದುಹೋಗುತ್ತದೆ.ಜಾತಿ ಗಣತಿ ಎನ್ನುವುದು ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ಎಂದೆಲ್ಲ ವರ್ಷಗಳ ಕಾಲ ಟೀಕಾಪ್ರಹಾರ ಮಾಡುತ್ತಾ ಬಂದ ಕರ್ನಾಟಕ ಬಿಜೆಪಿ ಮತ್ತು ಅದರ ನೇತೃತ್ವದ ಸರ್ಕಾರಗಳು ಕೊನೆಗೂ ಜಾತಿ ಗಣತಿಯ ಸಾಮಾಜಿಕ ಮಹತ್ವವನ್ನು ಅರ್ಥಮಾಡಿಕೊಂಡಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ತಿವಿದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+