ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: 2.5 ಲಕ್ಷ ಮೆಟ್ರಿಕ್ ಟನ್ ಮಾವು ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ
ಬೆಂಗಳೂರು, ಜೂನ್ 25: ರಾಜ್ಯದಲ್ಲಿ ಮಾವಿನ ಬೆಲೆ ಕುಸಿತದ ಹಿನ್ನಲೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕ ಸಮ್ಮತಿ ನೀಡಿದೆ. ಇದ್ದಕಾಗಿ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು ಎಂದು ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಚಲುವರಾಯಸ್ವಾಮಿ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರೆಡೂ ಪ್ರತಿ ಕೆ.ಜಿ.ಗೆ ಎರೆಡೆರೆಡು ರೂ. ಗಳಂತೆ ಒಟ್ಟು 4 ರೂ ವೆತ್ಯಾಸ ಪಾವತಿಸಿ ಮಾರುಕಟ್ಟೆ ಚೈತನ್ಯಕ್ಕೆ ಕ್ರಮಕೈಗೊಳ್ಳಲು ಸಿದ್ದತೆ ನಡೆಸಿವೆ. 2025-26ನೇ ಸಾಲಿನ ಮಾರುಕಟ್ಟೆ ಋತುವಿನಲ್ಲಿ ಮಾವಿಗೆ PDPS ಯೋಜನೆಯ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಮಾಡಿದ ಮನವಿಗೆ ಕೇಂದ್ರ ಕೃಷಿ ಸಚಿವರೂ ಸಹ ಸಮ್ಮತಿ ನೀಡಿದ್ದಾರೆ. 2.5 ಲಕ್ಷ ಮೆಟ್ರಿಕ್ ಟನ್ ಮಾವು ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಹೇಳಿದರು.

ಮಾವು ಕರ್ನಾಟಕದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲೊಂದಾಗಿದೆ. ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರಮುಖ ಮಾವು ಬೆಳೆ ಪ್ರದೇಶಗಳಾಗಿವೆ. 2025-26ನೇ ಋತುವಿನಲ್ಲಿ 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ. ಈ ಬಾರಿ ಅಂದಾಜು 08 ರಿಂದ 10 ಲಕ್ಷ ಟನ್ ಮಾವು ಉತ್ಪಾದನೆಯಾಗಿದೆ. ಕರ್ನಾಟಕದಲ್ಲಿ, ಮಾವಿನ ಕೊಯ್ಲು ಮೇ ನಿಂದ ಜುಲೈ ವರೆಗೆ ನಡೆಯುತ್ತದೆ. ಈ ಅವಧಿಯಲ್ಲಿ, ಮಾರುಕಟ್ಟೆ ಬೆಲೆಗಳಲ್ಲಿ ಗಮನಾರ್ಹ ಏರಿಳಿತಗಳನ್ನು ಗಮನಿಸಲಾಗಿದೆ.
ಮೇ 2025 ರಲ್ಲಿ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾವಿನ ಹಣ್ಣಿನ ಮಾದರಿ ಬೆಲೆಗಳು ಕ್ವಿಂಟಾಲ್ಗೆ ರೂ.1,200 ರಿಂದ ರೂ.2,500 ರವರೆಗೆ ಇತ್ತು. ಶ್ರೀನಿವಾಸಪುರ ಮಾರುಕಟ್ಟೆಯಲ್ಲಿ ತೋತಾಪುರಿ ವೆರೈಟಿಯ ಚಾಲ್ತಿಯಲ್ಲಿರುವ ಮಾರುಕಟ್ಟೆ ಬೆಲೆಗಳು ಪ್ರತಿ ಕ್ವಿಂಟಾಲ್ಗೆ 450-550 ರೂಗೆ ಕುಸಿದಿದೆ. ನಿರಂತರ ಬೆಲೆ ಕುಸಿತದಿಂದ ಕಂಗೆಟ್ಟಿದ್ದ ಮಾವು ಬೆಳೆಗಾರರ ನೆರವಿಗೆ ಸರ್ಕಾರ ದಾವಿಸಿದೆ. ದಿನಾಂಕ: 11-06-2025 ಹಾಗೂ ದಿನಾಂಕ: 13-06-2025ರಂದು ಕೇಂದ್ರಕ್ಕೆ MIS ಯೋಜನೆಯಡಿ ಖರೀದಿಸಲು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಕಳೆದ ಶನಿವಾರ ವಿಡಿಯೋ ಸಂವಾದದ ಮೂಲಕ ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕರ್ನಾಟಕದಲ್ಲಿನ ಮಾವು ಬೆಳೆಗಾರರ ಪರಿಸ್ಥಿತಿ ಮನವರಿಕೆ ಮಾಡಲಾಗಿತ್ತು.
ಕರ್ನಾಟಕ ಕೃಷಿ ಬೆಲೆ ಆಯೋಗವು ಮಾವಿನ A1 + FL ಕೃಷಿ ವೆಚ್ಚವನ್ನು ಕ್ವಿಂಟಲ್ಗೆ 3,460 ರೂ. ಮತ್ತು C-3 ವೆಚ್ಚಕ್ಕೆ 5,466 ರೂ. ಎಂದು ಶಿಫಾರಸು ಮಾಡಿತ್ತು. ತೋಟಗಾರಿಕೆ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕ ಮಾವು ಅಭಿವೃದ್ಧಿ ಮಂಡಳಿಯನ್ನು PDPS ಅನುಷ್ಠಾನಕ್ಕಾಗಿ ರಾಜ್ಯ ಮಟ್ಟದ ಸಂಸ್ಥೆಯಾಗಿ ಗೊತ್ತುಪಡಿಸಲಾಗಿದೆ. ರಾಜ್ಯ ಒಟ್ಟಾರೆ ಅಂದಾಜು ಉತ್ಪಾದನೆ 10 ಲಕ್ಷ ಮೆ.ಟನ್. ನಲ್ಲಿ ಶೇಕಡ 25 ರಷ್ಟು ಅಂದರೆ 2.5 ಲಕ್ಷ ಮೆ.ಟನ್. ಖರೀದಿಗೆ ಸಮ್ಮತಿಸಲಾಗಿದೆ.
ಮಾರುಕಟ್ಟೆ ಮಧ್ಯಪ್ರವೇಶ ದರ ಪ್ರತಿ ಕ್ವೀಂಟಾಲ್ಗೆ 1616 ರೂ.ಗಳನ್ನು ನಿಗದಿಪಡಿಸಲಾಗಿದೆ. ಮುಂದಿನ 1 ತಿಂಗಳ ಅವಧಿಯವರೆಗೆ ಈ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ ಜಾರಿಯಲ್ಲಿದೆ. ಈ ವ್ಯಾತ್ಯಸ ದರ ಪಾವತಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶೇಕಡ 50:50 ಅನುಪಾತದಲ್ಲಿ ಬರಿಸುತ್ತಿದೆ. ಸದರಿ ಜಿಲ್ಲೆಗಳಲ್ಲಿ ಖರೀದಿಸಲಾಗುವ ಮಾವು ಉತ್ಪನ್ನಕ್ಕೆ ಪ್ರತಿ ಎಕರೆಗೆ 20 ಕ್ವಿಂಟಾಲ್ನಂತೆ ಗರಿಷ್ಟ100ಕ್ವಿಂಟಾಲ್ ಪ್ರತಿರೈತರಿಂದ ಖರೀದಿಸುವಂತೆ ಆದೇಶ ಹೊರಡಿಸಲು ಸಂಬಂಧಿಸಿದವರಿಗೆ ಸೂಚಿಸಲಾಗಿದೆ.
ಸದರಿ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಪ್ರಸ್ತುತ ತೋತಾಪುರ ಮಾವಿನ ತಳಿಗೆ ಮಾರುಕಟ್ಟೆಯಲ್ಲಿ ರೂ.500/- ರಿಂದ 600/- ಗಳಿಗೆ ಮಾರಾಟವಾಗುತ್ತಿರುವುದರಿಂದ, ಕೇಂದ್ರ ಸರ್ಕಾರದ ಗರಿಷ್ಟ ನಿಗದಿಪಡಿಸಿರುವದರ ರೂ.1,616/- ನಿಗದಿಪಡಿಸಿದ್ದು, ಮಾರುಕಟ್ಟೆ ಮಧ್ಯಪ್ರವೇಶ ದರ (MIP) ಮತ್ತು ಪ್ರಚಲಿತ ಮಾರುಕಟ್ಟೆ ಧಾರಣೆಯು ಶೇ.25 ರ ಮಿತಿಗೊಳಪಟ್ಟಿರುವಂತೆ ನಿಯಮವಿರುತ್ತದೆ. ಅಂದರೆ ರೂ.1,212/- ರಿಂದ ರೂ.1,616/- ರವರೆಗಿನ ವ್ಯತ್ಯಾಸದ ಮೊತ್ತ ಮಾತ್ರ ಯೋಜನೆಯಡಿಯಲ್ಲಿ ರೈತರಿಗೆ ಪಾವತಿಸಬೇಕಾಗಿರುತ್ತದೆ.
ಯೋಜನೆ ಅನುಷ್ಠಾನಕ್ಕಾಗಿ ಒಟ್ಟಾರೆ 2.50 ಲಕ್ಷಮೆಟ್ರಿಕ್ ಟನ್ಗೆತಗಲುವೆಚ್ಚಲೆಕ್ಕಹಾಕಿದ್ದಲ್ಲಿ ರೂ.101 ಕೋಟಿಗಳಾಗುತ್ತದೆ. ಅದರಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದಿಂದ 50:50 ರ ಅನುಪಾತದಲ್ಲಿ ವೆಚ್ಚ ಭರಿಸಬೇಕಾಗಿರುತ್ತದೆ. ಅಂದರೆ ರಾಜ್ಯಸರ್ಕಾರಕ್ಕೆ ರೂ.50.50 ಕೋಟಿಗಳು ಭರಿಸಬೇಕಾಗಿರುತ್ತದೆ ಎಂದು ಸಚಿವ ಚೆಲುವರಾಯಸ್ವಾಮಿ ಅವರು ಹೇಳಿದರು.












Click it and Unblock the Notifications