Karnataka-Maharashtra Border Row : ಗಡಿ ವಿವಾದ; ನಾಳೆ ಅಮಿತ್ ಶಾ ನೇತೃತ್ವದಲ್ಲಿ ಸಂಧಾನ ಸಭೆ
ಬೆಂಗಳೂರು,ಡಿಸೆಂಬರ್ 13: ಕರ್ನಾಟಕ ಹಾಗೂ ಮಹರಾಷ್ಟ್ರ ನಡುವಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಬುಧವಾರ ದೆಹಲಿಯಲ್ಲಿ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮುಖಾಮುಖಿ ಮಾತುಕತೆ ನಡೆಯಲಿದೆ.
ಚುನಾವಣಾ ಹತ್ತಿದವಾಗುತ್ತಿದ್ದಂತೆ ಗಡಿ ವಿವಾದದ ಖ್ಯಾತೆ ತೆಗೆದಿದ್ದು, ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕಳೆದ ಹಲವು ದಿನಗಳಿಂದ ಕಿಡಿಹೊತ್ತಿಕೊಂಡಿದ್ದು, ಇದೀಗ ಹೈಕಮಾಂಡ್ ನಾಯಕ ಮುಂದೆ ಪರಿಹಾರೋಪಾಯ ಕಂಮಡು ಬರುವ ನಿರೀಕ್ಷೆ ಇದೆ. ಇನ್ನೂ ಕರ್ನಾಟಕದಲ್ಲೂ ಬಿಜೆಪಿ ಸರ್ಕಾರ , ಮಹಾರಾಷ್ಟ್ರದಲ್ಲೂ ಬಿಜೆಪಿ ಪಾಲುದಾರ ಸರ್ಕಾರ ಇರುವುದರಿಂದ ಹೈಕಮಾಂಡ್ ನಾಯಕರಿಗೆ ಮಾತುಕತೆ ಸುಲಭವಾಗ ಬಹುದು ಎನ್ನಲಾಗಿದೆ.
ಗಡಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಮಧ್ಯಾಹ್ನ ದೆಹಲಿಗೆ ತೆರಳಲಿದ್ದಾರೆ. ಅತ್ತ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೂ ದೆಹಲಿಗೆ ಬರಲಿದ್ದಾರೆ. ಈಗಾಗಲೇ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆಯಲ್ಲಿ ರಾಜ್ಯದ ನಿಲುವನ್ನು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ ಎಂದು ಹೇಳಿದ್ದಾರೆ.

ಈಗಾಗಲೇ ಮುಖ್ಯಮಂತ್ರಿ ಬೊಮ್ಮಾಯಿ ಅವರು ಅಮಿತ್ ಶಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ವಿಚಾರ, ನಿಲುವು, ವಾಸ್ತವಾಂಶವನ್ನು ಈಗಾಗಲೇ ತಿಳಿಸಲಾಗಿದೆ. ಹಲವಾರು ವಿವರಗಳನ್ನು ಸಹ ನೀಡಲಾಗಿದೆ.

ಈ ಪ್ರಕರಣ ಸುಪ್ರಿಂ ಕೋರ್ಟ್ ನಲ್ಲಿದ್ದು, ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯ ಸಮ್ಮತ ಪ್ರಕರಣ ಗಟ್ಟಿಯಾಗಿದೆ. ಗಡಿ ವಿಚಾರದಲ್ಲಿ ನಮ್ಮ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟವಾಗಿ ಹೇಳಿದ್ದಾರೆ.












Click it and Unblock the Notifications