ಪಶುಸಂಗೋಪನೆ ಇಲಾಖೆಗೆ ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ!
ಬೆಂಗಳೂರು, ಸೆ. 06: ಕೇಂದ್ರದ ಯೋಜನೆಗಳನ್ನು ರಾಜ್ಯ ಸರ್ಕಾರ ಅನುಸರಿಸುವುದು ಸಹಜ. ಆದರೆ ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಯೋಜನೆಯನ್ನು ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಲ್ಲಿ ಜಾರಿಗೆ ತರಲು ಮುಂದಾಗಿದೆ. ಇದೇ ಸಂದರ್ಭದಲ್ಲಿ ರಾಜ್ಯಕ್ಕೆ ಭಾರಿ ಕೊಡುಯನ್ನು ಕೇಂದ್ರ ಸರ್ಕಾರ ಕೊಟ್ಟಿದೆ.
ಕಳೆದ ಒಂದು ವರ್ಷದಿಂದ ಕೇಂದ್ರ ಪಶುಸಂಗೋಪನೆ ಇಲಾಖೆಯೊಂದಿಗೆ ಸಂವಹನ ನಡೆಸಿದ ಪರಿಣಾಮ ರಾಜ್ಯಕ್ಕೆ 275 ಪಶುಸಂಜೀವಿನಿ ಸಂಚಾರಿ ಪಶು ಚಿಕಿತ್ಸಾವಾಹನ ರಾಜ್ಯಕ್ಕೆ ದೊರಕಿವೆ ಎಂದು ಪಶುಸಂಗೋಪನೆ ಇಲಾಖೆ ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಬುಧವಾರ ಮಾತನಾಡಿರುವ ಸಚಿವ ಪ್ರಭು ಚೌಹಾಣ್, "ರಾಜ್ಯದಲ್ಲಿ ಪಶುಸಂಜೀವಿನಿ ಯಶಸ್ವಿಯಾಗಿದೆ. ರೈತರ ಮನೆ ಬಾಗಿಲಿಗೆ ಸಂಚಾರಿ ಪಶು ಚಿಕಿತ್ಸಾವಾಹನ ತೆರಳಿ ಚಿಕಿತ್ಸೆ ನಿಡುತ್ತಿರುವುದರಿಂದ ರೈತರಿಗೆ ಈ ಯೋಜನೆ ಹೆಚ್ಚು ಉಪಯೋಗವಾಗುತ್ತಿದೆ. ಎಲ್ಲ ತಾಲೂಕುಗಳಿಗೂ ಇದು ವಿಸ್ತರಣೆ ಆಗಬೇಕು ಎಂದು ಪಕ್ಷಾತೀತವಾಗಿ ಎಲ್ಲ ಜನಪ್ರತಿನಿಧಿಗಳು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಪಶುಸಂಗೋಪನೆ ಇಲಾಖೆಯೊಂದಿಗೆ ನಿರಂತರವಾಗಿ ಚರ್ಚೆ ನಡೆಸಿದ್ದೇವು. ಆ ಹಿನ್ನೆಲೆಯಲ್ಲಿ ರಾಜ್ಯಕ್ಕೆ 275 ಪಶು ಚಿಕಿತ್ಸಾ ವಾಹನಗಳು ಬರುತ್ತಿವೆ ಎಂದು ಪ್ರಭು ಚೌಹಾಣ್ ಮಾಹಿತಿ ನೀಡಿದ್ದಾರೆ."
ಇಂತಹ ಯೋಜನೆಯನ್ನು ರಾಜ್ಯದಲ್ಲಿ ಮೊದಲ ಬಾರಿ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿತ್ತು ಎಂಬುದು ಕರ್ನಾಟಕಕ್ಕೆ ಹೆಮ್ಮೆಯ ವಿಚಾರ!

ದೇಶದಲ್ಲಿಯೇ ಮೊದಲನೇಯದಾಗಿ ಜಾರಿಗೆ!
ಪಶು ಚಿಕಿತ್ಸಾ ವಾಹನ ಒದಗಿಸಲು ಕೇಂದ್ರದಿಂದ ಒಟ್ಟು 44 ಕೋಟಿ ರೂ. ಅನುದಾನ ಬಂದಿದೆ. ಪ್ರತಿ ಪಶು ಚಿಕಿತ್ಸಾ ವಾಹನಕ್ಕೆ 16 ಲಕ್ಷ ರೂಪಾಯಿಗಳಷ್ಟು ವೆಚ್ಚವಾಗಲಿದೆ. ವಾರ್ಷಿಕವಾಗಿ ವಾಹನ ನಿರ್ವಹಣೆ ಪಿಪಿಪಿ ಮಾದರಿಯಲ್ಲಿ ನಡೆಯಲಿದೆ.
ಪ್ರತಿ ವರ್ಷ ವಾಹನ ಹಾಗೂ ಸಿಬ್ಬಂದಿಯ ನಿರ್ವಹಣೆಗೆ ಹೆಚ್ಚುವರಿಯಾಗಿ 50 ಕೋಟಿ ರೂ. ಅನುದಾನವನ್ನು ಕೇಂದ್ರ ಹಾಗೂ ರಾಜ್ಯದ ಪಾಲುದಾರಿಕೆಯಲ್ಲಿ ನೀಡಲಾಗಿದೆ. ರಾಜ್ಯದ ಪಾಲು ಶೇ. 40 ಹಾಗೂ ಕೇಂದ್ರದ ಪಾಲು ಶೇ. 60 ಇರಲಿದೆ ಎಂದು.
ವಾಹನದಲ್ಲಿ ಒಬ್ಬ ಪಶುವೈದ್ಯ, ಪಶುವೈದ್ಯಕೀಯ ಸಹಾಯಕ ಹಾಗೂ ನುರಿತ ಚಾಲಕ, ಪರಿಚಾರಕ ಇರಲಿದ್ದಾರೆ. ಜೊತೆಗೆ ಪಶು ಕಲ್ಯಾಣ ಸಹಾಯವಾಣಿ ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಸ್ಥಾಪನೆ ಆಗಿದ್ದು ಅತ್ಯಂತ ಯಶಸ್ವಿಯಾಗಿ ರೈತರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಪಶುಸಂಗೋಪನೆ ಇಲಾಖೆ ಕಾರ್ಯಪ್ರವೃತ್ತವಾಗಿದೆ ಎಂದು ಸಚಿವ ಚೌಹಾಣ್ ವಿವರಿಸಿದ್ದಾರೆ.

14 ರಾಜ್ಯಗಳಿಗೆ ರಾಜ್ಯದ ಮಾದರಿ ಯೋಜನೆ ವಿಸ್ತರಣೆ!
ದೆಹಲಿ ಪ್ರವಾಸದ ಸಮಯದಲ್ಲಿ ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸಿದಾಗ ಕರ್ನಾಟಕದಲ್ಲಿ ಕೈಗೊಂಡ ನೂತನ ಪ್ರಯೋಗ ರೈತರ ಮನೆ ಬಾಗಿಲಿಗೆ ಪಶುಸಂಜೀವಿನಿ ಕುರಿತು ವಿವರಿಸಿದ್ದೇವು. ಈ ಸಂದರ್ಭದಲ್ಲಿ ಅಂದಿನ ಕೇಂದ್ರ ಪಶುಸಂಗೋಪನೆ ಸಚಿವರಾಗಿದ್ದ ಗಿರಿರಾಜ್ ಸಿಂಗ್ ರಾಜ್ಯದ ಈ ಯೋಜನೆಯನ್ನು ಶ್ಲಾಘನೆ ಮಾಡಿದ್ದರು.
ಅಲ್ಲದೇ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ನಡೆಸಿ ದೇಶದ ರೈತರ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಕಾಯಕಲ್ಪ ಒದಗಿಸುವ ನಿಟ್ಟಿನಲ್ಲಿ ಇದನ್ನು ದೇಶಾದ್ಯಂತ ವಿಸ್ತರಣೆ ಮಾಡಲು ಚರ್ಚೆ ನಡೆಸುವುದಾಗಿ ತಿಳಿಸಿದ್ದರು. ಸದ್ಯ ದೇಶದ 14 ರಾಜ್ಯಗಳಿಗೆ ಕೇಂದ್ರದಿಂದ ಸಂಚಾರಿ ಪಶುಶಸ್ತ್ರ ಚಿಕಿತ್ಸಾವಾಹನ ನೀಡಲಾಗಿದೆ. ರಾಜ್ಯದ ಯೋಜನಾ ಮಾದರಿ ದೇಶಕ್ಕೆ ವಿಸ್ತರಣೆ ಆಗುತ್ತಿದೆ ಎಂದು ಸಚಿವ ಪ್ರಭು ಚೌಹಾಣ್ ವಿವರಿಸಿದ್ದಾರೆ.

ಕಾಲುಬಾಯಿ ರೋಗ: ರಾಜ್ಯಕ್ಕೆ 50 ಲಕ್ಷ ಡೋಸ್
ಸದ್ಯ ರಾಜ್ಯದಲ್ಲಿ ಕಾಲುಬಾಯಿ ರೋಗ ನಿಯಂತ್ರಣದಲ್ಲಿ ಪಶುಸಂಗೋಪನೆ ಇಲಾಖೆ ತೊಡಗಿದೆ. ಸದ್ಯ ಕೇಂದ್ರದಿಂದ ರಾಜ್ಯದಲ್ಲಿ 50 ಲಕ್ಷ ಡೋಸ್ ದೊರೆತಿದ್ದು ರಾಜ್ಯದಲ್ಲಿ ಕಾಲುಬಾಯಿ ರೋಗ ಕಂಡಬಂದ ಪ್ರದೇಶದಲ್ಲಿ ಆದ್ಯತೆಯ ಮೇಲೆ ಲಸಿಕೆ ವಿತರಣೆ ತುರ್ತಾಗಿ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ರೋಗೋದ್ರೇಕ ಕಂಡುಬಂದ ಜಿಲ್ಲೆಗಳಲ್ಲಿ ರಿಂಗ್ ವ್ಯಾಕ್ಸಿನ್‌ಗೆ ಹೆಚ್ಚು ಆದ್ಯತೆ ನೀಡಿ ಕಾಲುಬಾಯಿ ರೋಗವನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ತರುತ್ತೇವೆ ಎಂದು ಸಚಿವ ಚೌಹಾಣ್ ಭರವಸೆ ನೀಡಿದ್ದಾರೆ.
Recommended Video

ಶೀಘ್ರದಲ್ಲಿ ಸೇವೆಗೆ ಪಶು ಚಿಕಿತ್ಸಾ ವಾಹನಗಳು!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಅತೀ ಶೀಘ್ರದಲ್ಲೆ ಸಂಚಾರಿ ಪಶು ಶಸ್ತ್ರಚಿಕಿತ್ಸಾ ವಾಹನಗಳನ್ನು ಲೋಕಾರ್ಪಣೆ ಮಾಡಲಾಗುವುದು. ಟಾಟಾ ಕಂಪನಿ ಜೊತೆ ಮಾತುಕತೆ ನಡೆಸಲಾಗಿದೆ. ಆದಷ್ಟು ಬೇಗ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಂಚಾರಿ ಪಶು ಶಸ್ತ್ರಚಿಕಿತ್ಸಾ ವಾಹನ ಕಾರ್ಯನಿರ್ವಹಿಸಲಿವೆ ಎಂದು ಸಚಿವ ಚೌಹಾಣ್ ಮಾಹಿತಿ ನೀಡಿದ್ದಾರೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications