ಕೇಂದ್ರದಿಂದ ರಾಜ್ಯಕ್ಕೆ ಬರೋಬ್ಬರಿ 17000 ಕೋಟಿ ಖೋತಾ: ಅಂಕಿ ಅಂಶಗಳನ್ನ ಬಿಚ್ಚಿಟ್ಟ ಸಿದ್ದರಾಮಯ್ಯ
ಮೈಸೂರು, ಅಕ್ಟೋಬರ್ 03: ಕೇಂದ್ರದಿಂದ ತೆರಿಗೆ ಹಣವಾಗಿ ಕೇವಲ 3200 ಕೋಟಿ ರೂ.ಗಳನ್ನು ರಾಜ್ಯಕ್ಕೆ ನೀಡಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ. ಉತ್ತರಪ್ರದೇಶಕ್ಕೆ ಶೇ.18 ರಷ್ಟು ನೀಡುತ್ತಿದ್ದು, ರಾಜ್ಯಕ್ಕೆ ಕೇವಲ ಶೇ. 3.5 ರಷ್ಟು ನೀಡುತ್ತಿರುವುದು ಅನ್ಯಾಯ. ಕರ್ನಾಟಕ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೇಂದ್ರಕ್ಕೆ ನೀಡಿದರೆ , ನಮಗೆ ರೂಪಾಯಿಗೆ ಕೇವಲ 14 ಪೈಸೆ ಮಾತ್ರ ರಾಜ್ಯ ದೊರೆಯುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಅನುದಾನವನ್ನು ಕೇಂದ್ರ ವಿತ್ತಸಚಿವರು ರದ್ದುಪಡಿಸಿದರು. ಆಯೋಗದ ಶಿಫಾರಸ್ಸಿನಂತೆ 5490 ಕೋಟಿ ಹಾಗೂ ಕೆರೆಗಳ ಅಭಿವೃದ್ದಿ 3000 ಕೋಟಿ, ರಸ್ತೆ ನಿರ್ಮಾಣಕ್ಕೆ 3000 ಕೋಟಿ, ಭದ್ರಾ ಮೇಲ್ದಂಡೆ ಯೋಜನೆಗೆ 5000 ಕೊಟಿ ರೂ.ಗಳ ಅನುದಾನವನ್ನು ನಮಗೆ ನೀಡಲಾಗಿಲ್ಲ. ಒಟ್ಟಾರೆ 17000 ಕೋಟಿ ರೂ. ಬರಬೇಕಾಗಿದ್ದ ಅನುದಾನ ಖೋತಾ ಆಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಅಗತ್ಯಬಿದ್ದರೆ ನ್ಯಾಯಾಲಯದ ನೆರವು ಪಡೆದು ಕೇಂದ್ರದ ಅನುದಾನ ಪಡೆಯಲಾಗುವುದು ಎಂದು ಹೇಳಿದರು.

ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ. 2017 ರಲ್ಲಿ ಕೇಂದ್ರ ಸರ್ಕಾರವೇ ಜಿಎಸ್ ಟಿ ಯನ್ನು ಜಾರಿಗೆ ತಂದು ಜಿಎಸ್ ಟಿ ದರ ನಿಗದಿಪಡಿಸಿದರು. ಕಳೆದ ಎಂಟು ವರ್ಷದಿಂದ ಹೆಚ್ಚಿನ ದರ ಪಡೆದಿರುವ ಕೇಂದ್ರಸರ್ಕಾರ, ಆ ಹಣವನ್ನು ಮರಳಿ ನೀಡುವರೇ? ತಾವೇ ಹೆಚ್ಚಿಸಿದ ಜಿಎಸ್ ಟಿ ದರವನ್ನು ತಾವೇ ಕಡಿಮೆ ಮಾಡಿ, ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುವ ಕೆಲಸದಲ್ಲಿ ಕೇಂದ್ರ ತೊಡಗಿದೆ. ಬಿಹಾರದ ಚುನಾವಣೆಯಿರುವ ಕಾರಣ, ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿ, ಕಡಿತಗೊಳಿಸಿದ್ದೇವೆ ಎಂದು ಹೇಳಿಕೊಳ್ಳುವ ಅವಶ್ಯಕತೆಯಿಲ್ಲ ಎಂದು ತಿಳಿಸಿದರು.
ಕೇಂದ್ರದ ಕಡಿಮೆ ಅನುದಾನದ ನಡುವೆ ಗ್ಯಾರಂಟಿಗಳ ವೆಚ್ಚವನ್ನು ಭರಿಸುವುದು ಸರ್ಕಾರಕ್ಕೆ ಸವಾಲಾಗಿದ್ದರೂ, ಸವಾಲನ್ನು ದಿಟ್ಟತನದಿಂದ ಎದುರಿಸಲಾಗುವುದು. ಜಿಎಸ್ ಟಿ ಸರಳೀಕರಣದಿಂದ ರಾಜ್ಯಸರ್ಕಾರಗಳು ಹೆಚ್ಚು ನಷ್ಟ ಎದುರಿಸಲಿವೆ. ಕರ್ನಾಟಕಕ್ಕೆ ಇದರಿಂದ ವಾರ್ಷಿಕ ಅಂದಾಜು 15 ಸಾವಿರ ಕೋಟಿ ನಷ್ಟವಾಗಲಿದೆ. ಕೇಂದ್ರಸರ್ಕಾರ , ಎನ್ ಡಿ ಎ ಗೆ ಬರುವ ರಾಜ್ಯಗಳ ಅನುಕೂಲಕ್ಕೆ ತಕ್ಕಂತೆ ಜಿಎಸ್ ಟಿ ಪರಿಹಾರವನ್ನು ನೀಡುತ್ತಿದೆ. ಕರ್ನಾಟಕದ ಬಿಜೆಪಿ ಸಂಸದರಿಗೆ ಮೋದಿಯವರನ್ನು ಹೊಗಳುವುದೇ ಕೆಲಸವಾಗಿದ್ದು, ರಾಜ್ಯದ ಹಿತಚಿಂತನೆ ಮಾಡುತ್ತಿಲ್ಲ ಎಂದರು.
ರಾಜ್ಯದಲ್ಲಿ ಜಾತಿಸಮೀಕ್ಷೆ ಕಾರ್ಯದ ಪ್ರಗತಿ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದಲ್ಲಿ ಈಗಾಗಲೇ ಸುಮಾರು 80 ಲಕ್ಷ ಮನೆಗಳಿಂದ 3 ಕೋಟಿ ಜನಸಂಖ್ಯೆಯ ಸಮೀಕ್ಷೆ ಪೂರ್ಣಗೊಂಡಿದ್ದು, ಅಕ್ಟೋಬರ್ 7ರೊಳಗೆ ಸಮೀಕ್ಷೆ ಕಾರ್ಯ ಮುಗಿಯುವ ಭರವಸೆಯಿದೆ. 1.80 ಕೋಟಿ ಕುಟುಂಬಗಳ ಸಮೀಕ್ಷೆ ನಡೆಯಬೇಕಿದೆ. ಸಮೀಕ್ಷೆಯ ಪ್ರಗತಿಯನ್ನು ಗಮನಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಅವರು ಹೇಳಿದರು.
ಮತಾಂತರ ಹಾಗೂ ಜಾತಿಒಡೆಯುವ ದೃಷ್ಠಿಯಿಂದ ಸಮೀಕ್ಷೆಯನ್ನು ಸರ್ಕಾರ ಮಾಡುತ್ತಿದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪ್ರಹ್ಲಾದ್ ಜೋಷಿಯವರು ಕೇಂದ್ರ ಸಚಿವರಾಗಿದ್ದು, ಕೇಂದ್ರ ನಡೆಸಲಿರುವ ಜಾತಿಸಮೀಕ್ಷೆಯ ಉದ್ದೇಶವನ್ನು ತಿಳಿಸಬೇಕು. ಕೇಂದ್ರಸರ್ಕಾರಕ್ಕೆ ಜಾತಿ, ಧರ್ಮ ಒಡೆಯುವ ಉದ್ದೇಶವಿದೆಯೇ? ಕರ್ನಾಟಕದಲ್ಲಿ ಆರ್ಥಿಕ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಜನರ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆಯುವ ಉದ್ದೇಶವಿದೆ.
ಕಾಂತರಾಜು ವರದಿಯಲ್ಲಿ ಬ್ರಾಹ್ಮಣ ಕ್ರಿಶ್ಚಿಯನ್, ಎಂಬಿತ್ಯಾದಿ ಜಾತಿಗಳನ್ನು ನಮೂದಿಸಲಾಗಿತ್ತು. ಜನರು ತಮ್ಮ ಜಾತಿಯನ್ನು ಸ್ವಯಂಪ್ರೇರಿತರಾಗಿ ನಮೂದಿಸಿದರೆ ಅದಕ್ಕೆ ಸರ್ಕಾರ ಜವಾಬ್ದಾರವಾಗುವುದಿಲ್ಲ. ಆದರೆ ಆಯೋಗ, ಈ ಜಾತಿಗಳನ್ನು ಪಟ್ಟಿಯಿಂದ ತೆಗೆದುಹಾಕಿದೆ. ಆದ್ದರಿಂದ ಜನರು ಸ್ವಯಂಪ್ರೇರಿತವಾಗಿ ಹೇಳುವ ಜಾತಿಯ ಮಾಹಿತಿಯನ್ನು ಆಯೋಗ ಪಡೆಯಲಿದೆ. ಇದರಲ್ಲಿ ಜಾತಿ ಒಡೆಯುವ ಪ್ರಶ್ನೆಯಿಲ್ಲ. ಜನರನ್ನು ರಾಜಕೀಯ ಉದ್ದೇಶದಿಂದ ದಾರಿತಪ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದರು.
ವಿಪಕ್ಷ ನಾಯಕ ಅಶೋಕ್ ರವರು ರೈತರ ಸಮಸ್ಯೆ ಬಗೆಹರಿಸದಿದ್ದರೆ ಸರ್ಕಾರ ಇದ್ದರೂ ಸತ್ತಂತೆಯೇ ಎಂದು ಹೇಳಿಕೆ ನೀಡಿರುವ ಬಗ್ಗೆ ಉತ್ತರಿಸಿ, ಅಶೋಕ್ ಅವರು ವಿಪಕ್ಷದ ನಾಯಕರಾಗಿದ್ದರೂ, ಆರ್ ಎಸ್ ಎಸ್ ನವರ ನಿರ್ದೇಶನದಂತೆ ಮಾತನಾಡುತ್ತಾರೆ. ಅಶೋಕ್ ರವರು ರಾಜಕಾರಣಕ್ಕೆ ಆರೋಪ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
-
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
Government Employees: ಸರ್ಕಾರಿ ನೌಕರರ ವರ್ಗಾವಣೆ ಕುರಿತು ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications