ಸುಪ್ರೀಂ ಕೋರ್ಟ್ ಚಾಟಿ ಬೀಸುವ ತನಕ ಒಂದು ರೂ. ಕೊಡಲಿಲ್ಲ. 3454 ಕೋಟಿ ನಂತರ ಕೊಟ್ಟರು: ಸಿದ್ದರಾಮಯ್ಯ ಕಿಡಿ
ಬೆಳಗಾವಿ, ಮೇ 05: ರಾಜ್ಯದ ಬಹುತೇಕ ತಾಲ್ಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ರಾಜ್ಯದ ಮಂತ್ರಿಗಳು , ನಾನು ಕೇಂದ್ರ ಸಚಿವರು, ಪ್ರಧಾನಿಯವರನ್ನು ಸ್ವತ: ಕೋರಿದರೂ ಮನ್ನಿಸಲಿಲ್ಲ. ಆದ್ದರಿಂದ ಮನವಿ ಸಲ್ಲಿಸಿದ 7 ತಿಂಗಳ ನಂತರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆವು. ಸುಪ್ರೀಂ ಕೋರ್ಟ್ ಚಾಟಿ ಬೀಸುವ ತನಕ ಒಂದು ರೂ. ಕೊಡಲಿಲ್ಲ. 3454 ಕೋಟಿ ನಂತರ ಕೊಟ್ಟರು ಎಂದು ಸಿದ್ದರಾಮಯ್ಯ ಹೇಳಿದರು.
ರಾಜ್ಯದ ಬಹುತೇಕ ತಾಲ್ಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್ 23 ರಂದು ಬರಪರಿಹಾರಕ್ಕೆ ಮನವಿ ಮಾಡಲಾಗಿದೆ. 18172 ಕೋಟಿ ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ಕೇಳಿದೆವು. 48 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ನಾಶವಾಗಿದೆ. ಕೇಂದ್ರ ತಂಡ ಬರಪರಿಹಾರ ಅಧ್ಯಯನ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ರಾಜ್ಯದ ಜನರಿಗೆ ಮೋದಿಯವರ ಆಡಳಿತ ಬದಲಿಸಲು ಅವಕಾಶ ಸಿಕ್ಕಿದೆ. ಕರ್ನಾಟಕಕ್ಕೆ ಮೋದಿಯವರು ಕೇವಲ ಚೊಂಬು ನೀಡಿದ್ದಾರೆ. ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಜನರು ತಮ್ಮ ಮತಗಳ ಮೂಲಕ ಛಾಟಿ ಬೀಸುತ್ತಾರೆ. ಈ ಬಾರಿ ಜನ ಕಾಂಗ್ರಸ್ ಮೆಲೆ ವಿಶ್ವಾಸ ಇಟ್ಟಿದ್ದಾರೆ. ರಾಜ್ಯದಿಂದ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿರುವ ಮೋದಿಯವರಿಗೆ ಜನ ತಕ್ಕ ಪಾಠ ಕಲಿಸಬೇಕು ಎಂದು ರಾಜ್ಯದ ಜನರಿಗೆ ಕರೆ ನೀಡಿದರು.
ಕಾಂಗ್ರೆಸ್ ಪಕ್ಷ ನೀಡಿರುವ 25 ಗ್ಯಾರಂಟಿಗಳಿಗೆ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜು ಖರ್ಗೆ ಯವರು ಸಹಿ ಮಾಡಿ ಹಂಚಿದ್ದಾರೆ. ಬಡಕುಟುಂಬದ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ ರೂ. ನೀಡುವ ಮಹಾಲಕ್ಷ್ಮಿ ಯೋಜನೆ, ಯುವನ್ಯಾಯದಡಿ ವರ್ಷಕ್ಕೆ 1 ಲಕ್ಷ ರೂ. ನೀಡುವ ಯೋಜನೆ, ರೈತರ ಬೆಳೆಗೆ ನ್ಯಾಯಯುತ ಬೆಲೆ, ಸಾಲ ಮನ್ನಾ, ಸ್ವಾಮಿನಾಥನ್ ವರದಿ ಜಾರಿ ಬೇಡಿಕೆಗಳನ್ನು ಈಡೇರಿಸುವ 'ರೈತ ನ್ಯಾಯ' ಯೋಜನೆಗಳ ಭರವಸೆ ನೀಡಿದೆ.
ಮೋದಿಯವರು ರೈತರ ಸಾಲ ಮನ್ನಾ ಮಾಡಲಿಲ್ಲ. ಸ್ವಾಮಿನಾಥನ್ ವರದಿ ಜಾರಿ ಮಾಡಲಿಲ್ಲ. ಆದರೆ ಅಂಬಾನಿ, ಅದಾನಿಗಳಿಗೆ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ರೈತರ ಸಾಲ ಮನ್ನಾ ಮಾಡಲು ನೋಟ್ ಪ್ರಿಂಟ್ ಮಾಡುವ ಮಿಷನ್ ಇಲ್ಲ ಎಂದು ಬಿಜೆಪಿಯವರು ಹೇಳುತ್ತಾರೆ. ಸಂಸದ ತೇಜಸ್ವಿ ಸೂರ್ಯ , ರೈತರ ಸಾಲ ಮನ್ನಾ ಮಾಡಿದರೆ ದೇಶಕ್ಕೆ ಒಳಿತಲ್ಲ ಎಂದಿದ್ದಾರೆ. ಬಿಜೆಪಿಯವರಿಗೆ ರೈತರ ಸಾಲ ಮನ್ನಾ ಮಾಡಬಾರದೆಂಬುದು ಅವರ ಹಿಡೆನ್ ಅಜೆಂಡಾ ಎಂದರು.

ಅವಕಾಶ ವಂಚಿತರಿಗೆ ನ್ಯಾಯ ನೀಡಲು, ಸರ್ಕಾರದ ಲಾಭ ದೊರಕಿಸಿಕೊಡಲು ಜಾತಿ ಗಣತಿ ಅತಿ ಮುಖ್ಯ. ಪಾಲುದಾರಿಕೆ ನ್ಯಾಯ, ಶ್ರಮಿಕ ನ್ಯಾಯ ಯೋಜನೆ ಗ್ಯಾರಂಟಿಗಳನ್ನು ಜಾರಿ ಮಾಡಲಾಗುವುದು. ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಗ್ಯಾರಂಟಿ ಗಳನ್ನು ಜಾರಿ ಮಾಡಲಾಗಿದೆ. ಮೋದಿಯವರು ಕರ್ನಾಟಕಕ್ಕೆ ದೊಡ್ಡ ಅನ್ಯಾಯ ಮಾಡಿದ್ದಾರೆ. ರಾಜ್ಯದಿಂದ 4.30 ಲಕ್ಷ ಕೋಟಿ ತೆರಿಗೆ ಹೋಗುತ್ತದೆ. ಆದರೆ ರಾಜ್ಯಕ್ಕೆ 100 ರೂ. ಗೆ ಕೇವಲ 13 ರೂ. ಮರಳಿ ಬರುತ್ತಿರುವುದು ನಮಗಾಗಿರುವ ಅನ್ಯಾಯ.
11495 ಕೋಟಿ ರೂ.ಗಳನ್ನು 15 ನೇ ಹಣಕಾಸು ಆಯೋಗ ನಿರ್ಧರಿಸಿತ್ತು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡಲು ತಿಳಿಸಿದ್ದರೂ ಅವರು ಮಾಡಲಿಲ್ಲ. ರಾಜ್ಯಕ್ಕಾಗಿರುವ ಇಷ್ಟೆಲ್ಲಾ ಅನ್ಯಾಯವನ್ನು ರಾಜ್ಯದ 25 ಸಂಸದರಲ್ಲಿ ಯಾರೊಬ್ಬರೂ ಧ್ವನಿ ಎತ್ತಲಿಲ್ಲ. ಮೋದಿಯವರ ಎದುರು ನಿಂತು ಮಾತನಾಡಲು ಹೆದರುತ್ತಾರೆ. ಆದರೆ ಡಿ.ಕೆ.ಸುರೇಶ್ ಮಾತ್ರ ಪ್ರಶ್ನಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.












Click it and Unblock the Notifications