ಇನ್ನೆರೆಡು ದಿನದಲ್ಲಿ ರಾಜ್ಯಕ್ಕೆ ಕೇಂದ್ರದಿಂದ ನೆರೆ ಪರಿಹಾರ: ಯಡಿಯೂರಪ್ಪ
Recommended Video
ಬೆಂಗಳೂರು, ಸೆಪ್ಟೆಂಬರ್ 28: ಇನ್ನೆರೆಡು ದಿನಗಳಲ್ಲಿ ಕೇಂದ್ರವು ರಾಜ್ಯಕ್ಕೆ ನೆರೆ ಪರಿಹಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಉತ್ತರ ಕರ್ನಾಟಕ, ಉತ್ತರ ಕನ್ನಡ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿ ಹಳ್ಳಿಗಳು ಸಂಪೂರ್ಣ ಜಲಾವೃತವಾಗಿದ್ದವು.
ನೆರೆ ಪರಿಹಾರ ಕುರಿತು ಹಲವು ಬಾರಿ ಕೇಂದ್ರಕ್ಕೆ ಮನವಿ ಮಾಡಿದ್ದರೂ ಕೂಡ ವಿಳಂಬವಾಗಿದೆ. ಆದರೆ ಇನ್ನೆರೆಡು ದಿನಗಳಲ್ಲಿ ನೆರೆ ಪರಿಹಾರ ನೀಡಲಾಗುತ್ತದೆ ಎಂದು ಹೇಳಿದರು.

ನೆರೆ ಪರಿಹಾರ ವಿಚಾರವಾಗಿ ಸಂಸದ ಪ್ರಹ್ಲಾದ್ ಜೋಷಿ ತಮ್ಮನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಕರ್ನಾಟಕವೂ ಸೇರಿದಂತೆ ದೇಶದ ನಾಲ್ಕೈದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಒಟ್ಟಿಗೆ ಪರಿಹಾರ ಘೋಷಣೆ ಮಾಡಲಿದೆ ಎಂದರು.
ಅಕ್ಟೋಬರ್ 3 ರಂದು ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ವಿಜಯನಗರ ಜಿಲ್ಲಾ ರಚನೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆಯಾಗಲಿದೆ. ಬಳ್ಳಾರಿ ಜಿಲ್ಲೆ ವಿಭಜನೆ ಸಂಬಂಧ ಜಿಲ್ಲೆಯ ಪಕ್ಷದ ನಾಯಕರನ್ನೆಲ್ಲ ಕರೆದು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.
ಚುನಾವಣಾ ಆಯೋಗ 15 ಕ್ಷೇತ್ರಗಳ ಉಪಚುನಾವಣೆಗೆ ಮತ್ತೆ ದಿನಾಂಕ ಘೋಷಣೆ ಮಾಡಿದೆ. ಚುನಾವಣೆ ಸಂಬಂಧ ಪಕ್ಷದ ಮುಖಂಡರ ಜೊತೆ ಚರ್ಚಿಸಲಾಗುತ್ತಿದೆ. ಪಕ್ಷ ಚುನಾವಣೆ ಎದುರಿಸಲು ಸಿದ್ಧವಿದೆ ಎಂದು ತಿಳಿಸಿದರು.












Click it and Unblock the Notifications