
ಬೆಳಗಾವಿ–ಹುನಗುಂದ–ರಾಯಚೂರು ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಅನುಮೋದನೆ
ಬೆಂಗಳೂರು, ನ.30: ಬೆಳಗಾವಿ - ಹುನಗುಂದ - ರಾಯಚೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಅನುಮೋದನೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿಗೆ ಸಚಿವ ಪ್ರಲ್ಹಾದ್ ಜೋಶಿ ಕೃತಜ್ಞತೆ ಸಲ್ಲಿಸಿದ್ದಾರೆ.
ಬೆಳಗಾವಿ - ಹುನಗುಂದ - ರಾಯಚೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಶೀಘ್ರವೇ ಕಾಮಗಾರಿ ಆರಂಭವಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ.
ಹುಬ್ಬಳ್ಳಿ ರಾಜ್ಯದ ಮೊದಲ ಹಸಿರು ವಿಮಾನ ನಿಲ್ದಾಣ
320 ಕಿಲೋ ಮೀಟರ್ ರಸ್ತೆ ನಿರ್ಮಾಣಕ್ಕಾಗಿ ಈ ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು, ಇದೀಗ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರಕಿದೆ. ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದ್ದು, ಈ ಭಾಗದ ಜನರ ಬಹುಕಾಲದ ಬೇಡಿಕೆಯೊಂದು ಶೀಘ್ರವೇ ಈಡೇರಲಿದೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ - ಹುನಗುಂದ - ರಾಯಚೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸರಕಾರ ಅನುಮೋದನೆ ನೀಡಿದ್ದು, ಶೀಘ್ರವೇ ಕಾಮಗಾರಿ ಆರಂಭವಾಗಲಿದೆ. 320 ಕಿಮೀ ರಸ್ತೆ ನಿರ್ಮಾಣಕ್ಕಾಗಿ ಈ ಹಿಂದೆ ಕೇಂದ್ರ ಸಚಿವರಾದ ಶ್ರೀ @nitin_gadkari ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದೀಗ ಕಾಮಗಾರಿಗೆ ಅನುಮೋದನೆ ದೊರಕಿದೆ. pic.twitter.com/kFrVG5oGsw
— Pralhad Joshi (@JoshiPralhad) November 30, 2022
ರಾಜ್ಯದ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕೃತಜ್ಞತೆ ಅರ್ಪಿಸಿದ್ದಾರೆ. ಮೂಲಸೌಕರ್ಯ ಅಭಿವೃದ್ಧಿ ಮತ್ತು ಜನರ ಅನುಕೂಲಕ್ಕೆ ಅನುಗುಣವಾಗಿ ಕಾಮಗಾರಿಗೆ ಅನುಮೋದನೆ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಧನ್ಯವಾದ ತಿಳಿಸಿದ್ದಾರೆ.
ಮಂಗಳವಾರ ಸಚಿವ ಪ್ರಲ್ಹಾದ್ ಜೋಶಿ ನವದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಹುಬ್ಬಳ್ಳಿ ಧಾರವಾಡ ಅವಳಿ ನಗರದ ಸುತ್ತಮುತ್ತಲಿನ ಹೆದ್ದಾರಿಗಳ ಅಭಿವೃದ್ಧಿ, ಚತುಷ್ಪಥ ಮತ್ತು ಷಟ್ಪಥ ರಸ್ತೆ ಹಾಗೂ ಅಂಡರ್ ಪಾಸ್ ಗಳ ಅಭಿವೃದ್ಧಿಯ ಕುರಿತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಭರವಸೆ ನೀಡಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭವಾಗಲಿದೆ ಎಂದು ಪ್ರಲ್ಜಾದ್ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ.
ಈ ರಸ್ತೆ ಅಭಿವೃದ್ಧಿ ಕಾರ್ಯಗಳು ಸಾರ್ವಜನಿಕರ ಸಂಚಾರಕ್ಕೆ ತುಂಬಾ ಅನುಕೂಲವಾಗಲಿದ್ದು, ಪ್ರಯಾಣದ ಸಮಯವನ್ನು ತಗ್ಗಿಸಲಿವೆ ಹಾಗೂ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಲಿವೆ ಎಂದು ಜೋಶಿ ಹೇಳಿದ್ದಾರೆ.