ಕರ್ನಾಟಕ ರೈತರಿಗೆ ಸಿಹಿ ಸುದ್ದಿ: 167 ನೀರಾವರಿ ಯೋಜನೆ ಶೀಘ್ರ ಜಾರಿ: ಜೋಶಿ
ಬೆಂಗಳೂರು, ನವೆಂಬರ್ 10: ಕರ್ನಾಟಕದಲ್ಲಿ ರೈತರಿಗೆ ಸಿಹಿ ಸುದ್ದಿಯೊಂದು ಲಭಿಸಿದ್ದು, ಕೃಷಿಗೆ ವರದಾನವಾಗಲಿರುವ 167 ನೀರಾವರಿ ಯೋಜನೆಗಳು ಆದಷ್ಟು ಶೀಘ್ರವೇ ಜಾರಿ ಆಗಲಿವೆ. ಬಹುಕೋಟಿ ವೆಚ್ಚದ ಈ ಎಲ್ಲ ಯೋಜನೆಗಳಿಗೆ ಕೇಂದ್ರ ಸರ್ಕಾರ ಶೀಘ್ರವೇ ಅನುಮೋದನೆ ನೀಡಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಶುಕ್ರವಾರ ತಿಳಿಸಿದ್ದಾರೆ.
ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿರುವ ಕರ್ನಾಟಕದ ನೀರಾವರಿ ಯೋಜನೆಗಳ ಜಾರಿ ಕುರಿತು ಮನವಿ ಮಾಡಿದ್ದಾರೆ. ಈ ಕುರಿತು ಜೋಶಿ ತಮ್ಮ ಸಾಮಾಜಿಕ ಜಾತಲಾಣ X ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಹ್ಲಾದ್ ಜೋಶಿಯವರು ಅವರು, ಕರ್ನಾಟಕದ ಬಹುಮುಖ್ಯ ನೀರಾವರಿ ಯೋಜನೆಗಳನ್ನು ಕೇಂದ್ರ ಜಲ ಶಕ್ತಿ ಸಚಿವರ ಗಮನಕ್ಕೆ ತರಲಾಗಿದೆ. ಕರ್ನಾಟಕಕ್ಕೆ ಸಂಬಂಧಿಸಿದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಲ್ಲಿ ಅಂದಾಜು 484 ಕೋಟಿ ವೆಚ್ಚದ 167 ನೀರಾವರಿ ಯೋಜನೆಗಳನ್ನು ಜಾರಿಗೆ ತರಲು ಕೋರಿದ್ದೇನೆ ಎಂದರು.
ಈ ನೀರಾವರಿ ಯೋಜನೆಯ ವಿಶೇಷತೆಗಳು
ಈ ಎಲ್ಲಾ ಯೋಜನೆಗಳು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಬರಲಿವೆ. ಈ ಯೋಜನೆಯ ಉದ್ದೇಶ ಕೃಷಿ ಭೂಮಿಯ ಮಟ್ಟದಲ್ಲಿ ನೀರಾವರಿಗಾಗಿ ತಗಲುವ ವೆಚ್ಚವನ್ನು ಸರಳೀಕರಿಸುವುದಾಗಿದೆ. ಹೆಚ್ಚಿನ ಕೃಷಿ ಭೂಮಿಯನ್ನು ನೀರಾವರಿ ವಿಧಾನಗಳಿಗೆ ಒಳಪಡುವಂತೆ ಮಾಡುವುದು ಹಾಗೂ ನೀರಾವರಿ ಜಮೀನಿನಲ್ಲಿ ಬಳಸುವ ನೀರು ಸಮರ್ಥವಾಗಿ ಜಮೀನಿಗೆ ಮಾತ್ರ ಬಳೆಕೆಯಾಗುವಂತೆ ಮಾಡುವ ಯೋಜನೆಗಳು ಇವಾಗಿವೆ ಎಂದು ವಿವರಿಸಿದರು.

ಕರ್ನಾಟಕದ ಅದರಲ್ಲೂ ಪ್ರಮುಖವಾಗಿ ಉತ್ತರ ಕರ್ನಾಟಕದ ಬಹುತೇಕ ಪ್ರದೇಶದ ಹಳ್ಳಗಳು ಮಳೆಗಾಲದಲ್ಲಿ ಪ್ರವಾಹಕ್ಕೆ ತುತ್ತಾಗುತ್ತಿವೆ. ಅಂತಹ ಪ್ರವಾಹ ಸಂದರ್ಭದಲ್ಲಿ ನೀರು ಹರಿದುಹೋಗಲು ಬಿಡದೇ ನೀರನ್ನು ನಿಯಂತ್ರಿಸಿ, ಸಂಗ್ರಹಿಸಿ ಕೃಷಿ ಭೂಮಿಗೆ ಬಳಸಲು ಯೋಜಿಸಲಾಗಿದೆ. ಸಂಗ್ರಹಿಸಿದ ನೀರನ್ನು ರೈತರು ಮುಂದಿನ ಬೆಳೆಗಳಿಗೆ ಬಳಸಿಕೊಳ್ಳುವ ನೀರಾವರಿ ಯೋಜನೆಗಳ ಜಾರಿಗೆ ಮನವಿ ಮಾಡಲಾಗಿದೆ.
ಕೇಂದ್ರ ಜಲ ಶಕ್ತಿ ಸಚಿವರಾದ ಶ್ರೀ @gssjodhpur ಅವರನ್ನು ಭೇಟಿಯಾಗಿ ಕರ್ನಾಟಕಕ್ಕೆ ಸಂಬಂಧಿಸಿದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಲ್ಲಿ ಅಂದಾಜು 484 ಕೋಟಿ ವೆಚ್ಚದ 167 ನೀರಾವರಿ ಯೋಜನೆಗಳನ್ನು ಜಾರಿಗೆ ತರಲು ವಿನಂತಿಸಿದೆನು. ಈ ಎಲ್ಲಾ ಯೋಜನೆಗಳು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಬರಲಿದ್ದು, ಈ ಯೋಜನೆಯ ಉದ್ದೇಶ ಕೃಷಿ ಭೂಮಿಯ… pic.twitter.com/2oQEkUYf2P
— Pralhad Joshi (@JoshiPralhad) November 10, 2023
ಉತ್ತರ ಕರ್ನಾಟಕದ ರೈತರಿಗೆ ಇನ್ನಷ್ಟು ಅನುಕೂಲ?
ರಾಜ್ಯದ ಉತ್ತರ ಕರ್ನಾಟಕದ ರೈತರಿಗೆ ಈ ಯೋಜನೆ ಜಾರಿಗೆ ಬಂದ ನಂತರ ಕೃಷಿಗೆ ವರದಾನ ಆಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಪರವಾಗಿ ಕೈಗೊಳ್ಳುತ್ತಿರುವ ಅನೇಕ ಯೋಜನೆಗಳಲ್ಲಿ ಇದೂ ಒಂದಾಗಿದೆ. ಈ ಮೂಲಕ ಕೇಂದ್ರ ಸರ್ಕಾರ ರೈತರ ಬೆನ್ನೆಲುಬಾಗಿ ನಿಲ್ಲಲಿದೆ.
ರಾಜ್ಯದಿಂದ ಕೇಂದ್ರ ಸಚಿವನಾಗಿ ನಮ್ಮ ರೈತರ ಸಮಸ್ಯೆಗಳನ್ನು ಕೇಂದ್ರ ಜಲ ಶಕ್ತಿ ಸಚಿವರಿಗೆ ಇಂದು ಮನ ಮುಟ್ಟುವಂತೆ ವಿವರಿಸಿದ್ದು, ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು ಶೀಘ್ರದಲ್ಲಿಯೇ ರಾಜ್ಯದ ಈ 167 ಯೋಜನೆಗಳಗೆ ಅನುಮೋದನೆ ಸಿಗಲಿದೆ ಎಂದು ಅವರು ಭರವಸೆ ನೀಡಿದರು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications