ಪಿಎಂ ಕಿಸಾನ್ ಯೋಜನೆಯಡಿ ಕರ್ನಾಟಕದ 34.26 ಲಕ್ಷ ರೈತರ ಖಾತೆಗೆ ತಲಾ 2,000 ರೂಪಾಯಿ

ಬೆಂಗಳೂರು, ಜನವರಿ 1: ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ರಾಜ್ಯದ ಫಲಾನುಭವಿ ರೈತರಿಗೆ ಕರ್ನಾಟಕ ಸರ್ಕಾರದಿಂದ ವಾರ್ಷಿಕ 4 ಸಾವಿರ ರೂಪಾಯಿ ಆರ್ಥಿಕ ನೆರವು ನೀಡುವ ಯೋಜನೆಯ ಎರಡನೇ ಕಂತಿನ ಹಣವನ್ನು ಶನಿವಾರ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರದಿಂದಂ ಬಿಡುಗಡೆಯಾದ 1007.18 ಕೋಟಿ ರೂಪಾಯಿ ಹಣವು ನೇರವಾಗಿ ರೈತರ ಖಾತೆಗೆ ವರ್ಗಾವಣೆ ಆಗಿದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 10 ನೇ ಕಂತಿನ ನೆರವು ಬಿಡುಗಡೆಯ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದರು. ರಾಜ್ಯದ 34.26 ಲಕ್ಷ ರೈತರಿಗೆ 685.28 ಕೋಟಿ ರೂಪಾಯಿ ನೆರವು ಬಿಡುಗಡೆ ಮಾಡಲಾಗಿದೆ.

ಈ ವರ್ಚುವಲ್ ಸಮಾರಂಭದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಾ ಭಾಗವಹಿಸಿದ್ದರು. ರಾಜ್ಯದಲ್ಲಿ ಒಟ್ಟು 54.52 ಲಕ್ಷ ರೈತರು ಈವರೆಗೆ ಕನಿಷ್ಠ ಒಂದು ಕಂತಿನ ನೆರವನ್ನು ಪಡೆದಿದ್ದಾರೆ. ಈ ಯೋಜನೆಯಡಿ ಕೇಂದ್ರ ಸರ್ಕಾರವು ಒಟ್ಟು 8022.69 ಕೋಟಿ ರೂಪಾಯಿ ಅನ್ನು ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರದಿಂದ 2850.54 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಲಾಗಿದೆ.

Central Govt Released Rs 685.28 Crore to Karnataka 34.26 Lakhs Farmers Account under PM Kisan Scheme

ಆಧಾರ್ ಆಧಾರಿತ ಡಿಬಿಟಿ ಮುಖಾಂತರ ಪಾವತಿ:
ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ಎಲ್ಲಾ ಪಾವತಿಗಳನ್ನು ಆಧಾರ್ ಆಧಾರಿತ ಡಿಬಿಟಿ ಮುಖಾಂತರ ಮಾಡಬೇಕೆಂದು ಕೇಂದ್ರ ಸರ್ಕಾರ ಬಯಸುತ್ತದೆ. ಎಲ್ಲಾ ರಾಜ್ಯಗಳ ಪೈಕಿ, ಕರ್ನಾಟಕ ರಾಜ್ಯವು ಅತಿ ಹೆಚ್ಚು ಶೇಕಡಾವಾರು ಆಧಾರ್ ಆಧಾರಿತ ವಹಿವಾಟುಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದೆ. ಈ ಹಿನ್ನೆಲೆಯಲ್ಲಿ 2022ರ ಫೆಬ್ರವರಿಯಲ್ಲಿ ಭಾರತ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ಪ್ರಶಸ್ತಿ ಘೋಷಿಸಲಾಗಿದೆ.
ರಾಜ್ಯದ 30 ರೈತ ಉತ್ಪಾದಕ ಸಂಸ್ಥೆಗಳಿಗೆ 1.21 ಕೋಟಿ ರೂ. ನೆರವು ಬಿಡುಗಡೆ ಮಾಡಲಾಗಿದ್ದು, ಈ ವೇಳೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ , ಕೃಷಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ರೈತ ಕುಟುಂಬಕ್ಕೆ 6,000 ರೂ ಆರ್ಥಿಕ ನೆರವು:
ಪ್ರಧಾನಮಂತ್ರಿ ಕಿಸಾನ್ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿ ಬ್ಯಾಂಕ್ ಖಾತೆಗೆ ವರ್ಷದಲ್ಲಿ ಒಟ್ಟು 6,000 ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ. ಪ್ರತಿ ನಾಲ್ಕು ತಿಂಗಳಿಗೆ ಒಂದು ಬಾರಿ ಫಲಾನುಭವಿ ರೈತ ಕುಟುಂಬದವರ ಖಾತೆಗೆ 2,000 ರೂಪಾಯಿ ಜಮೆ ಮಾಡಲಾಗುತ್ತದೆ. ಫೆಬ್ರವರಿ 2019 ರಲ್ಲಿ ಬಜೆಟ್‌ನಲ್ಲಿ ಈ ಯೋಜನೆಯನ್ನು ಘೋಷಿಸಲಾಯಿತು. ಮೊದಲ ಕಂತು ಡಿಸೆಂಬರ್ 2018- ಮಾರ್ಚ್ 2019 ಅವಧಿಗೆ ಆಗಿತ್ತು. ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಯಿತು.

ದೇಶದ 11 ಕೋಟಿ ಫಲಾನುಭವಿಗಳಿಗೆ ಹಣ ವರ್ಗಾವಣೆ:
2021ರ ಆಗಸ್ಟ್‌ನಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಪಿಎಂ ಕಿಸಾನ್ ಯೋಜನೆಯಡಿ ಸುಮಾರು 9.75 ಕೋಟಿ ಫಲಾನುಭವಿಗಳಿಗೆ ಸುಮಾರು 19,500 ಕೋಟಿ ರೂ.ಗಳನ್ನು ವರ್ಗಾಯಿಸಲಾಗಿದೆ ಎಂದು ಹೇಳಿದ್ದರು. ಪ್ರಧಾನಮಂತ್ರಿಯವರ ಸಮ್ಮುಖದಲ್ಲಿ ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಒಂಬತ್ತನೇ ಕಂತಿನ ಮೊದಲು ಕೇಂದ್ರ ಸರ್ಕಾರವು ಸುಮಾರು 11 ಕೋಟಿ ಫಲಾನುಭವಿಗಳಿಗೆ ಸುಮಾರು 1.37 ಲಕ್ಷ ಕೋಟಿ ರೂ.ಗಳನ್ನು ಯೋಜನೆಯಡಿಯಲ್ಲಿ ವಿತರಿಸಲಾಗಿದೆ ಎಂದು ಹೇಳಿದ್ದರು.
ಸರ್ಕಾರವು 2.28 ಕೋಟಿ ಪಿಎಂ ಕಿಸಾನ್ ಫಲಾನುಭವಿಗಳನ್ನು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯೊಂದಿಗೆ ಲಿಂಕ್ ಮಾಡಿದೆ, ಇದರ ಅಡಿಯಲ್ಲಿ ಅವರು ಇಲ್ಲಿಯವರೆಗೆ 2.32 ಲಕ್ಷ ಕೋಟಿ ರೂಪಾಯಿಗಳವರೆಗೆ ಸಾಲವನ್ನು ಪಡೆಯಲು ಸಮರ್ಥರಾಗಿದ್ದಾರೆ.

ರೈತರಿಗಾಗಿ ಹಲವು ಯೋಜನೆ:
ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಮತ್ತು ಪಿಎಂ ಕಿಸಾನ್ ಯೋಜನೆಗಳು ರೈತರು ಸರ್ಕಾರದಿಂದ ಪಡೆಯುವ ಹಲವಾರು ಪ್ರಯೋಜನಗಳಲ್ಲಿ ಒಂದಾಗಿವೆ. ರೈತರಿಗೆ ಪಿಂಚಣಿಗಳನ್ನು ಒದಗಿಸುವ ಕೇಂದ್ರ ಸರ್ಕಾರದ ಯೋಜನೆಯು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಪಿಎಂ ಕಿಸಾನ್ ಮನ್ಧನ್ ಯೋಜನೆ, ಪಿಎಂ ಕಿಸಾನ್ ಕ್ರೆಡಿಟ್ ಕಾರ್ಡ್ ಮತ್ತು ಪಿಎಂ ಕಿಸಾನ್ ಐಡಿ ಕಾರ್ಡ್‌ಗಳನ್ನು ಒಳಗೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+