GoodNews: ಬೆಂಗಳೂರು-ಮುಂಬೈ ರೈಲು ಸಂಚಾರಕ್ಕೆ ಗ್ರೀನ್‌ಸಿಗ್ನಲ್,ರೂಟ್ಸ್... Bengaluru-Mumbai Train

Bengaluru-Mumbai Train News: ಈವರೆಗೆ ಬೆಂಗಳೂರಿನಿಂದ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಉತ್ತಮ ರೈಲು ಸಂಪರ್ಕಕ್ಕಾಗಿ ಬೇಡಿಕೆ ಇದ್ದೆ ಇತ್ತು. ಈ ಪೈಕಿ ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು ಸೇವೆ ಸಹ. ಇದೀಗ ರಾಜಧಾನಿ ಬೆಂಗಳೂರಿನಿಂದ ದೇಶದ ವಾಣಿಜ್ಯ ನಗರಿ ಮುಂಬೈಗೆ ಸೂಪರ್‌ ಫಾಸ್ಟ್ ರೈಲು ಸೇವೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಬಗ್ಗೆ ಖುದ್ದು ಸಚಿವರೇ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಿಂದ ಕರ್ನಾಟಕದ ಹಲವು ಜಿಲ್ಲೆಗಳ ಮೂಲಕ ಮಹಾರಾಷ್ಟ್ರದ ಮುಂಬೈ ನಗರಕ್ಕೆ ಸೂಪರ್‌ ಫಾಸ್ಟ್ ರೈಲು ಸೇವೆಗೆ ಅನುಮೋದನೆ ನೀಡಲಾಗಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅನುಮೋದನೆ ಪತ್ರ ನೀಡಿದ್ದು, ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ಅವರು ಧನ್ಯವಾದ ತಿಳಿಸಿದ್ದಾರೆ.

Central Has Approval Bengaluru Mumbai Superfast Train Know What Benifits for Karnataka

ಹುಬ್ಬಳ್ಳಿ-ಧಾರವಾಡ ಮೂಲಕ ಸಂಚರಿಸುವ ಬೆಂಗಳೂರು- ಮುಂಬೈ ಸೂಪರ್ ಫಾಸ್ಟ್ ರೈಲಿನಿಂದ ಅನೇಕ ಜಿಲ್ಲೆಗಳಲ್ಲಿ ಹೆಚ್ಚುವರಿ ಮತ್ತು ನೇರ ಸಾರಿಗೆ ಮೂಲಸೌಲಭ್ಯ ಸಿಕ್ಕಂತಾಗುತ್ತದೆ. ಮಾತ್ರವಲ್ಲದೇ ಈ ಭಾಗದ ಭೂಮಿ ಬೆಲೆ ಸಹ ಗಗನ್ನಕೇರಲಿದೆ. ವಿವಿಧ ಕೈಗಾರಿಕೆಗಳ ಯೋಜನೆ, ಬಂಡವಾಳ ಹೂಡಿಕೆಯಿಂದಾಗಿ ಬೆಂಗಳೂರು, ತುಮಕೂರು, ದಾಣಗೆರೆ, ಹುಬ್ಬಳ್ಳಿ, ಧಾರವಾಡ ಹಾಗೂ ಬೆಳಗಾವಿ ಸೇರಿದಂತೆ ವಿವಿಧೆಡೆ ವರ್ಷದಿಂದ ವರ್ಷಕ್ಕೆ ಭೂಮಿ, ಆಸ್ತಿ ಬೆಲೆ ಏರಿಕೆ ಆಗುತ್ತಿದೆ. ಇದೀಗ ಈ ರೈಲು ಸೇವೆಯು ಈ ರಿಯಲ್ ಎಸ್ಟೇಟ್ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಊಹಿಸಲಾಗಿದೆ.

ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಗುರುವಾರ ಎಕ್ಸ್ ಪೋಸ್ಟ್ ಮಾಡಿದ್ದಾರೆ. ನಮ್ಮ ಬಹುದಿನದ ಬೇಡಿಕೆ ಈ ರೈಲಿಗಾಗಿ ನಾನು ಕೇಂದ್ರ ರೈಲ್ವೆ ಸಚಿವರಿಗೆ ವಿನಂತಿಸಿದ್ದೆ. ಸೂಪರ್ ಫಾಸ್ಟ್ ಕರ್ನಾಟಕದ ರೈಲು ಮಧ್ಯಭಾಗ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಾರ್ಗವಾಗಿ ವಾಣಿಜ್ಯ ಮುಂಬೈಗೆ ಸಂಚಾರ ಮಾಡುತ್ತದೆ, ಜನರಿಗೆ ಈ ರೈಲು ಸಂಚಾರದಿಂದ ನಗರಕ್ಕೆ ಅನುಕೂಲವಾಗುವಂತೆ ನಗರ ಮತ್ತು ವ್ಯಾಪಾರ ವಹಿವಾಟು ಮತ್ತಷ್ಟು ವೃದ್ಧಿಯಾಗಲಿದೆ ಎಂದು ಅವರು ಹೇಳಿದರು.

ಈ ಹೊಸ ರೈಲು ಸೇವೆಗೆ ಒಪ್ಪಿಗೆ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಾಗೂ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಈ ರೈಲು ಸೇವೆಯಿಂದ ಕರ್ನಾಟಕದ ದಕ್ಷಿಣ ಭಾಗದಿಂದ ಉತ್ತರ ಭಾಗದಿಂದ ಮಹಾರಾಷ್ಟ್ರದ ಮುಂಬೈ ಪ್ರಯಾಣಿಕರಿಗೂ ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕೈಗಾರಿಕೆ, ರಿಯಲ್ ಎಸ್ಟೇಟ್‌ಗೆ ಮಾತ್ರವಲ್ಲದೇ, ಪ್ರವಾಸೋಧ್ಯಮಕ್ಕೆ ಸಹಕಾರಿಯಾಗಲಿದೆ. ರಾಜ್ಯದ ಈ ಮೇಲಿನ ಕೆಲವು ಜಿಲ್ಲೆಗಳ ಸಹಸ್ರಾರು ಪ್ರಯಾಣಿಕರಿಗೆ ಸೇವೆ ಸಿಗಲಿದೆ. ಈಗಾಗಲೇ ಬೆಂಗಳೂರಿನಿಂದ ಹುಬ್ಬಳ್ಳಿ, ಧಾರವಾಡ,ಬೆಳಗಾವಿ ವರೆಗೆ ರೈಲುಗಳಿವೆ. ಹುಬ್ಬಳ್ಳಿಯಿಂದ ಪುಣೆಗೆ ಇತ್ತೀಚೆಗೆ ವಂದೇ ಭಾರತ್ ರೈಲು ಸಹ ಕಾರ್ಯಾಚರಣೆ ಮಾಡುತ್ತಿದೆ. ಇದರ ಬೆನ್ನಲ್ಲೆ ಕರ್ನಾಟಕದ ಒಂದು ತುದಿಯಿಂದ ಮುಂಬೈಗೆ ರೈಲು ಸೇವೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+