ದ.ಕನ್ನಡ ಜಿಲ್ಲೆ ಹೆದ್ದಾರಿಗಳ ಕಾಮಗಾರಿ ವೇಗಕ್ಕೆ ಕೇಂದ್ರ ಸಚಿವರ ಸೂಚನೆ
ನವದೆಹಲಿ, ಜನವರಿ 07: ಸಂಸದ ನಳೀನ್ ಕುಮಾರ್ ಕಟೀಲ್ ಅವರ ಮನವಿಯ ಮೇರೆಗೆ ದಕ್ಷಿಣ ಕನ್ನಡ ಲೋಕಸಭಾ ವ್ಯಾಪ್ತಿಯಲ್ಲಿ ಬರುವ ಹೆದ್ದಾರಿಗಳ ಸ್ಥಿತಿ-ಗತಿ ಬಗ್ಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 77 ರಲ್ಲಿ ಬಿ.ಸಿ.ರೋಡ್‌ನಿಂದ ಅಡ್ಡಹೊಳೆವರೆಗಿನ ಚತುಷ್ಪತ ರಸ್ತೆಯ ಕಾಮಗಾರಿಯು ನಿಧಾನಗತಿಯಲ್ಲಿ ಸಾಗುತ್ತಿರುವ ಬಗ್ಗೆ ನಳೀನ್ ಕುಮಾರ್ ಕಟೀಲ್ ಅವರು ಸಚಿವರಿಗೆ ದೂರು ನೀಡಿದ ಕಾರಣ ಕಾಮಗಾರಿ ನಿರ್ವಹಿಸುತ್ತಿರುವ ಎಲ್ ಆಂಡ್ ಟೀ ಸಂಸ್ಥೆಗೆ ಸಚಿವರು ಎಚ್ಚರಿಕೆ ನೀಡಿ, ಕಾಮಗಾರಿ ಬೇಗನೆ ಪೂರ್ಣಗೊಳಿಸುವಂತೆ ಸೂಚಿಸಿದರು.
ತಲವಾಡಿ-ಕುಂದಾಪುರ ಚತುಷ್ಪತ ರಸ್ತೆ ಕಾಮಗಾರಿ ಪೂರ್ಣಗೊಳಿಸಿ , ತೊಕ್ಕೊಟ್ಟು ಮತ್ತು ಪಂಪ್‌ವೇಲ್ ಮೇಲ್ಸೇತುವೆಗಳನ್ನು ಬೇಗನೆ ಮುಗಿಸಿ ಫೆಬ್ರವರಿ ಅಂತ್ಯದ ವೇಳೆಗೆ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂದು ಕೇಂದ್ರ ಸಚಿವರು ಕಾಮಗಾರಿ ನಿರ್ವಹಿಸುತ್ತಿರುವ ನವಯುಗ ಸಂಸ್ಥೆಗೆ ಸೂಚಿಸಿದ್ದಾರೆ.

ಕುಲಶೇಖರ-ಕಾರ್ಕಳ, ಬಿಸಿ ರೋಡ್-ಕಟೀಲು-ಮೂಲ್ಕಿ ಹಾಗೂ ಮೇಲ್ಕಾರು-ಕೋಣಾಜೆ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಭೂ ಸ್ವಾಧೀನ ಪ್ರಕ್ರಿಯಿಗೆ ವೇಗ ನೀಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ. ಫೆಬ್ರವರಿ ಅಂತ್ಯಕ್ಕೆ ಈ ರಸ್ತೆ ಕಾಮಗಾರಿಗೆ ಶಿಲಾನ್ಯಾಸ ಆಗಬೇಕೆಂದು ಸಚಿವರು ಅಧಿಕಾರಿಗಳಿಗೆ ಹೇಳಿದ್ದಾರೆ.
ಸಭೆಯಲ್ಲಿ ಸಚಿವರಾದ ಡಿ.ವಿ.ಸದಾನಂದಗೌಡ, ಸಂಸದ ನಳೀನ್‌ಕುಮಾರ್ ಕಟೀಲ್ ಅವರುಗಳು ಹಾಜರಿದ್ದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications