ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದ.ಕನ್ನಡ ಜಿಲ್ಲೆ ಹೆದ್ದಾರಿಗಳ ಕಾಮಗಾರಿ ವೇಗಕ್ಕೆ ಕೇಂದ್ರ ಸಚಿವರ ಸೂಚನೆ

|
Google Oneindia Kannada News

ನವದೆಹಲಿ, ಜನವರಿ 07: ಸಂಸದ ನಳೀನ್‌ ಕುಮಾರ್ ಕಟೀಲ್ ಅವರ ಮನವಿಯ ಮೇರೆಗೆ ದಕ್ಷಿಣ ಕನ್ನಡ ಲೋಕಸಭಾ ವ್ಯಾಪ್ತಿಯಲ್ಲಿ ಬರುವ ಹೆದ್ದಾರಿಗಳ ಸ್ಥಿತಿ-ಗತಿ ಬಗ್ಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 77 ರಲ್ಲಿ ಬಿ.ಸಿ.ರೋಡ್‌ನಿಂದ ಅಡ್ಡಹೊಳೆವರೆಗಿನ ಚತುಷ್ಪತ ರಸ್ತೆಯ ಕಾಮಗಾರಿಯು ನಿಧಾನಗತಿಯಲ್ಲಿ ಸಾಗುತ್ತಿರುವ ಬಗ್ಗೆ ನಳೀನ್ ಕುಮಾರ್ ಕಟೀಲ್ ಅವರು ಸಚಿವರಿಗೆ ದೂರು ನೀಡಿದ ಕಾರಣ ಕಾಮಗಾರಿ ನಿರ್ವಹಿಸುತ್ತಿರುವ ಎಲ್‌ ಆಂಡ್ ಟೀ ಸಂಸ್ಥೆಗೆ ಸಚಿವರು ಎಚ್ಚರಿಕೆ ನೀಡಿ, ಕಾಮಗಾರಿ ಬೇಗನೆ ಪೂರ್ಣಗೊಳಿಸುವಂತೆ ಸೂಚಿಸಿದರು.

ಪ್ರಧಾನಿ ಕುರ್ಚಿ ಮೇಲೆ ಗಡ್ಕರಿ ಟವೆಲ್; ಶಿವಸೇನಾ ಸಂಸದನ ಲೆಕ್ಕಾಚಾರಪ್ರಧಾನಿ ಕುರ್ಚಿ ಮೇಲೆ ಗಡ್ಕರಿ ಟವೆಲ್; ಶಿವಸೇನಾ ಸಂಸದನ ಲೆಕ್ಕಾಚಾರ

ತಲವಾಡಿ-ಕುಂದಾಪುರ ಚತುಷ್ಪತ ರಸ್ತೆ ಕಾಮಗಾರಿ ಪೂರ್ಣಗೊಳಿಸಿ , ತೊಕ್ಕೊಟ್ಟು ಮತ್ತು ಪಂಪ್‌ವೇಲ್ ಮೇಲ್ಸೇತುವೆಗಳನ್ನು ಬೇಗನೆ ಮುಗಿಸಿ ಫೆಬ್ರವರಿ ಅಂತ್ಯದ ವೇಳೆಗೆ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂದು ಕೇಂದ್ರ ಸಚಿವರು ಕಾಮಗಾರಿ ನಿರ್ವಹಿಸುತ್ತಿರುವ ನವಯುಗ ಸಂಸ್ಥೆಗೆ ಸೂಚಿಸಿದ್ದಾರೆ.

Central minister instructed officers to complete Dakshin Kannada constituency highway works soon

ಕುಲಶೇಖರ-ಕಾರ್ಕಳ, ಬಿಸಿ ರೋಡ್‌-ಕಟೀಲು-ಮೂಲ್ಕಿ ಹಾಗೂ ಮೇಲ್ಕಾರು-ಕೋಣಾಜೆ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಭೂ ಸ್ವಾಧೀನ ಪ್ರಕ್ರಿಯಿಗೆ ವೇಗ ನೀಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ. ಫೆಬ್ರವರಿ ಅಂತ್ಯಕ್ಕೆ ಈ ರಸ್ತೆ ಕಾಮಗಾರಿಗೆ ಶಿಲಾನ್ಯಾಸ ಆಗಬೇಕೆಂದು ಸಚಿವರು ಅಧಿಕಾರಿಗಳಿಗೆ ಹೇಳಿದ್ದಾರೆ.

ಅಮಿತ್ ಶಾ ರಾಜೀನಾಮೆ ನೀಡಲಿ: ಬಿಜೆಪಿ ಮುಖಂಡನಿಂದ ಬಹಿರಂಗ ಪತ್ರ!ಅಮಿತ್ ಶಾ ರಾಜೀನಾಮೆ ನೀಡಲಿ: ಬಿಜೆಪಿ ಮುಖಂಡನಿಂದ ಬಹಿರಂಗ ಪತ್ರ!

ಸಭೆಯಲ್ಲಿ ಸಚಿವರಾದ ಡಿ.ವಿ.ಸದಾನಂದಗೌಡ, ಸಂಸದ ನಳೀನ್‌ಕುಮಾರ್ ಕಟೀಲ್ ಅವರುಗಳು ಹಾಜರಿದ್ದರು.

English summary
Central road and transport minister Nitin Gadkari instructed officers and construction companies to complete highway construction of Dakshin Kannada constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X