ವರ್ಷಕ್ಕೆ 13 ಲಕ್ಷ ಟನ್ ಗೊಬ್ಬರ ತಯಾರಿಸಲು ಯೋಜನೆ
ಹುಬ್ಬಳ್ಳಿ, ಡಿ. 8: ದೇಶ ಎದುರಿಸುತ್ತಿರುವ ಗೊಬ್ಬರದ ಕೊರತೆ ನೀಗಿಸಲು ಬೃಹತ್ ಗೊಬ್ಬರ ನಿರ್ಮಾಣ ಘಟಕ ಸ್ಥಾಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕರ್ನಾಟಕದಲ್ಲಿ ಗೊಬ್ಬರಕ್ಕಾಗಿ ಪ್ರತಿವರ್ಷ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಾವೇರಿಯಲ್ಲಿ ಓರ್ವ ರೈತ ಗೋಲಿಬಾರ್‌ಗೆ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಗೊಬ್ಬರ ಉತ್ಪಾದನೆ ಘಟಕ ಸ್ಥಾಪನೆ ಪ್ರಾಮುಖ್ಯತೆ ಪಡೆದಿದೆ.
ಈ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ವಿವರಣೆ ನೀಡಿರುವ ಕೇಂದ್ರ ರಾಸಾಯನಿಕ ಹಾಗೂ ಗೊಬ್ಬರ ಸಚಿವ ಅನಂತಕುಮಾರ್, ಉತ್ತರ ಕರ್ನಾಟಕದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ಗೊಬ್ಬರ ಉತ್ಪಾದನೆ ಘಟಕ ಸ್ಥಾಪಿಸುವ ಉದ್ದೇಶವಿದೆ ವರ್ಷಕ್ಕೆ 13 ಲಕ್ಷ ಟನ್‌ಗಳಷ್ಟು ಗೊಬ್ಬರ ಉತ್ಪಾದಿಸಲಾಗುವುದು. ಇದಕ್ಕಾಗಿ ಅಂದಾಜು 5,500 ಕೋಟಿ ರೂಪಾಯಿ ವೆಚ್ಚವಾಗುವ ನಿರೀಕ್ಷೆ ಇದೆ. ಘಟಕ ನಿರ್ಮಾಣಕ್ಕೆ 500 ಎಕರೆ ಭೂಮಿ ಅಗತ್ಯ. ರಾಜ್ಯ ಸರ್ಕಾರ ಶೇ. 10ರಷ್ಟು ಬಂಡವಾಳ ಹೂಡಲಿದೆ ಎಂದು ತಿಳಿಸಿದರು. [ರೈತರ ಬದುಕಿಗೆ ಆಸರೆಯಾದ ಎರೆಹುಳು ಗೊಬ್ಬರ]

ಘಟಕ ನಿರ್ಮಾಣಕ್ಕೆ ನೀಡಲಾಗುವ ಭೂಮಿಯ ಕುರಿತು ತಿಳಿಸಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಯೋಜನೆ ಕುರಿತು ರೂಪುರೇಷೆಯನ್ನು ಇನ್ನಷ್ಟೇ ತಯಾರಿಸಬೇಕಿದೆ. ನೈಸರ್ಗಿಕ ಅನಿಲದ ಲಭ್ಯತೆಯ ಆಧಾರದ ಮೇಲೆ ಘಟಕ ನಿರ್ಮಾಣಕ್ಕಾಗಿ ಭೂಮಿ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು. [ಪಂಚಗವ್ಯ - ರೈತರಿಗೆ ವರದಾನ]
ದಾಬೊಲ್‌ನಿಂದ ಬಿಡಾಡಿವರೆಗೆ ಬೆಂಗಳೂರು ಮೂಲಕ ಗ್ಯಾಸ್ ಪೈಪ್‌ಲೈನ್ ಅಳವಡಿಸುವ ಯೋಜನೆ ಜಾರಿ ಕುರಿತು ಗೊಂದಲವಿದೆ. ಆದರೆ, ಯೋಜಿತ ಗೊಬ್ಬರ ತಯಾರಿಕಾ ಘಟಕ ನಿರ್ಮಾಣವು ಗ್ಯಾಸ್ ಲಭ್ಯತೆಯನ್ನೇ ಆಧರಿಸಿದೆ. ಈ ಎಲ್ಲ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಘಟಕ ನಿರ್ಮಿಸುವ ಪ್ರದೇಶವನ್ನು ಅಂತಿಮಗೊಳಿಸಲಾಗುವುದೆಂದು ತಿಳಿಸಿದರು.
ಯೋಜನೆಗೆ ಖಾಸಗಿ ಸಹಭಾಗಿತ್ವ?: ಗೊಬ್ಬರ ನಿರ್ಮಾಣ ಘಟಕದ ರೂಪುರೇಷೆಯನ್ನು ಅಂತಿಮಗೊಳಿಸಿಲ್ಲ. ಖಾಸಗಿ ಸಹಭಾಗಿತ್ವದಲ್ಲಿ ಯೋಜನೆ ಆರಂಭಿಸುವ ಯೋಚನೆಯೂ ಇದೆ. ಸಂಪೂರ್ಣ ಸರ್ಕಾರಿ ಒಡೆತನವೋ ಅಥವಾ ಖಾಸಗಿ ಮತ್ತು ಸರ್ಕಾರಿ ಒಡೆತನವೋ ಎಂಬುದರ ಕುರಿತು ಇನ್ನಷ್ಟೇ ಚರ್ಚಿಸಬೇಕಾಗಿದೆ ಎಂದು ಅನಂತಕುಮಾರ್ ತಿಳಿಸಿದರು.
ಈ ಘಟಕ ನಿರ್ಮಾಣದ ನಂತರ ಗೊಬ್ಬರಕ್ಕೆ ನೀಡುತ್ತಿರುವ ಧನಸಹಾಯ ನೀತಿಯಲ್ಲಿ ಯಾವುದೇ ಬದಲಾವಣೆ ಉಂಟಾಗುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಕಳಪೆ ಗೊಬ್ಬರ-ರಾಜ್ಯ ಸರ್ಕಾರವೇ ಕ್ರಮ ಕೈಗೊಳ್ಳಬೇಕು...
ರಾಜ್ಯದಲ್ಲಿ ವಿತರಣೆಯಾಗುತ್ತಿರುವ ಕಳಪೆ ಗುಣಮಟ್ಟದ ಗೊಬ್ಬರ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಅನಂತಕುಮಾರ್, ಗೊಬ್ಬರ ಮಾರುವಾಗ ಅದರ ಗುಣಮಟ್ಟದ ಕುರಿತು ಖಾತ್ರಿಪಡಿಸಿಕೊಳ್ಳುವುದು ಮಾರಾಟ ಕೇಂದ್ರದ ಕರ್ತವ್ಯ ಎಂದು ತಿಳಿಸಿದರು. [ಒಂದು ಎಕರೆ ಭೂಮಿಯಲ್ಲಿ ಕೃಷಿ ಬ್ರಹ್ಮಾಂಡ]
ಅಲ್ಲದೆ, ಕಳಪೆ ಗೊಬ್ಬರ ಹಾಗೂ ಇಂತಹ ಗೊಬ್ಬರ ತಯಾರಿಸಿ, ಪೂರೈಸುವ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾದದ್ದು ರಾಜ್ಯ ಸರ್ಕಾರದ ಕರ್ತವ್ಯ ಎಂದು ಸ್ಪಷ್ಟಪಡಿಸಿದರು.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications