ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಕೇಂದ್ರ ನಾಯಕರ ಸಂತಾಪ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 29: ನಟ ಪುನೀತ್​ ರಾಜ್​ಕುಮಾರ್​ ಅವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಕೇಂದ್ರ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.

ಪುನೀತ್ ರಾಜ್‌ಕುಮಾರ್ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮೂಲಗಳ ಪ್ರಕಾರ ಪುನೀತ್ ರಾಜಕುಮಾರ್ ಇಹಲೋಕ ತ್ಯಜಿಸಿದ್ದಾರೆ. ಇದರಿಂದ ಕನ್ನಡ ಚಿತ್ರರಂಗ, ಕನ್ನಡ ನಾಡು ಅಪಾರ ನಷ್ಟಕ್ಕೊಳಗಾಗಿದ್ದು, ಅಭಿಮಾನಿಗಳು ಕಣ್ಣೀರು ಸುರಿಸುತ್ತಿದ್ದಾರೆ. ಪುನೀತ್ ನಿಧನದ ಸುದ್ದಿಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ..

ತಮ್ಮ ತಂದೆಯ ಹಾದಿಯಲ್ಲೇ ಸಾಗಿರುವ ಪುನೀತ್, ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಪುನೀತ್ ನಿಧನಕ್ಕೆ ನಾಡು ಅಪಾರ ಶೋಕದಲ್ಲಿ ಮುಳುಗಿದ್ದು, ಸಂತಾಪ ಸೂಚಿಸುತ್ತಿದೆ.

Central Political Leaders Condolence To Power Star Puneet Rajkumars Death

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟ್ವೀಟ್ ಮಾಡಿದ್ದು, ಕನ್ನಡ ಚಿತ್ರರಂಗದ ಖ್ಯಾತ ನಟ, ಡಾ. ರಾಜಕುಮಾರ ಕುಟುಂಬದ ಕುಡಿ, ಜನಪ್ರಿಯ ನಟ, ಅತ್ಯುತ್ತಮ ಬಾಲನಟನೆಗಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಅಪ್ಪು ಎಂದೇ ಖ್ಯಾತರಾದ ಪುನೀತ್ ರಾಜಕುಮಾರ ಅವರ ನಿಧನದ ವಿಷಯದಿಂದ ತುಂಬಾ ಆಘಾತವಾಗಿದೆ ಎಂದಿದ್ದಾರೆ.

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಕೂಡ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕನ್ನಡದ ಅತ್ಯಂತ ಪ್ರೀತಿಯ ಕಲಾವಿದ ಶ್ರೀ ಪುನೀತ್ ರಾಜಕುಮಾರ್ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ. ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ. ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದು, ಓಂ ಶಾಂತಿ ಪವರ್ ಸ್ಟಾರ್ ಶ್ರೀ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಭಗವಂತ ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಸಚಿವೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದು, ನಮ್ಮ ಪ್ರಾರ್ಥನೆ ಆ ದೇವರಿಗೆ ಕೇಳಿಸಲಿಲ್ಲ, ಪುನೀತ್ ರಾಜ್‌ಕುಮಾರ್ ನಿಧನದಿಂದ ತುಂಬಾ ಆಘಾತವಾಗಿದೆ, ಅವರು ಎಂದಿಗೂ ನಮ್ಮೊಂದಿಗೆ ಇರುತ್ತಾರೆ ಎಂದು ಹೇಳಿದ್ದಾರೆ.

English summary
Central Political Leaders Condolence To Actor Power Star Puneet Rajkumar's Death.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X