ಸಿಎಜಿ ವರದಿ: ಕೇಂದ್ರದ ಈ ಹಗರಣ, ಭ್ರಷ್ಟಾಚಾರ ಬಗ್ಗೆ ತನಿಖೆಗೆ ಆಗ್ರಹಿಸಿ ಸಿದ್ದರಾಮಯ್ಯ ಸವಾಲು
ಬೆಂಗಳೂರು, ಆಗಸ್ಟ್ 18: ಕರ್ನಾಟಕ ರಾಜ್ಯದಲ್ಲಿ ಹಿಂದಿದ್ದ ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣ ಈಗಿನ ರಾಜ್ಯ ಕಾಂಗ್ರೆಸ್ ಸರ್ಕಾರ ತನಿಖೆಗೆ ವಹಿಸಿ ಆದೇಶಿಸಿದೆ. ಇದರ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರದ ಭ್ರಷ್ಟಾಚಾರಗಳನ್ನು ಬಯಲು ಮಾಡಿರುವ ಸಿಎಜಿ ವರದಿ ಕುರಿತು ತನಿಖೆ ನಡೆಸುವಂತೆ ಪ್ರಧಾನಿ ಮೋದಿ ಅವರಿಗೆ ಸವಾಲು ಹಾಕಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಈ ಕುರಿತು ಸರಣಿ ಟ್ವೀಟ್ ಮಾಡಿದ್ದು, ಸಿಎಜಿ ವರದಿ ಜೊತೆಗೆ ಭಾರತ್ ಮಾಲಾ, ದ್ವಾರಕಾ ಎಕ್ಸ್‌ಪ್ರೆಸ್ ವೇ ನಲ್ಲಿ ನಡೆದಿರುವ ಹಗರಣಗಳನ್ನೂ ತನಿಖೆ ನಡೆಸುವಂತೆ ಅವರು ಕೇಂದ್ರಕ್ಕೆ ಒತ್ತಾಯಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೇ, ಹಿಂದಿನ ನಿಮ್ಮ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯದ ಗುತ್ತಿಗೆದಾರರು ಮಾಡಿರುವ 40% ಕಮಿಷನ್ ಆರೋಪದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ನೇತೃತ್ವದ ಸಮಿತಿಯನ್ನು ರಚನೆ ಮಾಡಿ ನಾವು ನುಡಿದಂತೆ ನಡೆದಿದ್ದೇವೆ.
ಮಾನ್ಯ @narendramodi ಅವರೇ, ಹಿಂದಿನ ನಿಮ್ಮ ರಾಜ್ಯ @BJP4Karnataka ಸರ್ಕಾರದ ವಿರುದ್ಧ ರಾಜ್ಯದ ಗುತ್ತಿಗೆದಾರರು ಮಾಡಿರುವ 40% ಕಮಿಷನ್ ಆರೋಪದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ನೇತೃತ್ವದ ಸಮಿತಿಯನ್ನು ರಚನೆ ಮಾಡುವ ಮೂಲಕ ನಾವು ನುಡಿದಂತೆ ನಡೆದಿದ್ದೇವೆ.
— Siddaramaiah (@siddaramaiah) August 18, 2023
ನಿಮ್ಮದೇ ಸರ್ಕಾರದಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ… pic.twitter.com/cvZ5hjHVk0
ನಿಮ್ಮದೇ ಸರ್ಕಾರದಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಸಿಎಜಿ ನೀಡಿರುವ ವರದಿಯ ಬಗ್ಗೆ ನೀವು ಯಾವಾಗ ತನಿಖೆ ನಡೆಸುವ ಮೂಲಕ 'ನಾ ಖಾವೂಂಗಾ ನಾ ಖಾನೆ ದೂಂಗಾ' ಎಂಬ ನಿಮ್ಮ ಘೋಷಣೆಗೆ ಅನುಗುಣವಾಗಿ ನುಡಿದಂತೆ ನಡೆಯುವಿರಿ? ಎಂದು ಪ್ರಶ್ನೆ ಮಾಡಿದ್ದಾರೆ.
ದ್ವಾರಕಾ ಎಕ್ಸ್‌ಪ್ರೆಸ್ ಹೈವೇ ಯೋಜನೆ:132 ಕೋಟಿ ಲೂಟಿ
ಪ್ರಧಾನಿಯವರ ಮೂಗಿನಡಿಯಲ್ಲಿಯೇ ದ್ವಾರಕಾ ಎಕ್ಸ್‌ಪ್ರೆಸ್ ಹೈವೇ ಯೋಜನೆಯಲ್ಲಿ ಪ್ರತಿ ಕಿಮೀಗೆ 250 ಕೋಟಿ ರೂ. ಕೊಳ್ಳೆ ಹೊಡೆಯಲಾಗಿದೆ. 5 ಟೋಲ್ ಪ್ಲಾಜಾಗಳಲ್ಲಿ 132 ಕೋಟಿ ಹಣ ಲೂಟಿ ಆಗಿದೆ. ಹೀಗಿದ್ದರೂ ನೀವು ಪದೇ ಪದೇ ಉಲ್ಲೇಖಿಸುವ 'ಆಯುಷ್ಮಾನ್ ಭಾರತ್' ಯೋಜನೆಯಲ್ಲಂತೂ ಮೃತಪಟ್ಟ ಸುಮಾರು 88,000 ಫಲಾನುಭವಿಗಳ ಹೆಸರಿನಲ್ಲಿ ಹೊಸದಾಗಿ ಬಿಲ್‌ಗಳನ್ನು ಕ್ಲೈಮ್ ಮಾಡಿ ಹಣ ನುಂಗಿ ಹಾಕಲಾಗಿದೆ. ಈ ಬಗ್ಗೆ ಸಿಎಜಿ ವರದಿ ಮಾಡಿದೆ. ಇದರ ಬಗ್ಗೆ ತನಿಖೆ ನಡೆಸುವ ಧೈರ್ಯ ನಿಮಗಿದೆಯೇ ಎಂದು ಸಿದ್ದರಾಮಯ್ಯ ಕಿಡಿ ಕಾರಿದರು.

ದೇಶದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯ ಅಧ್ಯಕ್ಷರೂ ಆಗಿರುವ ಪ್ರಧಾನಿ ಮೋದಿಯವರು ಭಾರತ್ ಮಾಲಾ ಯೋಜನೆಯಲ್ಲಿ ಪ್ರತಿ ಕಿಮೀ ಗೆ ರೂ.15.37 ಕೋಟಿ ಗಳಿಂದ ರೂ.32 ಕೋಟಿ ವರೆಗೆ ಹೆಚ್ಚುವರಿ ಖರ್ಚು ತೋರಿಸಲಾಗಿದೆ ಎಂದು ಸಿಎಜಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಈ ಯೋಜನೆಯಲ್ಲಿ 3,500 ಕೋಟಿ ಹಣ ವರ್ಗಾವಣೆ
ಭಾರತ ಮಾಲಾ ಯೋಜನೆಯ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ. ಆ ಯೋಜನೆ ಬಗೆಗೆ ವಿಸ್ತೃತವಾದ ವರದಿಯೇ ಸಲ್ಲಿಕೆ ಆಗಿಲ್ಲ. ಹೀಗಿದ್ದರೂ 3,500 ಕೋಟಿ ಹಣವನ್ನು ವರ್ಗಾಯಿಸಲಾಗಿದೆ ಎಂದು ಸಿಎಜಿ ಲೋಪವನ್ನು ಎತ್ತಿ ತೋರಿಸಿದೆ. ಪ್ರಧಾನಮಂತ್ರಿಯವರೇ ಈ ಬಗ್ಗೆ ನಿಮ್ಮ ಮೌನವು ಅಕ್ರಮದಲ್ಲಿ ತಾವು ಷಾಮೀಲಾಗಿದ್ದೀರಿ ಅಂತ ಹೇಳುತ್ತಿದೆ ಎಂದು ವ್ಯಾಖ್ಯಾನಿಸಬಹುದೇ? ಎಂದು ಕೇಳಿದ್ದಾರೆ.
ಪ್ರಧಾನಿಗಳು I.N.D.I.A ಒಕ್ಕೂಟವನ್ನು ಭ್ರಷ್ಟರ ಒಕ್ಕೂಟ ಎಂದು ಸುಳ್ಳು ಆರೋಪ ಹೊರಿಸಿ ಸಂಭ್ರಮಿಸುತ್ತೀದ್ದೀರಿ. ನಿಮ್ಮದೇ ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿರುವ ಬಗ್ಗೆ ವರದಿಯು ಬಹಿರಂಗಪಡಿಸಿದ್ದರೂ ಸಹ ಕಣ್ಣು, ಬಾಯಿಮುಚ್ಚಿ ಕೂತಿದ್ದೀರಿ. ಇದು ಆತ್ಮವಂಚಕ ನಡವಳಿಕೆ ಅಲ್ಲವೇ? ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರೇ, ದೆಹಲಿ-ಗುರುಗ್ರಾಮ ಗಡಿಯಲ್ಲಿರುವ ದ್ವಾರಕಾ ಎಕ್ಸ್ ಪ್ರೆಸ್ ವೇ ಯೋಜನೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ವರದಿ ಇದೆ. ಪ್ರತಿ ಕಿಮೀ.ಗೆ 18.2 ಕೋಟಿ ರೂ.ಗಳಿಂದ 251 ಕೋಟಿ ರೂ.ಗಳ ವರಗೆ ನಿರ್ಮಾಣ ವೆಚ್ಚವನ್ನು ಅವೈಜ್ಞಾನಿಕ ರೀತಿಯಲ್ಲಿ ಏರಿಸಲಾಗಿರುವ ಆರೋಪಗಳಿವೆ. ಈ ಬಗ್ಗೆ ಸಮಗ್ರ ರೂಪದ ತನಿಖೆಯ ಅಗತ್ಯ ಇದೆ ಎಂದು ನಿಮಗೆ ಅನಿಸುವುದಿಲ್ಲವೇ?. ಕಾಂಗ್ರೆಸ್ ನುಡಿದಂತೆ ನಡೆದಿದ್ದು, ಪ್ರಧಾನಮಂತ್ರಿಯಾದ ನೀವು ಸಿಎಜಿ ವರದಿ ಕುರಿತು ತನಿಖೆ ನಡೆಸಿ ಎಂದು ಆಗ್ರಹಿಸಿದರು.
ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಬಗ್ಗೆ ಆರೋಪ
ಅಯೋಧ್ಯೆಯ ರಾಮ ಮಂದಿರ ನಿರ್ಮಾಣದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದ ಕುರಿತು ನಿಮ್ಮದೇ ಪರಿವಾರ ಆರೋಪಗಳನ್ನು ಮಾಡುತ್ತಿದೆ. 'ಪಿಎಂ ಕೇರ್ ಫಂಡ್' ಅನ್ನು ಸರ್ಕಾರದ್ದೆಂದು ಭಾವಿಸಿ ಮುಗ್ಧ ಜನತೆ ಅಪಾರ ಪ್ರಮಾಣದಲ್ಲಿ ಹಣವನ್ನು ದಾನವಾಗಿ ನೀಡುತ್ತಿದ್ದಾರೆ. ಆದರೆ, ನಿಮ್ಮ ಸರ್ಕಾರ ಅದನ್ನು ಸಾರ್ವಜನಿಕ ದತ್ತಿ ಟ್ರಸ್ಟ್ ಎಂದು ಹೆಸರಿಸಿ ಅದನ್ನು ಮಾಹಿತಿ ಹಕ್ಕಿನಿಂದ ಹೊರಗೆ ಇಟ್ಟಿದೆ. ಈ ದುಡ್ಡಿನಿಂದ ಯಾರಿಗೆ ಲಾಭವಾಗುತ್ತಿದೆ? ಎಂದು ನೀವೆ ತಿಳಿಸಿ ಎಂದು ವರದಿ ತನಿಖೆ ಬಗ್ಗೆ ವ್ಯಾಖ್ಯಾನಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.












Click it and Unblock the Notifications