ಕೇಂದ್ರೀಯ ವಿವಿಗಳ ಪ್ರವೇಶಕ್ಕೆ CUET ಕಡ್ಡಾಯ: ಕನ್ನಡದಲ್ಲಿಯೂ ಪರೀಕ್ಷೆ ಬರೆಯಬಹುದು

ನವದೆಹಲಿ, ಮಾ.22: ದೇಶದಾದ್ಯಂತ ಇರುವ ಕೇಂದ್ರೀಯ ವಿಶ್ವವಿದ್ಯಾಲಯಗಳ ಪ್ರವೇಶಕ್ಕೆ 2022-23ನೇ ಸಾಲಿನಿಂದ ಪ್ರವೇಶ ಪರೀಕ್ಷೆ (ಸಿಯುಇಟಿ) ನಡೆಸಲು ತೀರ್ಮಾನಿಸಲಾಗಿದೆ. ವಿಶೇಷವೆಂದರೆ ಕರ್ನಾಟಕದ ವಿದ್ಯಾರ್ಥಿಗಳು ಕನ್ನಡದಲ್ಲಿಯೂ ಪರೀಕ್ಷೆ ಬರೆಯಬಹುದು.

ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಪದವಿ ಕೋರ್ಸ್‌ಗಳಿಗೆ (ಯುಜಿ) ಪ್ರವೇಶ ಪಡೆಯಬೇಕಾದರೆ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣ ಆಗುವುದು ಕಡ್ಡಾಯ ಮಾಡಲಾಗಿದೆ ಎಂದು ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ (ಯುಜಿಸಿ) ಅಧ್ಯಕ್ಷ ಎಂ.ಜಗದೀಶ್ ಕುಮಾರ್ ಹೇಳಿದ್ದಾರೆ.

ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ 12ನೇ ತರಗತಿ ಮತ್ತು ರಾಜ್ಯ ಪಠ್ಯಕ್ರಮಗಳಲ್ಲಿ ಓದಿದಂತಹ ವಿದ್ಯಾರ್ಥಿಗಳಿಗೆ 10+2 (ಕರ್ನಾಟಕದಲ್ಲಿ ಪಿಯು) ಪಡೆದ ಅಂಕಗಳು ಹಾಗೂ ಕೇಂದ್ರೀಯ ವಿಶ್ವವಿದ್ಯಾಲಯಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಯುಇಟಿ) ಪರಿಗಣಿಸಿ ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಪ್ರವೇಶ ಕಲ್ಪಿಸಲಾಗುತ್ತದೆ ಎಂದು ಜಗದೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

Central University admission in 2022-23 only through CUET

ಕನ್ನಡದಲ್ಲಿಯೂ ಪರೀಕ್ಷೆ:

ಸಿಯುಇಟಿ ಈ ಬಾರಿ ಜುಲೈನಲ್ಲಿ ನಡೆಯುವ ಸಾಧ್ಯತೆ ಇದೆ. ಕನ್ನಡ ಸಹಿತ 13 ಭಾಷೆಗಳಲ್ಲಿ ಪ್ರವೇಶ ಪರೀಕ್ಷೆಯನ್ನು ಬರೆಯಬಹುದಾಗಿದೆ. ಹಿಂದಿ, ಮರಾಠಿ, ಗುಜರಾತಿ, ತಮಿಳು, ತೆಲುಗು, ಕನ್ನಡ, ಮಲಯಾಳಂ, ಉರ್ದು, ಅಸ್ಸಾಮಿ, ಬಂಗಾಳಿ, ಪಂಜಾಬಿ, ಒಡಿಯಾ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪರೀಕ್ಷೆ ಬರೆಯಬಹುದು ಎಂದು ಸ್ಪಷ್ಟಪಡಿಸಲಾಗಿದೆ.

ಏನಿದು ಸಿಯುಇಟಿ?

ಕೇಂದ್ರೀಯ ವಿಶ್ವವಿದ್ಯಾಲಯಗಳ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಈ ಸಾಮಾನ್ಯ ಪ್ರವೇಶ ಪರೀಕ್ಷೆಯ ಉದ್ದೇಶ. ಹಾಗಂತ ಇದು ಹೊಸದಾಗಿ ತಂದಿದ್ದೇನೂ ಅಲ್ಲ. ಯುಪಿಎ ಸರ್ಕಾರದ ಎರಡನೇ ಅವಧಿಯಲ್ಲಿ ಅಂದರೆ 2010ರಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಯುಸಿಇಟಿ) ಜಾರಿ ಮಾಡಲಾಗಿತ್ತು. ಆದರೆ, ಕಳೆದ ವರ್ಷದವರೆಗೂ ಕೇವಲ 14 ವಿಶ್ವವಿದ್ಯಾಲಯಗಳು ಮಾತ್ರ ಇದನ್ನು ಅನುಸರಿಸುತ್ತಿದ್ದವು. ಹೀಗಾಗಿ ಇದು ವಿಫಲವಾಗಿತ್ತು.

ಈಗ ಇದೇ ಮಾದರಿಯನ್ನು ಸ್ವಲ್ಪ ಮಾರ್ಪಡಿಸಿ ಕೇಂದ್ರೀಯ ವಿಶ್ವವಿದ್ಯಾಲಯಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಯುಇಟಿ) ಎಂದು ಬದಲಿಸಲಾಗಿದೆ. ದೇಶದ 45 ವಿಶ್ವವಿದ್ಯಾಲಯಗಳು ಇನ್ನು ಮುಂದೆ ಇದನ್ನು ಕಡ್ಡಾಯವಾಗಿ ಅನುಸರಿಸರಿಸಲಿವೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಎಟಿ) ಈ ಪರೀಕ್ಷೆಯನ್ನು ನಡೆಸಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+