ರಾಜ್ಯದಲ್ಲಿ ಉತ್ಪಾದಿಸುವ ಆಮ್ಲಜನಕ ಬಳಕೆಗೆ ಕೇಂದ್ರ ನೀಡಿತು ಒಪ್ಪಿಗೆ
ಬೆಂಗಳೂರು, ಮೇ 19: ರಾಜ್ಯದಲ್ಲಿ ಉತ್ಪಾದನೆ ಆಗುವ ಆಮ್ಲಜನಕವನ್ನು ರಾಜ್ಯದಲ್ಲೇ ಬಳಕೆ ಮಾಡಲು ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದ್ದು ಅಧಿಕೃತ ಆದೇಶ ಸದ್ಯದಲ್ಲೇ ಹೊರಬೀಳಲಿದೆ ಎಂದು ರಾಜ್ಯದ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಉಸ್ತುವಾರಿ ಮತ್ತು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ರಾಜ್ಯದಲ್ಲಿನ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಉತ್ಪಾದನೆ ಆಗುವ ಆಮ್ಲಜನಕವನ್ನು ರಾಜ್ಯದಲ್ಲೇ ಬಳಸಿಕೊಳ್ಳಲು ಅವಕಾಶ ನೀಡುವಂತೆ ಕೇಂದ್ರ ಸಚಿವರಾದ ಪಿಯೂಶ್ ಗೋಯೆಲ್, ಪ್ರಹ್ಲಾದ್ ಜೋಶಿ ಹಾಗೂ ಸದಾನಂದಗೌಡ ಅವರೊಂದಿಗೆ ಹಲವು ಹಂತಗಳ ಮಾತುಕತೆ ನಡೆಸಿದ್ದೆವು. ಅಲ್ಲದೆ, ಹಲವು ಬಾರಿ ಪತ್ರಗಳನ್ನು ಬರೆಯಲಾಗಿತ್ತು. ಈ ಮಾತುಕತೆ ಮತ್ತು ಸಮಾಲೋಚನೆಗೆ ಫಲ ದೊರೆತಿದೆ. ಸದ್ಯದಲ್ಲೇ ಅಧಿಕೃತ ಘೋಷಣೆ ಹೊರಡಿಸಲಿದ್ದಾರೆ ಎಂದು ಹೇಳಿದರು. ಮುಂದೆ ಓದಿ...

"ಕೇಂದ್ರದಿಂದ ರಾಜ್ಯಕ್ಕೆ ಸಾಕಷ್ಟು ನೆರವು ದೊರೆತಿದೆ"
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬಹಳಷ್ಟು ನೆರವು ದೊರಕುತ್ತಿದೆ. ಕೇಂದ್ರ ಸರ್ಕಾರ ಬಹ್ರೇನ್ ಮತ್ತು ಕುವೈತ್ ನಿಂದ 180 ಮೆಟ್ರಿಕ್ ಟನ್ ಆಮ್ಲಜನಕವನ್ನು ರಾಜ್ಯಕ್ಕೆ ನೀಡಿದೆ. ಅಲ್ಲದೆ, ರೈಲಿನ ಮೂಲಕ ಮೇ 11 ರಂದು ಜಮ್‌ಶೇಡ್‌ಪುರದಿಂದ 120 ಎಂ.ಟಿ, ಮೇ 15 ರಂದು ಕಳಿಂಗಾನಗರದಿಂದ 180 ಎಂ.ಟಿ ಆಮ್ಲಜನಕ ಸರಬರಾಜು ಆಗಿದೆ. ಮುಂದಿನ ಒಂದು ವಾರದಲ್ಲಿ ಸುಮಾರು 320 ದ್ರವೀಕೃತ ಆಮ್ಲಜನಕ ರವಾನೆ ಆಗುವ ನಿರೀಕ್ಷೆ ಇದೆ. 200 ಸಿಲಿಂಡರ್‌ಗಳನ್ನು ಕೇಂದ್ರ ರಾಜ್ಯಕ್ಕೆ ನೀಡಿದೆ. ರಾಜ್ಯದಿಂದ ತೆಲಂಗಾಣಕ್ಕೆ 145 ಎಂ.ಟಿ, ಆಂಧ್ರಪ್ರದೇಶಕ್ಕೆ 63 ಎಂ.ಟಿ ಮತ್ತು ಮಹಾರಾಷ್ಟ್ರಕ್ಕೆ 40 ಎಂ.ಟಿಗಳಷ್ಟು ರವಾನೆ ಮಾಡಲಾಗುತ್ತಿದೆ. ಇದನ್ನು ರಾಜ್ಯದಲ್ಲೇ ಬಳಸಿಕೊಳ್ಳಲು ಅನುವು ಮಾಡಿಕೊಡಲು ಕೇಂದ್ರ ತಾತ್ವಿಕ ಒಪ್ಪಿಗೆ ನೀಡಿದೆ. ಅಧಿಕೃತ ಆದೇಶ ಹೊರಬಿದ್ದ ನಂತರ ಬೇರೆ ರಾಜ್ಯಗಳಿಂದ ರಾಜ್ಯಕ್ಕೆ ಹಂಚಿಕೆ ಆಗಿರುವ ಆಮ್ಲಜನಕ ಸಾಗಾಣಿಕೆಯಲ್ಲಿ ಆಗುತ್ತಿರುವ ವಿಳಂಬ ತಪ್ಪುತ್ತದೆ ಎಂದು ಹೇಳಿದರು.

ಜಿಲ್ಲೆಯ ಸಕ್ರಿಯ ಪ್ರಕರಣದ ಆಧಾರದ ಮೇಲೆ ಆಮ್ಲಜನಕ ಪೂರೈಕೆ
ಆಯಾ ಜಿಲ್ಲೆಗಳಲ್ಲಿರುವ ಸಕ್ರಿಯ ಪ್ರಕರಣಗಳ ಆಧಾರದ ಮೇಲೆ ಆಮ್ಲಜನಕ ಹಂಚಿಕೆ ಮಾಡಲಾಗುತ್ತಿದೆ. ರಾಜ್ಯಕ್ಕೆ 1400 ರಿಂದ 1700 ಮೆಟ್ರಿಕ್ ಟನ್‌ಗಳಷ್ಟು ಆಮ್ಲಜನಕದ ಅವಶ್ಯಕತೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಕಳೆದ 7 ದಿನಗಳಲ್ಲಿ ಸರಾಸರಿ 880 ಮೆಟ್ರಿಕ್ ಟನ್‌ನಷ್ಟು ಬಳಕೆ ಆಗುತ್ತಿದೆ. ಅಲ್ಲದೆ, ನಿನ್ನೆ 66.7 (18-05-2021) ಮೆಟ್ರಿಕ್ ಟನ್ ನಷ್ಟು ಕೊರತೆಯೂ ಕಂಡುಬಂದಿದೆ ಎಂದು ಮಾಹಿತಿ ನೀಡಿದರು.

ಆಮ್ಲಜನಕ ಉತ್ಪಾದನಾ ಘಟಕಗಳ ಸ್ಥಾಪನೆ
ರಾಜ್ಯದಲ್ಲಿ ನೈಟ್ರೋಜನ್ ಪಿಎಸ್‌ಎ ಉತ್ಪಾದನಾ ಘಟಕಗಳನ್ನು ಆಮ್ಲಜನಕ ಉತ್ಪಾದನೆಗೆ ಪರಿವರ್ತಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕೋಲಾರ ಮತ್ತು ಯಾದಗಿರಿ ಜಿಲ್ಲೆಯಲ್ಲಿ 1000 ಎಲ್‌ಪಿಎಂ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಪ್ರಾರಂಭಿಸಲಾಗಿದೆ. ಭಾರತ ಸರ್ಕಾರ, ಕರ್ನಾಟಕ ಸರಕಾರ ಮತ್ತು ಸಾರ್ವಜನಿಕ ಉದ್ದಿಮೆಗಳ ಸಹಕಾರದಿಂದ ಒಟ್ಟಾರೆಯಾಗಿ 104 ಆಮ್ಲಜನಕ ಉತ್ಪಾದನಾ ಘಟಕಗಳನ್ನು ಪ್ರಾರಂಭಿಸಲಿದ್ದೇವೆ. ರಾಯಚೂರಿನಲ್ಲಿ ನೈಟ್ರೋಜನ್ ಪಿಎಸ್‌ಎ ಉತ್ಪಾದನಾ ಘಟಕವನ್ನು ಪರಿವರ್ತಿಸಿ ಜಿಲ್ಲಾ ಆಸ್ಪತ್ರೆಗೆ ಅಳವಡಿಸುವ ಕಾರ್ಯ ಅಂತಿಮ ಹಂತದಲ್ಲಿದೆ ಎಂದರು ಹೇಳಿದರು.

ನಿಷ್ಕ್ರಿಯ ಆಮ್ಲಜನಕ ಉತ್ಪಾದನಾ ಘಟಕಗಳ ಪುನರುಜ್ಜೀವನ
ರಾಜ್ಯದಲ್ಲಿ ನಿಷ್ಕ್ರೀಯವಾಗಿರುವ ಆಮ್ಲಜನಕ ಉತ್ಪಾದನಾ ಘಟಕಗಳ ಪುನರುಜ್ಜೀವನ ಕಾರ್ಯವನ್ನು ನಡೆಸಲಾಗುತ್ತಿದೆ. ರಾಯಚೂರಿನ ಕೆಪಿಸಿಎಲ್ ಬಾಟ್ಲಿಂಗ್ ಆಕ್ಸಿಜನ್ ಘಟಕ ಹಾಗೂ ವಿಐಎಸ್‌ಎಲ್ ಗೆ ಅಗತ್ಯವಿರುವ ಕಂಪ್ರೆಸ್ಸರ್ ಖರೀದಿಸುವ ಕೆಲಸವನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಕೇಂದ್ರ ಸರಕಾರದ ವತಿಯಿಂದ ರಾಜ್ಯಕ್ಕೆ 28, ಕರ್ನಾಟಕ ಸರಕಾರ 40, ಎನ್‌ಹೆಚ್‌ಎಐ - ಡಿಆರ್‌ಡಿಓ ಸಹಕಾರದಲ್ಲಿ 26 ಆಕ್ಸಿಜನ್ ಜನರೇಟರ್ ಗಳನ್ನು ರಾಜ್ಯದಲ್ಲಿ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ರಾಜ್ಯಕ್ಕೆ 60 ಸಾವಿರ ಆಕ್ಸಿಜನ್ ಕಾನ್ಸನ್ಟ್ರೇಟರ್‌ಗಳ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ರಾಜ್ಯ ಸರಕಾರ ಈಗಾಗಲೇ 3 ಸಾವಿರ ಕಾನ್ಸನ್ಟ್ರೇಟರ್‌ಗಳ ಖರೀದಿಗೆ ಟೆಂಡರ್ ನೀಡಿದೆ. ಕೇಂದ್ರ ಸರಕಾರ 800 ಕಾನ್ಸನ್ಟ್ರೇಟರ್‌ಗಳನ್ನು ನೀಡಿದ್ದು ಹಂತ ಹಂತವಾಗಿ ನೀಡುವ ನಿರೀಕ್ಷೆ ಇದೆ ಎಂದರು.
Recommended Video
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications