ಗಣರಾಜ್ಯೋತ್ಸವದಲ್ಲಿ ಕರುನಾಡಿನ ಕಡೆಗಣನೆ; ಕರ್ನಾಟಕದ ಟ್ಯಾಬ್ಲೋ ತಿರಸ್ಕರಿಸಿದ ಕೇಂದ್ರ

ಬೆಂಗಳೂರು, ಜನವರಿ 10: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪರೇಡ್​ಗೆ ಪ್ರತಿ ವರ್ಷ ಎಲ್ಲಾ ರಾಜ್ಯಗಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳು ಟ್ಯೋಬ್ಲೋ ಪರಿಕಲ್ಪನೆಯನ್ನು ಕಳುಹಿಸುತ್ತವೆ. ಆಯ್ಕೆ ಸಮಿತಿಯು ಟ್ಯಾಬ್ಲೋಗಳನ್ನು ಆಯ್ಕೆ ಮಾಡುತ್ತದೆ. ಈ ಬಾರಿ ಕರ್ನಾಟಕ ನಾಲ್ಕು ವಿಷಯದ ಮೇಲೆ ಪರಿಕಲ್ಪನೆ ಸಲ್ಲಿಸಲಾಗಿದ್ದು, ಎಲ್ಲವೂ ತಿರಸ್ಕರಿಸಲಾಗಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಈ ಬಾರಿ ಬ್ರಾಂಡ್ ಬೆಂಗಳೂರು, ನಾಲ್ವಡಿ ಕೃಷ್ಣರಾಜ ಒಡೆಯರ್, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ 2 ಮತ್ತು ಬೆಂಗಳೂರು ಅಣ್ಣಮ್ಮ ದೇವಿ ದೇವಸ್ಥಾನದ ಥೀಮ್ ಕಲ್ಪನೆಗಳನ್ನು ಆಯ್ಕೆ ಸಮಿತಿಗೆ ಕಳುಹಿಸಿತ್ತು. ಆದರೆ ಎಲ್ಲಾ ನಾಲ್ಕು ಪರಿಕಲ್ಪನೆಗಳನ್ನು ತಿರಸ್ಕರಿಸಲಾಗಿದೆ ಎಂದು ತಿಳಿದುಬಂದಿದೆ.

Centre rejects Karnataka’s tableau for Republic Day 2024 parade

ಕರ್ನಾಟಕವು ಸತತ 14 ವರ್ಷಗಳಿಂದ ಟ್ಯಾಬ್ಲೋಗಳನ್ನು ಕಳುಹಿಸುತ್ತಿದೆ. ಸತತ 14 ವರ್ಷಗಳಿಂದ ಟ್ಯಾಬ್ಲೋ ವಿಭಾಗದಲ್ಲಿ ಭಾಗವಹಿಸಿದ ದೇಶದ ಏಕೈಕ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. 2023 ರ ಗಣರಾಜ್ಯೋತ್ಸವದ ಪರೇಡ್​ನಲ್ಲಿ ಕರ್ನಾಟಕದ 'ನಾರಿ ಶಕ್ತಿ' ಟ್ಯಾಬ್ಲೋ ಸಾಗಿತ್ತು.

ಟ್ಯಾಬ್ಲೋಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ?

ಕಲೆ, ಸಂಸ್ಕೃತಿ, ಸಂಗೀತ, ಶಿಲ್ಪಕಲೆ, ಚಿತ್ರಕಲೆ, ವಾಸ್ತುಶಿಲ್ಪ, ನೃತ್ಯ ಸಂಯೋಜನೆ, ಇತ್ಯಾದಿ ಸೇರಿದಂತೆ ವಿವಿಧ ವಿಭಾಗಗಳ ಜನರನ್ನು ಒಳಗೊಂಡ ತಜ್ಞರ ಸಮಿತಿಯಿಂದ ಕೋಷ್ಟಕಗಳನ್ನು ಆಯ್ಕೆ ಮಾಡಲಾಗುತ್ತದೆ. ಟ್ಯಾಬ್ಲೋಗಳ ಆಯ್ಕೆಯಲ್ಲಿ ರಕ್ಷಣಾ ಸಚಿವಾಲಯವು ತಜ್ಞರ ಸಮಿತಿಯನ್ನು ನಿರ್ದೇಶಿಸುತ್ತದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಟ್ಯಾಬ್ಲೋಗಳಿಗಾಗಿ ತಮ್ಮ ಆಲೋಚನೆಗಳನ್ನು ಸಲ್ಲಿಸುತ್ತವೆ ಮತ್ತು ತಜ್ಞರ ಸಮಿತಿಯು ಈ ಆಲೋಚನೆಗಳನ್ನು ಮೌಲ್ಯಮಾಪನ ಮಾಡುತ್ತದೆ ಮತ್ತು ಮೆರವಣಿಗೆಗಾಗಿ ಟ್ಯಾಬ್ಲೋಗಳನ್ನು ಆಯ್ಕೆ ಮಾಡುತ್ತದೆ.

ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ.

ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ ಎಂದು ಟ್ವೀಟ್‌ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾಡಿದ್ದಾರೆ.

ನವಕರ್ನಾಟಕದ ಅಭಿವೃದ್ಧಿಯ ದೃಷ್ಠಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್‌, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ದಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಸ್ತಬ್ಧಚಿತ್ರ, ನೆಲದ ರಕ್ಷಣೆಗಾಗಿ ಸರ್ವಸ್ವವನ್ನೂ ತ್ಯಾಗಗೈದ ಅಪ್ರತಿಮ ದೇಶಪ್ರೇಮಿ ರಾಣಿ ಚೆನ್ನಮ್ಮ ಅವರ ಸ್ತಬ್ಧಚಿತ್ರ, ಕರುನಾಡಿನ ಪ್ರಾಕೃತಿಕ ಸೌಂದರ್ಯ ಮತ್ತು ಬ್ರಾಂಡ್ ಬೆಂಗಳೂರು ಹೀಗೆ 4 ಸ್ತಬ್ಧಚಿತ್ರ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರದ ಆಯ್ಕೆ ಸಮಿತಿಯು ನಮ್ಮ ಮನವಿಯನ್ನು ತಿರಸ್ಕರಿಸಿ, ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಕಸಿದುಕೊಂಡಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ತೆರಿಗೆ ಪಾಲಿನಲ್ಲಿ ವಂಚನೆ, ಬರಪರಿಹಾರದಲ್ಲಿ ಅನ್ಯಾಯ, ಕನ್ನಡಿಗರು ಕಟ್ಟಿರುವ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳ ಮಾರಾಟ ಹೀಗೆ ಹೆಜ್ಜೆಹೆಜ್ಜೆಗೂ ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಪ್ರಹಾರ ಮಾಡುತ್ತಿದೆ. ಇದರ ಜೊತೆಗೆ ಈಗ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಅವಕಾಶ ನಿರಾಕರಿಸಿ ನಮ್ಮ ಅಸ್ಮಿತೆಯ ಮೇಲೆ ದಾಳಿಗೆ ಇಳಿದಿದೆ.

ಕನ್ನಡ-ಕನ್ನಡಿಗ ಮತ್ತು ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದಿಂದ ಕನ್ನಡಿಗರು ಈಗಾಗಲೇ ರೋಸಿಹೋಗಿದ್ದಾರೆ. ಅವರ ತಾಳ್ಮೆಯನ್ನು ಪರೀಕ್ಷಿಸಲು ಕೇಂದ್ರ ಸರ್ಕಾರ ಹೋಗಬಾರದು.

ಈಗಲೂ ಕಾಲ ಮಿಂಚಿಲ್ಲ, ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪನ್ನು ತಿದ್ದಿಕೊಂಡು ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಂಡು ದೇಶದ ಹೆಮ್ಮೆಯ ಗಣರಾಜ್ಯೋತ್ಸವ ಪರೇಡ್ ನ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ನಮಗೆ ಅವಕಾಶ ನೀಡಬೇಕು ಎಂದು ಒತ್ತಾಯ ಮಾಡುತ್ತೇನೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+