ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಿಂಗಾಯತ ಪ್ರತ್ಯೇಕ ಧರ್ಮದ ಪ್ರಸ್ತಾವನೆ : ಎಂ.ಬಿ.ಪಾಟೀಲ್ ಹೇಳಿದ್ದೇನು?

|
Google Oneindia Kannada News

ಬೆಂಗಳೂರು, ಡಿಸೆಂಬರ್ 10 : 'ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿಲುವು ಅತಾರ್ಕಿಕವಾಗಿದೆ' ಎಂದು ಮಾಜಿ ಸಚಿವ, ಜಾಗತಿಕ ಲಿಂಗಾಯತ ಮಹಾಸಭಾದ ಮುಖಂಡರಾದ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಎಂ.ಬಿ.ಪಾಟೀಲ್ ಅವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಪ್ರತ್ಯೇಕ ಲಿಂಗಾಯತ ಧರ್ಮ ಶಿಫಾರಸ್ಸು ತಿರಸ್ಕಾರ, ಹೈಕೋರ್ಟಿಗೆ ಮಾಹಿತಿಪ್ರತ್ಯೇಕ ಲಿಂಗಾಯತ ಧರ್ಮ ಶಿಫಾರಸ್ಸು ತಿರಸ್ಕಾರ, ಹೈಕೋರ್ಟಿಗೆ ಮಾಹಿತಿ

'ಕೇಂದ್ರ ಸರ್ಕಾರ ಹೇಳಿರುವಂತೆ 1871ರ ಜನಗಣತಿ ವೇಳೆ ಲಿಂಗಾಯತರು ಹಿಂದೂ ಧರ್ಮದ ಭಾಗವಾಗಿರಲಿಲ್ಲ. ಆಗ ಲಿಂಗಾಯತ, ಸ್ವತಂತ್ರ ಧರ್ಮದ ಮಾನ್ಯತೆ ಹೊಂದಿತ್ತು. ಎಂಬುದು ಗಮನಾರ್ಹ' ಎಂದು ಪಾಟೀಲ ಸ್ಪಷ್ಟಪಡಿಸಿದರು.

Centre stand baseless in separate religion tag for lingayat says MB Patil

'ಪ್ರತ್ಯೇಕ ಧರ್ಮದ ಮಾನ್ಯತೆ ನೀಡಿದರೆ ಲಿಂಗಾಯತ-ವೀರಶೈವರಲ್ಲಿ ಈಗಾಗಲೇ ಪರಿಶಿಷ್ಟ ಜಾತಿ ಸೌಲಭ್ಯ ಪಡೆಯುತ್ತಿರುವವರು ಅದರಿಂದ ವಂಚಿತರಾಗುತ್ತಾರೆ ಎಂಬುದು ಸುಳ್ಳು. ಈಗಾಗಲೇ ಈ ವಿಷಯದ ಬಗ್ಗೆ ಸಿಖ್ ಮತ್ತು ಜೈನ ಧರ್ಮಗಳಿಗೆ ಪ್ರತ್ಯೇಕ ಧರ್ಮ ಮಾನ್ಯತೆ ನೀಡುವಾಗ ಯುಕ್ತಾಯುಕ್ತಾ ರೀತಿಯಲ್ಲಿ ಪರಿಗಣಿಸಿ ನಿರ್ಧಾರ ಕೈಗೊಳ್ಳಲಾಗಿದೆ' ಎಂದರು.

ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆ ತಿರಸ್ಕಾರ : ಯಾರು, ಏನು ಹೇಳಿದರು?ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆ ತಿರಸ್ಕಾರ : ಯಾರು, ಏನು ಹೇಳಿದರು?

'ಕೇಂದ್ರದ ನಿಲುವಿನಿಂದ ಬಸವ ಮತ್ತು ಲಿಂಗಾಯತ ಧರ್ಮದ ಅನುಯಾಯಿಗಳು ಆತಂಕಪಡುವ ಅಗತ್ಯವಿಲ್ಲ. ಲಿಂಗಾಯತ ಧರ್ಮ ಅಂದು, ಇಂದು ಮತ್ತು ಎದೆಂದಿಗೂ ಸ್ವತಂತ್ರ ಧರ್ಮ. ಆದ್ದರಿಂದ ಲಿಂಗಾಯತರು ಈ ಸಂದರ್ಭದಲ್ಲಿ ಸಂಯಮ ಮತ್ತು ಘನತೆಯಿಂದ ವರ್ತಿಸಬೇಕು. ಶಾಂತಿ ಕಾಪಾಡಬೇಕು' ಎಂದು ಮನವಿ ಮಾಡಿದ್ದಾರೆ.

'ಮುಂದಿನ ನಡೆಯನ್ನು ಲಿಂಗಾಯತ ಮಹಾಸಭಾದ ಪದಾಧಿಕಾರಿಗಳು, ಕಾನೂನು ತಜ್ಞರು, ಮಠಾಧೀಶರು ಮತ್ತು ಸಮಾಜದ ಹಿರಿಯರ ಜೊತೆ ಚರ್ಚಿಸಿ ತೀರ್ಮಾನಿಸಲಾಗುತ್ತದೆ' ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

English summary
Central government denied the Karnataka Government proposal of Separate religion tag for Lingayat. Centre stand baseless in this issue said Former minister M.B.Patil.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X