ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳಲ್ಲಿ ಮಿಂಚಿನ ನೋಂದಣಿ

|
Google Oneindia Kannada News

ಬೆಂಗಳೂರು, ಏಪ್ರಿಲ್ 03: ಬಿಬಿಎಂಪಿಯು ಚುನಾವಣಾ ಆಯೋಗದ ನಿರ್ದೇಶನದಂತೆ ಏ.8ರಂದು ನಗರದ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲಿನ ಮತಗಟ್ಟೆಗಳಲ್ಲಿ ಮಿಂಚಿನ ನೋಂದಣಿ ಕಾರ್ಯಕ್ರಮವನ್ನು ಆಯೋಜಿಸಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಏ.14ರವರೆಗೆ ಕಾಲಾವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಏ.8 ರಂದು ಮಿಂಚಿನ ನೋಂದಣಿ ಕಾರ್ಯಕ್ರಮದ ಮೂಲಕ ಸಾರ್ವಜನಿಕರಿಗೆ ಹೆಸರು ಸೇರ್ಪಡೆ, ವರ್ಗಾವಣೆ ಮತ್ತು ತಿದ್ದುಪಡಿಗೆ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ.

ವೋಟರ್ ಐಡಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿವೋಟರ್ ಐಡಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಜನರು ಅಗತ್ಯ ದಾಖಲೆಗಳೊಂದಿಗೆ ತಮ್ಮ ವ್ಯಾಪ್ತಿಯ ಮತಗಟ್ಟೆಗಳಿಗೆ ತೆರಳಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮತ್ತು ವರ್ಗಾವಣೆ ಅರ್ಜಿ ಸಲ್ಲಿಸಬಹುದಾಗಿದೆ.

ಮತಪಟ್ಟಿಗೆ ಹೆಸರು ನೋಂದಾವಣೆ ಹೇಗೆ ಗೊತ್ತಾ?ಮತಪಟ್ಟಿಗೆ ಹೆಸರು ನೋಂದಾವಣೆ ಹೇಗೆ ಗೊತ್ತಾ?

CEO to conduct special drive to enhance voters list

ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ 8728 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. ಇದಲ್ಲದೇ 1400ಕ್ಕಿಂತ ಹೆಚ್ಚು ಮತದಾರರಿರುವ ಕಡೆ 806 ಮತಗಟ್ಟೆಗಳನ್ನು ತೆರೆಯಲಾಗುತ್ತಿದೆ. ಈ ಎಲ್ಲ ಮತಗಟ್ಟೆಗಳಲ್ಲಿ ಏ.8ರಂದು ಮಿಂಚಿನ ನೋಂದಣಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

ಮತದಾರರ ಗುರುತಿನ ಚೀಟಿ ಕಳೆದು ಹೋದ್ರೇ ಏನ್ಮಾಡ್ಬೇಕು?ಮತದಾರರ ಗುರುತಿನ ಚೀಟಿ ಕಳೆದು ಹೋದ್ರೇ ಏನ್ಮಾಡ್ಬೇಕು?

ಬೆಳಗ್ಗೆ 10ರಿಂದ ಸಂಜೆ 5ರವರೆಗೆ ತೆರೆದಿರಲಿವೆ. ನಗರದ 28ಕ್ಷೇತ್ರಗಳಲ್ಲಿ ಈವರೆಗೆ 87,98,335 ಮಂದಿ ಮತದಾರರು ನೋಂದಣಿಯಾಗಿದ್ದಾರೆ. ಈ ಪೈಕಿ 46,04, 190 ಪುರುಷರು ಮತ್ತು 41,92,706 ಮಂದಿ ಮಹಿಳಾ ಮತದಾರರಿದ್ದಾರೆ. ಈ ಬಾರಿ 3,16,467 ಮಂದಿ ಹೊಸದಾಗಿ ಮತದಾರರ ಪಟ್ಟಿ ಸೇರಿದ್ದಾರೆ.

English summary
The Chief electoral office is conducting a special drive on April 8 at all polling stations across the state where eligible voters who do not have their name enrolled or want to apply for address change can apply.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X